Whats App ಮೂಲಕ ಬಡ ಕುಟುಂಬಕ್ಕೆ ಸೂರು ನಿರ್ಮಿಸಿದ ಯುವಕರು

ಮಂಗಳೂರು: ಲಾಕ್​ಡೌನ್ ಸಮಯದಲ್ಲಿ ಎಲ್ಲರೂ ಮನೆಯೊಳಗಿದ್ದು ಆರೋಗ್ಯ ಮತ್ತು ಭವಿಷ್ಯದ ಚಿಂತೆಯಲ್ಲಿದ್ರೆ ಅಲ್ಲೊಂದು ಯುವಕರ ಗುಂಪು ಮತ್ತೊಬ್ಬರ ಬದುಕು ಕಟ್ಟುವ ಕೆಲಸ ಮಾಡಿದೆ. ಹೌದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಚೆನ್ನಾವರ ಅಭ್ಯುದಯ ಯುವಕ ಮಂಡಲ ಮತ್ತು ಮಂಜುನಾಥನಗರ ವಿವೇಕಾನಂದ ಯುವಕ ಮಂಡಲ ವಾಟ್ಸಪ್ ಗ್ರೂಪ್ ರಚಿಸಿದೆ. ಇವರು ದಾನಿಗಳ ನೆರವಿನ ಜೊತೆಗೆ ಶ್ರಮದಾನದ ಮೂಲಕ ಬಡ ಕುಟುಂಬವೊಂದಕ್ಕೆ ಮನೆ ಕಟ್ಟಿ ಮಾದರಿಯಾಗಿದ್ದಾರೆ. 2.5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ […]

Whats App ಮೂಲಕ ಬಡ ಕುಟುಂಬಕ್ಕೆ ಸೂರು ನಿರ್ಮಿಸಿದ ಯುವಕರು
Follow us
ಸಾಧು ಶ್ರೀನಾಥ್​
|

Updated on: May 26, 2020 | 3:48 PM

ಮಂಗಳೂರು: ಲಾಕ್​ಡೌನ್ ಸಮಯದಲ್ಲಿ ಎಲ್ಲರೂ ಮನೆಯೊಳಗಿದ್ದು ಆರೋಗ್ಯ ಮತ್ತು ಭವಿಷ್ಯದ ಚಿಂತೆಯಲ್ಲಿದ್ರೆ ಅಲ್ಲೊಂದು ಯುವಕರ ಗುಂಪು ಮತ್ತೊಬ್ಬರ ಬದುಕು ಕಟ್ಟುವ ಕೆಲಸ ಮಾಡಿದೆ. ಹೌದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಚೆನ್ನಾವರ ಅಭ್ಯುದಯ ಯುವಕ ಮಂಡಲ ಮತ್ತು ಮಂಜುನಾಥನಗರ ವಿವೇಕಾನಂದ ಯುವಕ ಮಂಡಲ ವಾಟ್ಸಪ್ ಗ್ರೂಪ್ ರಚಿಸಿದೆ. ಇವರು ದಾನಿಗಳ ನೆರವಿನ ಜೊತೆಗೆ ಶ್ರಮದಾನದ ಮೂಲಕ ಬಡ ಕುಟುಂಬವೊಂದಕ್ಕೆ ಮನೆ ಕಟ್ಟಿ ಮಾದರಿಯಾಗಿದ್ದಾರೆ.

2.5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಈ ಎರಡು ಯುವಕ ಮಂಡಲದ ಸದಸ್ಯರು ಶ್ರಮದಾನ ನಡೆಸುವ ಮೂಲಕ ಅಸಹಾಯಕ ಕುಟುಂಬವೊಂದಕ್ಕೆ ಆಸರೆಯಾಗಿ ಸುಮಾರು 2.5 ಲಕ್ಷ ರೂ. ವೆಚ್ಚದಲ್ಲಿ ಮನೆಯೊಂದನ್ನು ನಿರ್ಮಿಸಿ ಹಸ್ತಾಂತರಿಸಲು ಸಿದ್ಧತೆ ನಡೆಸಿದ್ದಾರೆ. ಸವಣೂರು ಗ್ರಾಮ ಪಂಚಾಯತ್‌ನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕದ ಮಾಣಿ ಎಂಬವರ ಮಗಳು ಸುಂದರಿ ಅವರು ತನ್ನ ಮಕ್ಕಳಾದ ಆಶಾ, ಧನ್ವಿ, ಸನತ್ ಜತೆ ಸಣ್ಣ ಟರ್ಪಾಲ್ ಕಟ್ಟಿದ ಜೋಪಡಿಯಲ್ಲಿ ವಾಸವಾಗಿದ್ದಾರೆ. ಕಟ್ಟಿಗೆ ದಾಸ್ತಾನಿನಂತಿರುವ ಸಣ್ಣ ಮನೆ, ಅಡುಗೆ ಕೋಣೆಯಿಂದ ಹಿಡಿದು ಎಲ್ಲವೂ ಅದರಲ್ಲಿಯೇ ನಡೆಯಬೇಕು.

ಮಳೆ ಬಂದರೆ ಸೋರುವ ಮೇಲ್ಛಾವಣಿ, ಭದ್ರತೆ ಇಲ್ಲವೇ ಇಲ್ಲದಂತಹ ಅಸಹಾಯಕ ಸ್ಥಿತಿಯಲ್ಲಿಯೇ ಜೀವನ ಕಳೆಯುತ್ತಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಇಲ್ಲಿನ ಯುವಕ ಮಂಡಲ ಹಾಗೂ ಸೇವಾ ಭಾರತಿ ವತಿಯಿಂದ ಆಹಾರದ ಕಿಟ್ ಕೊಡುವ ಸಂದರ್ಭದಲ್ಲಿ ಇವರ ದಯನೀಯ ಸ್ಥಿತಿ ಕಂಡು, ಈ ಮಳೆಗಾಲದಲ್ಲಿ ಈ ಮನೆಯಲ್ಲಿರುವುದು ಕಷ್ಟಕರ ಎಂಬುದನ್ನು ಅರಿತು ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದರು.

ಕಟ್ಟೋಣ ಬಾಳಿಗೊಂದು ಸೂರು ಇವರ ಮನೆಯ ದಾಖಲೆ ಪತ್ರಗಳು ಸರಿಯಿಲ್ಲದ ಕಾರಣ ಸರ್ಕಾರದ ನಿವೇಶನವೂ ದೊರಕಿರಲಿಲ್ಲ. ಇದಕ್ಕಾಗಿ ವಾಟ್ಸಾಪ್​ನಲ್ಲಿ ಕಟ್ಟೋಣ ಬಾಳಿಗೊಂದು ಸೂರು ಎಂಬ ಗುಂಪು ರಚಿಸಿದ್ದಾರೆ. ದಾನಿಗಳನ್ನು, ಯುವಕ ಮಂಡಲಗಳ ಸದಸ್ಯರನ್ನು ಸೇರಿಸಿ ಕಾರ್ಯೋನ್ಮುಖರಾಗಿದ್ದಾರೆ. ಇದೀಗ ಮನೆ ನಿರ್ಮಾಣದ ಕಾರ್ಯ ಮುಕ್ತಾಯ ಹಂತಕ್ಕೆ ತಲುಪಿದೆ.

ಗ್ರಾಮ ಪಂಚಾಯತ್​ನ ಕುಡಿಯುವ ನೀರಿನ ಸಂಪರ್ಕ ಬಿಟ್ಟರೆ ಬೇರೆ ಯಾವುದೇ ನೀರಿನಾಶ್ರಯ ಇಲ್ಲದಿರುವುದರಿಂದ ಪುತ್ತೂರು ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ‌ ನವೀನ್ ಭಂಡಾರಿ ಅವರು ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಬಾವಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದರು. ಜೂನ್ 5 ರೊಳಗೆ ಮನೆ ನಿರ್ಮಾಣ ಪೂರ್ಣಗೊಳಿಸಿ‌ ಕುಟುಂಬಕ್ಕೆ ಹಸ್ತಾಂತರ ಮಾಡುವ ಇರಾದೆ ಈ ತಂಡಕ್ಕೆ ಇದೆ.

ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಸಮೀಪದಲ್ಲಿ ನಿರ್ಗತಿಕ ಕುಟುಂಬವೊಂದಕ್ಕೆ ಸವಣೂರು ಗ್ರಾ.ಪಂ ಅಧ್ಯಕ್ಷೆ ಬಿ.ಕೆ.ಇಂದಿರಾ, ಸದಸ್ಯ ಸತೀಶ್ ಅಂಗಡಿಮೂಲೆ, ಸಾಮಾಜಿಕ ಕಾರ್ಯಕರ್ತ, ವಿದ್ಯುತ್ ಗುತ್ತಿಗೆದಾರ ಸುಬ್ರಾಯ ಗೌಡ ಅವರ ನೇತೃತ್ವದಲ್ಲಿ ಚೆನ್ನಾವರ ಅಭ್ಯುದಯ ಯುವಕ ಮಂಡಲ ಮತ್ತು ಮಂಜುನಾಥನಗರ ವಿವೇಕಾನಂದ ಯುವಕ ಮಂಡಲ ಇದರ ಸಹಭಾಗಿತ್ವದಲ್ಲಿ ಮನೆ ನಿರ್ಮಾಣ ಮಾಡುವ ಮೂಲಕ ಮಾದರಿ ಕಾರ್ಯ ಮಾಡಿದ್ದಾರೆ.

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್