ಪ್ರತೀಕಾರಕ್ಕೆ ಮತ್ತೊಂದು ಜೀವ ಬಲಿ: ಮಂಗಳೂರಿನ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

| Updated By: ಆಯೇಷಾ ಬಾನು

Updated on: Jul 28, 2022 | 10:22 PM

ಮಂಗಳೂರು ನಗರದ ಸುರತ್ಕಲ್​, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಪ್ರತೀಕಾರಕ್ಕೆ ಮತ್ತೊಂದು ಜೀವ ಬಲಿ: ಮಂಗಳೂರಿನ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್
Follow us on

ಮಂಗಳೂರು: ಪ್ರವೀಣ್ ನೆಟ್ಟಾರ(Praveen Nettar) ಹತ್ಯೆ ಬೆನ್ನಲ್ಲೇ ಮತ್ತೊಬ್ಬರ ಬರ್ಬರ ಕೊಲೆಯಾಗಿದೆ(Murder). ಗುರುವಾರ ರಾತ್ರಿ 8 ಗಂಟೆಗೆ ಸುರತ್ಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾಜಿಲ್​ ಮಂಗಲಪೇಟೆ(23) ಎಂಬ ಯುವಕನನ್ನು ಕೊಲೆ ಮಾಡಲಾಗಿದೆ. ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್​ನ ಎಸ್.ಕೆ.ಮೊಬೈಲ್ಸ್​ ಅಂಗಡಿ ಬಳಿ ಮೂವರು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಫಾಜಿಲ್​ನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಘಟನೆ ಹಿನ್ನೆಲೆ ಮಂಗಳೂರಿನ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮಂಗಳೂರು ನಗರದ ಸುರತ್ಕಲ್​, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಶನಿವಾರ ಬೆಳಗ್ಗೆವರೆಗೂ 4 ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್‌ ಜಾರಿಯಲ್ಲಿರಲಿದೆ. ನಿಷೇಧಾಜ್ಞೆ ಜಾರಿ ಪ್ರದೇಶದಲ್ಲಿ ಮದ್ಯದಂಗಡಿ ಸಹ ಬಂದ್‌ ಆಗಿರಲಿದೆ. ಇನ್ನು ಮುನ್ನೆಚ್ಚರಿಕೆಯಿಂದ ಸುರತ್ಕಲ್‌ನಲ್ಲಿ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಮಂಗಳೂರಿನ ಸುರತ್ಕಲ್‌ಗೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಕೊಲೆ ಸಂಬಂಧ ಯಾರೂ ವದಂತಿಗಳಿಗೆ ಕಿವಿಗೊಡಬಾರದು

ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ಹಿನ್ನೆಲೆ ಘಟನಾ ಸ್ಥಳಕ್ಕೆ ಬಂದ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಫಾಜಿಲ್ ಹತ್ಯೆಗೆ ನಿಖರವಾದ ಕಾರಣ ಗೊತ್ತಿಲ್ಲ. ಫಾಜಿಲ್ ಕೊಲೆ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದೇವೆ. ಕೊಲೆ ಸಂಬಂಧ ಯಾರೂ ವದಂತಿಗಳಿಗೆ ಕಿವಿಗೊಡಬಾರದು. ಯಾರೂ ಶಾಂತಿ ಕದಡುವ ಪ್ರಯತ್ನ ನಡೆಸಬಾರದು ಎಂದರು.

ಇದು ಮೊನ್ನೆಯ ಕೊಲೆಗೆ ಪ್ರತಿಕಾರದಂತೆ ಕಾಣುತ್ತಿದೆ

ಮಾಜಿ ಶಾಸಕ ಮೊಯಿದ್ದಿನ್ ಭಾವಾ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಟಿವಿ9 ಜೊತೆ ಮಾತನಾಡಿದ್ದು, ಇದು ಮೊನ್ನೆಯ ಕೊಲೆಗೆ ಪ್ರತಿಕಾರದಂತೆ ಕಾಣುತ್ತಿದೆ. ಪ್ರವೀಣ್ ಕೊಲೆಗೆ ಈ ಕೊಲೆಯು ಪ್ರತಿಕಾರದಂತಿದೆ ಎಂದರು.

Published On - 10:03 pm, Thu, 28 July 22