AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಯುವತಿ ಮೇಲೆ ಸಮೂಹಿಕ ಅತ್ಯಾಚಾರ: 24 ಗಂಟೆಗಳಲ್ಲಿ ಮೂವರ ಬಂಧನ

ಕೆಲಸಕ್ಕೆಂದು ಮಂಗಳೂರಿಗೆ ಬಂದಿದ್ದ ಹೊರ ರಾಜ್ಯದ ಯುವತಿ ಮೇಲೆ ಅತ್ಯಾಚಾರ ಆರೋಪ: ಮೂವರು ಅರೆಸ್ಟ್ ಮಂಗಳೂರು ಹೊರವಲಯದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಹೊರ ರಾಜ್ಯದ ಯುವತಿ ಪತ್ತೆಯಾದ ಪ್ರಕರಣದ ತನಿಖೆಯನ್ನು ಉಳ್ಳಾಲ ಠಾಣೆ ಪೊಲೀಸರು ನಡೆಸುತ್ತಿದ್ದಾರೆ. ಮಂಗಳೂರು ಹೊರವಲಯದಲ್ಲಿ ಪತ್ತೆಯಾದ ಯುವತಿ ಪಶ್ಚಿಮ ಬಂಗಾಳ ಮೂಲದವರು ಎಂದು ತಿಳಿದುಬಂದಿದೆ. ಹಾಗಿದ್ದರೆ, ಯುವತಿ ಮಂಗಳೂರಿಗೆ ಬಂದಿದ್ದು ಏಕೆ? ಯುವತಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿದೆಯಾ?

ಮಂಗಳೂರಿನಲ್ಲಿ ಯುವತಿ ಮೇಲೆ ಸಮೂಹಿಕ ಅತ್ಯಾಚಾರ: 24 ಗಂಟೆಗಳಲ್ಲಿ ಮೂವರ ಬಂಧನ
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Apr 17, 2025 | 9:10 PM

Share

ಮಂಗಳೂರು, ಏಪ್ರಿಲ್​ 17: ಮಂಗಳೂರು (Mangaluru) ಹೊರವಲಯದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಉಳ್ಳಾಲ ಪೊಲೀಸರು (Ullal Police) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ ಮತ್ತು ಕುಂಪಲದ ಮಿಥುನ್(30) ಬಂಧಿತ ಆರೋಪಿಗಳು.

ತನ್ನ ಸಾಮೂಹಿಕವಾಗಿ ಅಚ್ಯಾಚಾರ ಎಸಗಲಾಗಿದೆ ಎಂಬ ಯುವತಿ ಹೇಳಿಕೆ ನೀಡಿದ್ದಾರೆ. ಆದರೆ, ವೈದ್ಯಕೀಯ ವರದಿ ಬಂದ ಬಳಿಕ ಯುವತಿ ಮೇಲೆ ಅತ್ಯಾಚಾರ ಎಸಗಲಾಗಿದೆಯೋ ಅಥವಾ ಇಲ್ಲವೋ ಎಂಬುವುದು ತಿಳಿಯಲಿದೆ. ಮಂಗಳೂರಿನಲ್ಲಿ ಪರಿಚಯವಾದ ಆಟೋ ಚಾಲಕ ಮತ್ತು ಆತನ ಸ್ನೇಹಿತರು ಅತ್ಯಾಚಾರ ಮಾಡಿದ್ದಾರೆ ಎಂದು ಯುವತಿ ಪೊಲೀಸರ ಮುಂದೆ ಹೇಳಿದ್ದಾರೆ. ಪ್ರಕರಣದ ತನಿಖೆಯನ್ನು ಉಳ್ಳಾಲ ಪೊಲೀಸರು ಮುಂದುವರೆಸಿದ್ದಾರೆ.

ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿ, “ಬುಧವಾರ (ಏ.16) ರಾತ್ರಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ. ಮಧ್ಯರಾತ್ರಿ 1.30ರ ಸುಮಾರಿಗೆ 112ಗೆ ಯುವತಿಯೊಬ್ಬಳು ಕೂಗಾಡುತ್ತಿದ್ದಾಳೆ, ಆಕೆಗೆ ಹಲ್ಲೆ ಮಾಡಿದ್ದಾರೆ ಎಂದು ಕರೆ ಬಂದಿತ್ತು. ತಕ್ಷಣ ನಮ್ಮ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಯುವತಿಯನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಯುವತಿ ಮಾತನಾಡುವ ಸ್ಥಿತಿಯಲ್ಲಿರದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯ ಹೇಳಿಕೆ ಪ್ರಕಾರ ಬುಧವಾರ ರಾತ್ರಿ ಯಾರೋ ಅವರಿಗೆ ಮದ್ಯಪಾನ ಮಾಡಿಸಿದ್ದಾರೆ. ಕಾರಿನಲ್ಲಿ ಮೂವರು ಇದ್ದಿದ್ದಾಗಿ ಯುವತಿ ಹೇಳಿಕೆ ನೀಡಿದ್ದಾರೆ. ಯುವತಿಗೆ ಪ್ರಜ್ಞೆ ಬಂದ ಬಳಿಕ ಒಳ ಉಡುಪು ಇರಲಿಲ್ಲ ಅಂತ ಹೇಳಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ
Image
ಕುಕ್ಕೆ ಸುಬ್ರಹ್ಮಣ್ಯ ಆದಾಯದಲ್ಲಿ ಭಾರಿ ಏರಿಕೆ: ವಾರ್ಷಿಕ ಆದಾಯ 155.95 ಕೋಟಿ
Image
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ನಾಲ್ವರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ
Image
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
Image
ಕಾರಿನ ಟಾಪ್ ಮೇಲೆ ಕುಳಿತು ಹುಚ್ಚಾಟ: ಸ್ವಲ್ಪ ಹೆಚ್ಚು ಕಡಿಮೆ ಆದ್ರು ಯಮನಪಾದ!

“ಕೂಗಾಡಲು ಶುರು ಮಾಡಿದಾಗ ಆರೋಪಿಗಳು ಯುವತಿಯನ್ನು ಕೃತ್ಯ ನಡೆದ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಸ್ಥಳೀಯರ ಸಹಾಯದೊಂದಿಗೆ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಯುವತಿ ದೂರಿನ ಆಧಾರದ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದೇವೆ” ಎಂದರು.

ಸ್ನೇಹಿತನ ಜೊತೆಗೆ ಮಂಗಳೂರಿಗೆ ಬಂದಿದ್ದ ಯುವತಿ

“ಯುವತಿ ಪಶ್ಚಿಮ ಬಂಗಾಳದ ಕುಚ್ ಬಿಹಾರ್ ಮೂಲದವರು. ಕೇರಳದ ಫ್ಲೈವುಡ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನಲ್ಲಿ ಬೇರೆ ಸಂಸ್ಥೆಯಲ್ಲಿ ಕೆಲಸದ ಅವಕಾಶವಿದ್ದ ಕಾರಣ, ತನ್ನ ಗೆಳೆಯನ ಜೊತೆ ಬುಧವಾರ ಮಂಗಳೂರಿಗೆ ಬಂದಿದ್ದಾರೆ. ಈ ವೇಳೆ, ಯುವತಿ ಮತ್ತು ಆಕೆಯ ಸ್ನೇಹಿತನ ನಡುವೆ ಜಗಳವಾಗಿದೆ. ಆಗ, ಸ್ನೇಹಿತ ಯುವತಿ ಮೊಬೈಲ್​ಗೆ ಹಾನಿ ಮಾಡಿದ್ದಾನೆ” ಎಂದರು.

“ನಂತರ, ಮೊಬೈಲ್ ರಿಪೇರಿಗೆಂದು ಆಟೋದಲ್ಲಿ ಅಂಗಡಿಗೆ ತೆರಳಿದ್ದಾರೆ. 5-6 ಗಂಟೆಗಳ ಕಾಲ ಯುವತಿ ಆಟೋ ಡ್ರೈವರ್ ಜೊತೆಗೆ ಇದ್ದರು. ಈ ವೇಳೆ, ಸ್ನೇಹ ಬೆಳೆದು ಆಟೋ ಚಾಲಕ ಯುವತಿಯ ಮೊಬೈಲ್ ರಿಪೇರಿಗೂ ಹಣ ಪಾವತಿಸಿದ್ದಾನೆ. ಪಶ್ಚಿಮ ಬಂಗಾಳಕ್ಕೆ ಹೋಗಲು ರೈಲ್ವೆ ನಿಲ್ದಾಣಕ್ಕೆ ಬಿಡಲು ಆಟೋ ಚಾಲಕನಿಗೆ ಯುವತಿ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಯುವತಿ ಪತ್ತೆ: ಗ್ಯಾಂಗ್​ ರೇಪ್​ ಶಂಕೆ

“ಆದರೆ ಆಟೋ ಚಾಲಕ ಕಂಕನಾಡಿ ರೈಲ್ವೆ ನಿಲ್ದಾಣಕ್ಕೆ ಹೋಗದೇ, ಮತ್ತಿಬ್ಬರ ಗೆಳೆಯರನ್ನು ಕರೆಸಿ ಬೇರೊಂದು ಜಾಗಕ್ಕೆ ಯುವತಿಯನ್ನು ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ಯುವತಿಗೆ ಚೆನ್ನಾಗಿ ಮದ್ಯಪಾನ ಮಾಡಿಸಿದ್ದಾರೆ, ಆಕೆಯ ಪ್ರಜ್ಞೆ ತಪ್ಪಿದೆ. ಪ್ರಜ್ಞೆ ಬಂದಾಗ ಅತ್ಯಾಚಾರ ನಡೆದಿರುವುದು ಯುವತಿಯ ಗಮನಕ್ಕೆ ಬಂದಿದೆ. ಯುವತಿ ತನ್ನ ಹೇಳಿಕೆಯಲ್ಲಿ ಅತ್ಯಾಚಾರ ಆಗಿರುವುದಾಗಿ ಹೇಳಿದ್ದಾರೆ. ವೈದ್ಯಕೀಯ ವರದಿ ಬಂದ ಬಳಿಕ ಇದನ್ನು ದೃಢಪಡಿಸಲಾಗುವುದು” ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್