AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dasara: ಖಾಸಗಿ ಬಸ್​​ಗಳ ಟಿಕೆಟ್ ದರ ದುಪ್ಪಟ್ಟು, ಪ್ರಯಾಣಿಕರು ಕಂಗಾಲು; ನಿಮ್ಮೂರಿಗೆ ಎಷ್ಟು ನೋಡಿ

ಸಾಲು ಸಾಲು ರಜೆ ಬಂತು ಅಂದರೆ ಖಾಸಗಿ ಬಸ್​​​ಗಳಿಗೆ ಹಬ್ಬವೋ ಹಬ್ಬ. ಎರಡ್ಮೂರು ಪಟ್ಟು ಟಿಕೆಟ್ ದರ ಏರಿಕೆ ಮಾಡಿ, ಜನರಿಂದ ವಸೂಲಿ ಶುರುವಾಗುತ್ತದೆ. ಈಗ ಮತ್ತದೇ ಚಾಳಿ ಮುಂದುವರಿದಿದೆ. ದಸರಾ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಶಾಕ್ ಎದುರಾಗಿದೆ.

Dasara: ಖಾಸಗಿ ಬಸ್​​ಗಳ ಟಿಕೆಟ್ ದರ ದುಪ್ಪಟ್ಟು, ಪ್ರಯಾಣಿಕರು ಕಂಗಾಲು; ನಿಮ್ಮೂರಿಗೆ ಎಷ್ಟು ನೋಡಿ
ಗುರುವಾರ ರಾತ್ರಿ ಬೆಂಗಳೂರಿನಲ್ಲಿ ಕಂಡುಬಂದ ಸಂಚಾರ ದಟ್ಟಣೆ
Follow us
Kiran Surya
| Updated By: Ganapathi Sharma

Updated on: Oct 11, 2024 | 7:07 AM

ಬೆಂಗಳೂರು, ಅಕ್ಟೋಬರ್ 11: ಗೌರಿ ಗಣೇಶ, ದಸರಾ, ದೀಪಾವಳಿ, ಸಂಕ್ರಾಂತಿ ಹೀಗೆ ಹಬ್ಬಗಳ ಸೀಸನ್ ಬಂತು ಅಂದರೆ ಖಾಸಗಿ ಬಸ್ ಮಾಲೀಕರಿಗೆ ಭರ್ಜರಿ‌ ಲಾಟರಿ. ಸಿಕ್ಕಿದ್ದೇ ಚಾನ್ಸ್ ಎಂದು ಜನರಿಂದ ಸುಲಿಗೆಗೆ ಇಳಿದುಬಿಡುತ್ತಾರೆ. ರಜೆ ಅಂತ ಮನೆ ಕಡೆ ಹೊರಟವರ ಜೇಬಿಗೆ ಕನ್ನ ಹಾಕುತ್ತಾರೆ. ಹೀಗೆ ಅವಕಾಶ ಸಿಕ್ಕಗಾಲೆಲ್ಲ ದರ ಏರಿಸುವ ಪ್ರವೇಟ್ ಬಸ್ ಮಾಲೀಕರು ದಸರಾ ಹಬ್ಬಕ್ಕೆ ಎರಡ್ಮೂರು ದಿನಗಳ ರಜೆ ಇದೆ ಅಂತ ಮನೆ ಕಡೆ ಹೋಗಲು ಸಜ್ಜಾದವರಿಗೆ ಟಿಕೆಟ್ ದರ ಏರಿಕೆ ಶಾಕ್ ನೀಡಿದ್ದಾರೆ.

ಶುಕ್ರವಾರ ಆಯುಧ ಪೂಜೆ, ಶನಿವಾರ ವಿಜಯದಶಮಿ, ಭಾನುವಾರ ಹೇಗೂ ರಜೆ ಇದ್ದು, ಒಟ್ಟು ಮೂರು ದಿನಗಳ ಕಾಲ ರಜೆ. ಹೀಗಾಗಿ ಗುರುವಾರವೇ ಊರಿಗೆ ತೆರಳಲು ಜನರು ಮುಂದಾಗಿದ್ದರು. ಆದರೆ ಖಾಸಗಿ ಬಸ್​ಗಳಲ್ಲಿ ಟಿಕೆಟ್ ದರ ದುಪ್ಪಟ್ಟು ಏರಿಕೆ ಆಗಿರುವುದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ಬಸ್ಸುಗಳ ಸಾಮಾನ್ಯ ಟಿಕೆಟ್ ದರ (ರೂ.ಗಳಲ್ಲಿ)

  • ಬೆಂಗಳೂರು-ಹಾವೇರಿ: 850-1000
  • ಬೆಂಗಳೂರು-ದಾವಣಗೆರೆ: 499-2000
  • ಬೆಂಗಳೂರು-ಕೋಲಾರ: 90-800
  • ಬೆಂಗಳೂರು-ಶಿವಮೊಗ್ಗ: 550-1000
  • ಬೆಂಗಳೂರು-ಹಾಸನ: 500-700
  • ಬೆಂಗಳೂರು-ಮಂಗಳೂರು: 630-1450
  • ಬೆಂಗಳೂರು-ಮೈಸೂರು: 250-900
  • ಬೆಂಗಳೂರು-ಹುಬ್ಬಳ್ಳಿ: 650-3000
  • ಬೆಂಗಳೂರು-ಧಾರವಾಡ: 650-1400
  • ಬೆಂಗಳೂರು-ಮಂಡ್ಯ: 184-400

ಖಾಸಗಿ ಬಸ್ಸುಗಳ ಈಗಿನ ಟಿಕೆಟ್ ದರ (ರೂ.ಗಳಲ್ಲಿ)

  • ಬೆಂಗಳೂರು-ಹಾವೇರಿ: 1200-4000
  • ಬೆಂಗಳೂರು-ದಾವಣಗೆರೆ: 1200-4000
  • ಬೆಂಗಳೂರು-ಕೋಲಾರ: 90-3000
  • ಬೆಂಗಳೂರು-ಶಿವಮೊಗ್ಗ: 950-4000
  • ಬೆಂಗಳೂರು-ಹಾಸನ: 1200-1500
  • ಬೆಂಗಳೂರು-ಮಂಗಳೂರು: 1200-2700
  • ಬೆಂಗಳೂರು-ಮೈಸೂರು: 250-2500
  • ಬೆಂಗಳೂರು-ಹುಬ್ಬಳ್ಳಿ: 1500-3800
  • ಬೆಂಗಳೂರು-ಧಾರವಾಡ: 1400-3500
  • ಬೆಂಗಳೂರು-ಮಂಡ್ಯ: 237-900

ಈ ಮಧ್ಯೆ, ದಸರಾ ಹಬ್ಬದ ಪ್ರಯುಕ್ತ ಊರಿಗೆ ಹೋಗುವವರಿಗೆ ಕೆಎಸ್ಆರ್​ಟಿಸಿ 2 ಸಾವಿರ ಹೆಚ್ಚುವರಿ ಬಸ್ ಗಳನ್ನು ನಿಯೋಜನೆ ಮಾಡಿದೆ. ಆದಾಗ್ಯೂ ಅವುಗಳಲ್ಲಿಯೂ ಬಹುತೇಕ ಸೀಟ್​​ಗಳನ್ನು ಮುಂಗಡ ಕಾಯ್ದಿರಿಸಲಾಗಿದೆ.

ಖಾಸಗಿ ಬಸ್ ಮಾಲೀಕರಿಂದ ಸಮರ್ಥನೆ

ಹಬ್ಬಗಳ ಸೀಸನ್​ನಲ್ಲಿ ಟಿಕೆಟ್ ದರ ಏರಿಕೆಯನ್ನು ಖಾಸಗಿ ಬಸ್ ಮಾಲೀಕರು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ‌ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮ ಪ್ರತಿಕ್ರಿಯಿಸಿದ್ದು, ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಮಾಲೀಕರು ಬೀದಿಗೆ ಬಂದಿದ್ದೇವೆ. ಮೊದಲು ಶಕ್ತಿ ಯೋಜನೆಯನ್ನು ನಿಲ್ಲಿಸಿ. ನಾವು ಮಾತ್ರ ಅಲ್ಲ ಕೆಎಸ್ಆರ್​ಟಿಸಿ ಬಸ್ಸಿನವರು ಕೂಡ ಟಿಕೆಟ್ ದರ ಹೆಚ್ಚಳ ಮಾಡುತ್ತಾರೆ. ಇದನ್ನು ಬಂಡವಾಳ ಮಾಡಿಕೊಳ್ಳುವ ಆರ್​​ಟಿಒ ಅಧಿಕಾರಿಗಳು, ಸುಳ್ಳು ಕೇಸ್​ಗಳನ್ನು ದಾಖಲಿಸಿ ನಮಗೆ ತೊಂದರೆ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ

ಒಟ್ಟಿನಲ್ಲಿ ಈ ಬಾರಿಯ ದಸರಾ ಹಬ್ಬಕ್ಕೆ‌ ಊರಿಗೆ ಹೋಗುವವರಿಗೆ ಒಂದೆಡೆ ಖಾಸಗಿ ಬಸ್ಸುಗಳು ದರ ಏರಿಕೆ ಮಾಡಿ ಶಾಕ್ ನೀಡಿದರೆ, ಅತ್ತ ಕೆಎಸ್ಆರ್​ಟಿಸಿ ಎರಡು ಸಾವಿರ ಬಸ್​ಗಳ ಹೆಚ್ಚುವರಿ ನಿಯೋಜನೆ ಮಾಡಿ ಸ್ವಲ್ಪ ರಿಲೀಫ್ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!