ಚಿತ್ರದುರ್ಗದಲ್ಲಿ ಜನವರಿ 8 ರಂದು ದಲಿತ ಐಕ್ಯತಾ ಸಮಾವೇಶ; ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಜನವರಿ 8ರಂದು ದಲಿತ ಐಕ್ಯತಾ ಸಮಾವೇಶವನ್ನು ಚಿತ್ರದುರ್ಗದಲ್ಲಿ ಆಯೋಜನೆ ಮಾಡಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್​ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಜನವರಿ 8 ರಂದು ದಲಿತ ಐಕ್ಯತಾ ಸಮಾವೇಶ; ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 07, 2022 | 1:26 PM

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್​ ಸೇರಿದಂತೆ ಕೆಪಿಸಿಸಿ ಕಚೇರಿಯಲ್ಲಿ ದಲಿತ ನಾಯಕರು ಜಂಟಿ ಸುದ್ದಿಗೋಷ್ಠಿ ಮಾಡಿದ್ದಾರೆ. ಜನವರಿ 8 ರಂದು ದಲಿತ ಐಕ್ಯತಾ ಸಮಾವೇಶವನ್ನು ಚಿತ್ರದುರ್ಗದಲ್ಲಿ ಆಯೋಜನೆ ಮಾಡಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ. ಶೋಷಿತ ಸಮಾಜಗಳು ಕಾಂಗ್ರೆಸ್​ಗೆ ಬೆಂಬಲ ನೀಡುತ್ತಾ ಬಂದಿವೆ. ಕಾಂಗ್ರೆಸ್ ದಲಿತರ ಕ್ಷೇಮಾಭಿವೃದ್ಧಿಗೆ ಯೋಜನೆ ಜಾರಿ ತಂದಿದೆ. ಬಡತನದಿಂದ ದಲಿತರನ್ನು ಹೊರತರಲು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗಿದೆ. ಬೇರೆ ಪಕ್ಷಗಳು ದಲಿತರ ಮನವೊಲಿಕೆಗೆ ಯತ್ನಿಸುತ್ತಿವೆ. ದಲಿತರ ಯೋಗ ಕ್ಷೇ‌ಮಕ್ಕೆ ಬೇರೆ ಪಕ್ಷಗಳು ಕೆಲಸ ಮಾಡಲಿಲ್ಲ. ಹೋಟೆಲ್​ನಿಂದ ತರಿಸಿಕೊಂಡು ನಾಯಕರು ಊಟ ಮಾಡಿದ್ದಾರೆ. ದಲಿತ ಸಮಾಜವನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಆಗುತ್ತಿದೆ  ಎಂದಿದ್ದಾರೆ.

ಪರಿಶಿಷ್ಟ ಜಾತಿಯಲ್ಲಿ ಒಟ್ಟು 101 ಜಾತಿಗಳಿವೆ. ಎಸ್‌ಟಿ ಸಮುದಾಯದಲ್ಲಿ 52 ವಿವಿಧ ಪಂಗಡಗಳಿವೆ. ರಾಜ್ಯದ ಜನಸಂಖ್ಯೆಯಲ್ಲಿ 24% ದಲಿತ ಸಮಾಜದವರಿದ್ದಾರೆ. ಮೀಸಲಾತಿ ನಮಗೆ ಭಿಕ್ಷೆ ಅಲ್ಲ, ಅದು ನಮ್ಮ ಹಕ್ಕು, ಮೀಸಲಾತಿ ಇರಬೇಕು & ಬೇಡ ಎಂದು ಚರ್ಚಿಸುವವರು ಇದ್ದಾರೆ. ಡಾ.ಅಂಬೇಡ್ಕರ್​​ 10 ವರ್ಷದವರೆಗೆ ಮೀಸಲಾತಿ ನೀಡಿದ್ದರು .ಎಲ್ಲ ಸರ್ಕಾರಗಳು ಮೀಸಲಾತಿ ಮುಂದುವರಿಸಿಕೊಂಡೇ ಬಂದಿವೆ. ಅಸ್ಪೃಶ್ಯತೆ ಜೀವಂತವಾಗಿ ಇರುವವರೆಗೂ ಮೀಸಲಾತಿ ಇರಲೇಬೇಕು ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಇದನ್ನೂ ಓದಿ:ಗ್ರಾಮ ಪಂಚಾಯಿತಿಗೂ ಕಾಲಿಟ್ಟ ರೆಸಾರ್ಟ್​ ರಾಜಕೀಯ: ವಿಮಾನದಲ್ಲಿ ಬಂದು ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡಿಸಿದ್ರು

ಇನ್ನು ಇದೆ ಸಂದರ್ಭದಲ್ಲಿ ದಲಿತ ಸಿಎಂ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್​​ನಲ್ಲಿ ಸಿಎಂ ಹುದ್ದೆಗೆ ನಾವೆಲ್ಲರೂ ಅರ್ಹರಿದ್ದೇವೆ, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹೈಕಮಾಂಡ್ ಗಮನಕ್ಕೆ ತರುತ್ತೇವೆ. ರಾಷ್ಟ್ರೀಯ ಪಕ್ಷವಾಗಿ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಒಪ್ಪಿಕೊಳ್ಳುತ್ತೇವೆ. ನಾವು ಕಾಂಗ್ರೆಸ್ ಪಕ್ಷದ ನಿಯಮಗಳಿಗೆ ಬದ್ಧರಾಗಿದ್ದೇವೆ. ನಮಗೆ ಸಿಎಂ ಸ್ಥಾನದ ವಿಚಾರದಲ್ಲಿ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ