AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ದತ್ತು ಪಡೆದ ಡಿ ಬಾಸ್ ಫ್ಯಾನ್ಸ್, ಅಭಿನಂದನೆ ಸಲ್ಲಿಸಿದ ಶಿಕ್ಷಣ ಸಚಿವ

ತಮ್ಮ ನೆಚ್ಚಿನ ನಾಯಕ ನಟರ ಹೆಸರಿನಲ್ಲಿ ಗುಂಪುಗಳನ್ನ ಕಟ್ಟಿಕೊಂಡು ಅವರ ಸಿನಿಮಾಗಳು ರಿಲೀಸ್ ಆದಾಗ ಪ್ರಚಾರ ಮಾಡ್ತಾ, ಥಿಯೇಟರ್ ಮುಂದೆ ಕಟ್ ಔಟ್ ಗೆ ಹಾಲಿನ ಅಭಿಷೇಕ ಮಾಡುವುದು, ‘ಡೈ ಹಾರ್ಡ್ ಫ್ಯಾನ್’ ಅಂತ ನಟರ ಹೆಸರನ್ನು ಅಚ್ಚೆ ಹಾಕಿಸಿಕೊಳ್ಳುವುದು, ಹುಟ್ಟುಹಬ್ಬಕ್ಕೆ ಅವರ ಮನೆಯ ಬಳಿ ಹೋಗಿ ಸೆಲಬ್ರೇಟ್ ಮಾಡೋದು ಕಾಮನ್, ಕಾಮನ್. ಆದ್ರೆ ಇಲ್ಲಿ ‘ಡಿ ಬಾಸ್’ ದರ್ಶನ್ ಅಭಿಮಾನಿಗಳು ತಮ್ಮನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಿಂದುಳಿದ ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದು, ಅದರ ಅಭಿವೃದ್ಧಿಗಾಗಿ […]

ಶಾಲೆ ದತ್ತು ಪಡೆದ ಡಿ ಬಾಸ್ ಫ್ಯಾನ್ಸ್, ಅಭಿನಂದನೆ ಸಲ್ಲಿಸಿದ ಶಿಕ್ಷಣ ಸಚಿವ
Follow us
ಸಾಧು ಶ್ರೀನಾಥ್​
|

Updated on: Sep 26, 2019 | 12:15 PM

ತಮ್ಮ ನೆಚ್ಚಿನ ನಾಯಕ ನಟರ ಹೆಸರಿನಲ್ಲಿ ಗುಂಪುಗಳನ್ನ ಕಟ್ಟಿಕೊಂಡು ಅವರ ಸಿನಿಮಾಗಳು ರಿಲೀಸ್ ಆದಾಗ ಪ್ರಚಾರ ಮಾಡ್ತಾ, ಥಿಯೇಟರ್ ಮುಂದೆ ಕಟ್ ಔಟ್ ಗೆ ಹಾಲಿನ ಅಭಿಷೇಕ ಮಾಡುವುದು, ‘ಡೈ ಹಾರ್ಡ್ ಫ್ಯಾನ್’ ಅಂತ ನಟರ ಹೆಸರನ್ನು ಅಚ್ಚೆ ಹಾಕಿಸಿಕೊಳ್ಳುವುದು, ಹುಟ್ಟುಹಬ್ಬಕ್ಕೆ ಅವರ ಮನೆಯ ಬಳಿ ಹೋಗಿ ಸೆಲಬ್ರೇಟ್ ಮಾಡೋದು ಕಾಮನ್, ಕಾಮನ್.

ಆದ್ರೆ ಇಲ್ಲಿ ‘ಡಿ ಬಾಸ್’ ದರ್ಶನ್ ಅಭಿಮಾನಿಗಳು ತಮ್ಮನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಿಂದುಳಿದ ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದು, ಅದರ ಅಭಿವೃದ್ಧಿಗಾಗಿ ದುಡಿಯಲು ಕಂಕಣತೊಟ್ಟಿದ್ದಾರೆ.

ಸರ್ಕಾರಿ ಶಾಲೆ ದತ್ತು ಪಡೆದ ಡಿ ಬಾಸ್ ಫ್ಯಾನ್ಸ್: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಮೇನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನ ‘ಡಿ ಕಂಪನಿ ಫ್ಯಾನ್ಸ್ ಅಸೋಷಿಯೇಷನ್’ ಮೂಲಕ ದರ್ಶನ್ ಮತ್ತು ದಿನಕರ್ ತೂಗುದೀಪ್ ಫ್ಯಾನ್ಸ್ ದತ್ತು ಪಡೆದಿದ್ದಾರೆ. 2 ವರ್ಷಗಳ ಅವಧಿಯಲ್ಲಿ ಶಾಲಾ ಕಟ್ಟಡ ದುರಸ್ಥಿ, ಮಕ್ಕಳಿಗೆ ಉತ್ತಮ ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯದ ನೆರವು ನೀಡಲು ಮುಂದಾಗಿದ್ದಾರೆ.

ಶಿಕ್ಷಣ ಸಚಿವರಿಂದ ಡಿ ಫ್ಯಾನ್ಸ್ ಪ್ರಶಂಸೆ: ಅಭಿಮಾನಿಗಳ ಸಮಾಜಮುಖಿ ಕಾರ್ಯಕ್ಕೆ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಈಗಾಗಲೆ ದರ್ಶನ್ ಅಭಿಮಾನಿಗಳು ಶಾಲೆಗೆ ಬೇಕಾಗಿರುವ ಸಾಮಾಗ್ರಿ ಪಟ್ಟಿ ಸಿದ್ಧ ಪಡಿಸಿಕೊಂಡಿದ್ದಾರೆ. ಇವರ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗ್ತಿದೆ.

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್