AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊಗರಿ ಬೇಳೆ ಸೇವಿಸುವ ಮುನ್ನ ಎಚ್ಚರ: ಕ್ಯಾನ್ಸರ್​ ಕಾರಕ ಅಂಶ ಪತ್ತೆ

ತೊಗರಿ ಬೇಳೆಯಲ್ಲಿ ಕೇಸರಿ ಬೇಳೆ ಮಿಶ್ರಣವಾಗಿರುವುದು ಪತ್ತೆಯಾಗಿದೆ. ಕೇಸರಿ ಬೇಳೆ ವಿಷಕಾರಿಯಾಗಿದ್ದು, ಅದರ ಸೇವನೆಯಿಂದ ಪಾರ್ಶ್ವವಾಯು, ಅಂಗವೈಕಲ್ಯ, ಮತ್ತು ಕ್ಯಾನ್ಸರ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂದು ಆಹಾರ ಸುರಕ್ಷತಾ ಇಲಾಖೆ ಎಚ್ಚರಿಸಿದೆ. ಜೇನುತುಪ್ಪದಲ್ಲೂ ರಾಸಾಯನಿಕ ಬಣ್ಣ ಬಳಕೆಯ ಬಗ್ಗೆಯೂ ದೂರುಗಳು ಬಂದಿವೆ. ಆದ್ದರಿಂದ, ಆಹಾರ ಖರೀದಿಸುವಾಗ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.

ತೊಗರಿ ಬೇಳೆ ಸೇವಿಸುವ ಮುನ್ನ ಎಚ್ಚರ: ಕ್ಯಾನ್ಸರ್​ ಕಾರಕ ಅಂಶ ಪತ್ತೆ
ತೊಗರಿ ಬೇಳೆ
Vinay Kashappanavar
| Edited By: |

Updated on: Mar 16, 2025 | 8:43 AM

Share

ಬೆಂಗಳೂರು, ಮಾರ್ಚ್​ 16: ಯುಗಾದಿ (Ugadi) ಹಬ್ಬ ಸಮೀಪಿಸುತ್ತಿದ್ದು, ತೊಗರಿ ಬೇಳೆ ಹೋಳಿಗೆ ಸವಿಯಬೇಕು ಎನ್ನುವವರಿಗೆ ಆಹಾರ ಸುರಕ್ಷತಾ ಇಲಾಖೆ (Food Department) ಅಧಿಕಾರಿಗಳು ಶಾಕಿಂಗ್ ನ್ಯೂಸ್ ನೀಡಿದ್ದಾರೆ. ತೊಗರಿ ಬೇಳೆಗೆ ರಾಸಾಯನಿಕ ಬಣ್ಣ ಮಿಶ್ರಿತ ಕೇಸರಿ ಬೇಳೆ ಮಿಶ್ರಣ ಆಗುತ್ತಿರುವುದು ಪತ್ತೆಯಾಗಿದೆ. ಕೇಸರಿ ಬೇಳೆ ಮಿಶ್ರಿತ ತೊಗರೆ ಬೇಳೆ ಸೇವನೆಯಿಂದ ಪಾರ್ಶ್ವವಾಯು, ಅಂಗವೈಕಲ್ಯತೆಗೆ ಕಾರಣವಾಗಬಲ್ಲ ಗಂಭೀರ ನರರೋಗ, ಕ್ಯಾನ್ಸರ್​ ಉಂಟಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಕೇಸರಿ ಬೇಳೆ ಬಣ್ಣ, ಆಕಾರದಲ್ಲಿ ತೊಗರಿ ಬೇಳೆಯನ್ನೇ ಹೋಲುತ್ತದೆ. ಕೇಸರಿ ಬೇಳೆ ವಿಷಕಾರಿ ಅಂಶಗಳಿಂದ ಕೂಡಿರುತ್ತದೆ. ಇದು ಒಂದು ಕಳೆಯ ಬೆಳೆಯಾಗಿದ್ದು, ಕಾಡಿನಲ್ಲಿ ಬೆಳೆಯಲಾಗುತ್ತದೆ. ಮಹಾರಾಷ್ಟ್ರದ ಗುಡ್ಡಗಾಡು ಪ್ರದೇಶದಲ್ಲಿ ಕೇಸರಿ ಬೇಳೆ ಬೆಳೆಯಲಾಗುತ್ತದೆ. ಕೇಸರಿ ಬೇಳೆಯನ್ನು ನಿರಂತರವಾಗಿ ಸೇವಿಸುವುದರಿಂದ ವ್ಯಕ್ತಿಯು ಲೆಥರಿಸಂ ಕಾಯಿಲೆಗೆ ತುತ್ತಾಗುತ್ತಾನೆ. ಎರಡೂ ಕಾಲುಗಳ ನರ ಹಾಗೂ ಮಾಂಸಕಂಡಗಳ ಮೇಲೆ ಸರಿಪಡಿಸಲಾಗದ ನ್ಯೂನತೆ ಉಂಟಾಗುತ್ತವೆ. ಶಾಶ್ವತ ಅಂಗವೈಕಲ್ಯ ಉಂಟಾಗುವ ಸಾಧ್ಯತೆ ಇದೆ. ಇದರ ಪಾರ್ಶ್ವ ಪರಿಣಾಮ ಹೆಚ್ಚಾದಾಗ ಪಾರ್ಶ್ವವಾಯು ಸಹ ಉಂಟಾಗಬಹುದು ಎಂದು ವೈದ್ಯರು ಹೇಳಿದ್ದಾರೆ.

ಜೇನು ತುಪ್ಪದಲ್ಲೂ ರಾಸಾಯನಿಕ ಬಣ್ಣ?

ಇನ್ನು, ಜೇನು ತಪ್ಪದಲ್ಲೂ ರಾಸಾಯನಿಕ ಬಣ್ಣ ಬಳಕೆ ಬಗ್ಗೆ ದೂರುಗಳು ಬಂದಿವೆ. ಹಾಗಾಗಿ ರಾಜ್ಯಾದ್ಯಂತ ಮಾರಾಟ ಆಗುತ್ತಿರುವ ವಿವಿಧ ಜೇನಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ದರ್ಶಿನಿ, ಹೋಟೆಲ್​ಗಳಲ್ಲಿ ಇಡ್ಲಿಗಿಲ್ಲ ಡಿಮಾಂಡ್, ದೋಸೆಗೇ ಗ್ರಾಹಕರ ಆದ್ಯತೆ

ಪೇಪರ್ ಲೋಟದಿಂದ ಕ್ಯಾನ್ಸರ್

ಆಹಾರ ಇಲಾಖೆ ಪೇಪರ್ ಲೋಟಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿಸಿದ್ದು, ಅವುಗಳ ಬಳಕೆಯಿಂದ ಕ್ಯಾನ್ಸರ್ ಬರುವ ಅಂಶ ಪತ್ತೆಯಾಗಿದೆ. ಪೇಪರ್ ಲೋಟದಲ್ಲಿ ಶೇಕಡಾ 20 ರಷ್ಟು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಇದರಿಂದಾಗಿ, ಅವುಗಳಲ್ಲಿ ಬಿಸಿಯಾದ ಟೀ, ಕಾಫಿ ಹಾಕಿದ್ರೆ ಪ್ಲಾಸ್ಟಿಕ್‌ ಕರಗುತ್ತದೆ. ಕರಗಿದ ಪ್ಲಾಸ್ಟಿಕ್ ಅಂಶ ಮನುಷ್ಯನ ದೇಹ ಸೇರಿದರೆ ಕ್ಯಾನ್ಸರ್ ಬರುವ ಸಾಧ್ಯತೆ ಅತೀ ಹೆಚ್ಚು. ಹೀಗಾಗಿ ಪ್ಲಾಸ್ಟಿಕ್ ಅಂಶ ಇಲ್ಲದ ಕಪ್​​ಗಳ ಬಳಕೆಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ ಎಂದು ಆಹಾರ ಮತ್ತು ಸುರಕ್ಷತಾ ಇಲಾಖೆಯ ಶ್ರೀನಿವಾಸ್ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ