ಬೆಂಗಳೂರಿನಿಂದ ಕೂಗಳತೆ ದೂರದಲ್ಲೇ ಅಸ್ಪೃಶ್ಯತೆ: ದಲಿತರಿಗೆ ದೇಗುಲ ಪ್ರವೇಶ ನಿರಾಕರಣೆ

ದೀಪಾವಳಿಯಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಲ್ಲಾತಹಳ್ಳಿಯ ದೇವಸ್ಥಾನದಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಲಾಗಿದೆ. ಇದರಿಂದಾಗಿ ದಲಿತರು ಮತ್ತು ಸವರ್ಣೀಯರ ನಡುವೆ ವಾಗ್ವಾದ ಉಂಟಾಗಿ ಘಟನೆ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಸದ್ಯ ಎರಡೂ ಗುಂಪುಗಳ ಮುಖಂಡರ ನಡುವೆ ರಾಜಿ ಸಂಧಾನ ಮಾಡಲಾಗಿದೆ.

ಬೆಂಗಳೂರಿನಿಂದ ಕೂಗಳತೆ ದೂರದಲ್ಲೇ ಅಸ್ಪೃಶ್ಯತೆ: ದಲಿತರಿಗೆ ದೇಗುಲ ಪ್ರವೇಶ ನಿರಾಕರಣೆ
ಬೆಂಗಳೂರಿನಿಂದ ಕೂಗಳತೆ ದೂರದಲ್ಲೇ ಅಸ್ಪೃಶ್ಯತೆ: ದಲಿತರಿಗೆ ದೇಗುಲ ಪ್ರವೇಶ ನಿರಾಕರಣೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Nov 03, 2024 | 5:40 PM

ದೇವನಹಳ್ಳಿ, ನವೆಂಬರ್ 03: ಡಿಜಿಟಲ್​ ಯುಗದಲ್ಲೂ ಕರ್ನಾಟಕದ ಹಲವಾರು ಭಾಗಗಳಲ್ಲಿ ಅಸ್ಪೃಶ್ಯತೆ (untouchability) ಇನ್ನೂ ಪ್ರಚಲಿತದಲ್ಲಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲೇ ಅಸ್ಪೃಶ್ಯತೆ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮಲ್ಲಾತಹಳ್ಳಿಯ ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶ ನಿರಾಕರಣೆ ಆರೋಪ ಕೇಳಿಬಂದಿದೆ.

ದಲಿತರು ಮತ್ತು ಸವರ್ಣೀಯರ ಗುಂಪುಗಳ ನಡುವೆ ವಾಗ್ವಾದ

ದೀಪಾವಳಿ ಹಬ್ಬ ಹಿನ್ನೆಲೆ ನ.1ರಂದು ಗ್ರಾಮದ ಸರ್ವಣೀಯರು, ದಲಿತರು ಸೇರಿ ಕಲ್ಯಾಣೋತ್ಸವ ಆಯೋಜನೆ ಮಾಡಿದ್ದಾರೆ. ಈ ವೇಳೆ ದಲಿತರನ್ನು ದೇವಸ್ಥಾನದ ಒಳಗೆ ಬಿಡದೆ ಹೊರಗೆ ಕೂರಿಸಿ ಪೂಜೆ ಮಾಡಲಾಗಿದೆ. ಇದೇ ವಿಚಾರವಾಗಿ ದಲಿತರು ಮತ್ತು ಸವರ್ಣೀಯರ ಗುಂಪುಗಳ ನಡುವೆ ವಾಗ್ವಾದ ಉಂಟಾಗಿದೆ.

ಇದನ್ನೂ ಓದಿ: ಕೊಪ್ಪಳ: ಅಸ್ಪೃಶ್ಯತೆ ನಿವಾರಣೆಗೆ ಹೊಸ ಆಂದೋಲನ; ದೇವಸ್ಥಾನ ಪ್ರವೇಶಿಸಿದ ದಲಿತ ಬಾಲಕನ ಹೆಸರಿನಲ್ಲೇ ನೂತನ ಯೋಜನೆ ಆರಂಭ

ವಾಗ್ವಾದ ಉಂಟಾದ ಹಿನ್ನೆಲೆ ಘಟನೆ ಠಾಣೆ ಮೆಟ್ಟಿಲೇರಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, 2 ಸಮುದಾಯದ ಮುಖಂಡರ ನಡುವೆ ಪೊಲೀಸರಿಂದ ರಾಜಿ ಸಂಧಾನ ಮಾಡಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ‌

ಧಾರವಾಡ: ಜಿಲ್ಲೆಯ ರೊಟ್ಟಿಗವಾಡ ಗ್ರಾಮವೊಂದರಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿತ್ತು. ಗ್ರಾಮದ ದಲಿತರಿಗೆ ಅಘೋಷಿತ‌ ಬಹಿಷ್ಕಾರ ಹಾಕಲಾಗಿತ್ತು. ಜೊತೆಗೆ ಹೋಟೆಲ್, ಕಟಿಂಗ್, ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶವಿರಲಿಲ್ಲ. ಅನಿಷ್ಟ ಪದ್ದತಿಯ ವಿರುದ್ದ ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವದೂ ಪ್ರಯೋಜನವಾಗಿಲ್ಲವಂತೆ. ಇದು ಆ ಗ್ರಾಮದ ಯುವಕರನ್ನ ಕೆರಳಿಸಿದ್ದು, ನಮಗೂ ಸಮಾನತೆ ಬೇಕು ಎನ್ನುತ್ತಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ, ದಲಿತ ಕುಟುಂಬಕ್ಕೆ ದಂಡ ಹಾಕಿ ಬಹಿಷ್ಕಾರದ ಬೆದರಿಕೆ..!

ರೊಟ್ಟಿಗವಾಡ ಗ್ರಾಮದ ಹೋಟೆಲ್, ದೇವಸ್ಥಾನ, ಕಟಿಂಗ್ ಶಾಪ್​ಗಳಿಗೆ ಪ್ರವೇಶ ಇಲ್ಲ. ಅದರಲ್ಲೂ ಹೋಟೆಲ್ ನಲ್ಲಿ ದಲಿತರಿಗೆ ಪ್ಲಾಸ್ಟಿಕ್ ಪ್ಲೇಟ್​ನಲ್ಲಿ ಉಪಹಾರ ಕೊಡಲಾಗುತ್ತಿದೆ. ನೀರು ಎತ್ತಿ ಹಾಕುವ ಪದ್ದತಿ ಇನ್ನು ಇದೆ ಅಂತೆ. ಕಟಿಂಗ್ ಶಾಪ್​ಗಳಿಗೆ ಹೋದರೆ ಕಟಿಂಗ್ ಮಾಡುವುದಿಲ್ಲ. ಪಂಚಾಯತ್​ಗೆ ಹೋಗಿ ಕೇಳಕೊಂಡ ಬನ್ನಿ ಎಂದು ಮಾಲೀಕರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು
ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪಟಾಕಿ ಹೊಡೆಯುತ್ತಿದ್ದ ವ್ಯಕ್ತಿ ಸಾವು
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪಟಾಕಿ ಹೊಡೆಯುತ್ತಿದ್ದ ವ್ಯಕ್ತಿ ಸಾವು
ಚುನಾವಣೆಗೆ ಸಜ್ಜಾದ ಜಾರ್ಖಂಡ್​ನಲ್ಲಿ ಪ್ರಧಾನಿ ಮೋದಿ ಮೊದಲ ರ್ಯಾಲಿ
ಚುನಾವಣೆಗೆ ಸಜ್ಜಾದ ಜಾರ್ಖಂಡ್​ನಲ್ಲಿ ಪ್ರಧಾನಿ ಮೋದಿ ಮೊದಲ ರ್ಯಾಲಿ
ಲೋಕಾಯುಕ್ತ ನೋಟೀಸ್​​ನಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ!
ಲೋಕಾಯುಕ್ತ ನೋಟೀಸ್​​ನಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ!
ಜನರ ಕಷ್ಟ ಗೊತ್ತಿರುವ ಯೋಗೇಶ್ವರ್ ಚನ್ನಪಟ್ಟಣಕ್ಕೆ ರೆಡಿಮೇಡ್ ಗಂಡು: ಡಿಕೆಶಿ
ಜನರ ಕಷ್ಟ ಗೊತ್ತಿರುವ ಯೋಗೇಶ್ವರ್ ಚನ್ನಪಟ್ಟಣಕ್ಕೆ ರೆಡಿಮೇಡ್ ಗಂಡು: ಡಿಕೆಶಿ
ಆಗ್ರಾ ಬಳಿ ಮಿಗ್-29 ಫೈಟರ್ ಜೆಟ್ ಪತನ; ಪೈಲಟ್‌ಗಳು ಪಾರು
ಆಗ್ರಾ ಬಳಿ ಮಿಗ್-29 ಫೈಟರ್ ಜೆಟ್ ಪತನ; ಪೈಲಟ್‌ಗಳು ಪಾರು
ಆರತಿ ತಟ್ಟೆಗೆ ಹಾಕಲು ಮುಖಂಡನೊಬ್ಬ ಹಣ ನೀಡಿದರೂ ತೆಗೆದುಕೊಳ್ಳದ ನಿಖಿಲ್
ಆರತಿ ತಟ್ಟೆಗೆ ಹಾಕಲು ಮುಖಂಡನೊಬ್ಬ ಹಣ ನೀಡಿದರೂ ತೆಗೆದುಕೊಳ್ಳದ ನಿಖಿಲ್
ಹಾಸ್ಯದ ಪೆಟ್ಟೇ ದುಬಾರಿ ಆಯ್ತು; ಚೈತ್ರಾ-ಅನುಷಾ ಮಧ್ಯೆ ಘನಘೋರ ಫೈಟ್
ಹಾಸ್ಯದ ಪೆಟ್ಟೇ ದುಬಾರಿ ಆಯ್ತು; ಚೈತ್ರಾ-ಅನುಷಾ ಮಧ್ಯೆ ಘನಘೋರ ಫೈಟ್
ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಒಂದು ಗುಂಪು ಅದ್ಯಾಕೆ ಗಲಾಟೆ ಮಾಡಿತೋ!
ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಒಂದು ಗುಂಪು ಅದ್ಯಾಕೆ ಗಲಾಟೆ ಮಾಡಿತೋ!
ಟೀಂ ಇಂಡಿಯಾದ ಜಿಕೆ ಟೆಸ್ಟ್! ಯಾರು ಎಷ್ಟು ಬುದ್ಧಿವಂತರು ನೀವೇ ನೋಡಿ
ಟೀಂ ಇಂಡಿಯಾದ ಜಿಕೆ ಟೆಸ್ಟ್! ಯಾರು ಎಷ್ಟು ಬುದ್ಧಿವಂತರು ನೀವೇ ನೋಡಿ