AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಪ್ರಯುಕ್ತ ಕರ್ನಾಟಕದ ವಿವಿಧೆಡೆಗೆ ವಿಶೇಷ ರೈಲುಗಳು: ಟ್ರಿಪ್ ವಿವರ, ವೇಳಾಪಟ್ಟಿ ಇಲ್ಲಿದೆ

Dasra Speial Trains: ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆ ಹುಬ್ಬಳ್ಳಿ-ಬೆಂಗಳೂರು, ಬೆಂಗಳೂರು-ವಿಜಯಪುರ ಮತ್ತು ಬೆಂಗಳೂರು-ಬೆಳಗಾವಿ ಮಾರ್ಗಗಳಲ್ಲಿ ವಿಶೇಷ ರೈಲುಗಳನ್ನು ಘೋಷಿಸಿದೆ. ಈ ರೈಲುಗಳ ವೇಳಾಪಟ್ಟಿ ಮತ್ತು ನಿಲುಗಡೆಗಳ ಮಾಹಿತಿ ಇಲ್ಲಿದೆ. ಐಆರ್​ಟಿಸಿ ಆ್ಯಪ್ ಅಥವಾ ವೆಬ್​ಸೈಟ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಿಕೊಳ್ಳುವುದು ಉತ್ತಮ ಎಂದು ರೈಲ್ವೆ ತಿಳಿಸಿದೆ.

ದಸರಾ ಪ್ರಯುಕ್ತ ಕರ್ನಾಟಕದ ವಿವಿಧೆಡೆಗೆ ವಿಶೇಷ ರೈಲುಗಳು: ಟ್ರಿಪ್ ವಿವರ, ವೇಳಾಪಟ್ಟಿ ಇಲ್ಲಿದೆ
ಸಾಂದರ್ಭಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Edited By: |

Updated on: Sep 09, 2025 | 7:10 AM

Share

ಹುಬ್ಬಳ್ಳಿ, ಸೆಪ್ಟೆಂಬರ್ 9: ದಸರಾ (Dasara) ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸುವುದಕ್ಕಾಗಿ ನೈಋತ್ಯ ರೈಲ್ವೆಯು (South Western Railway) ಕರ್ನಾಟಕದ (Karnataka) ವಿವಿಧ ನಿಲ್ದಾಣಗಳಿಂದ ವಿಶೇಷ ರೈಲುಗಳನ್ನು ಘೋಷಿಸಿದೆ. ಹುಬ್ಬಳ್ಳಿ-ಬೆಂಗಳೂರು, ಬೆಂಗಳೂರು-ವಿಜಯಪುರ, ಬೆಂಗಳೂರು-ಬೆಳಗಾವಿ ಮಧ್ಯೆ ವಿಶೇಷ ರೈಲುಗಳು ಸಂಚರಿಸಲಿವೆ. ವಿಶೇಷ ರೈಲುಗಳ ವೇಳಾಪಟ್ಟಿ, ನಿಲುಗಡೆ ಇತ್ಯಾದಿ ವಿವರಗಳು ಇಲ್ಲಿವೆ.

ಹುಬ್ಬಳ್ಳಿ – ಯಶವಂತಪುರ ವಿಶೇಷ ರೈಲು

ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30 ರಂದು ಮಧ್ಯಾಹ್ನ 12ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ರಾತ್ರಿ 08:15ಕ್ಕೆ ಯಶವಂತಪುರ ತಲುಪಲಿದೆ. ಈ ರೈಲು ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲಲಿದೆ.

ಯಶವಂತಪುರ-ವಿಜಯಪುರ ವಿಶೇಷ ರೈಲು

ರೈಲು ಸಂಖ್ಯೆ 06277/06278 ಯಶವಂತಪುರ-ವಿಜಯಪುರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30 ರಂದು ರಾತ್ರಿ 09:50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 09:30ಕ್ಕೆ ವಿಜಯಪುರ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06278 ವಿಜಯಪುರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 1 ರಂದು ಸಂಜೆ 05:30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 06:40ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ತಲುಪಲಿದೆ.

ಎಸ್​​ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ರೈಲಿನ ವಿವರ

ಯಶವಂತಪುರ-ವಿಜಯಪುರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್

ರೈಲು ಸಂಖ್ಯೆ 06279/06280 ಯಶವಂತಪುರ-ವಿಜಯಪುರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 2 ರಂದು ಸಂಜೆ 07:40ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 07:45ಕ್ಕೆ ವಿಜಯಪುರ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06280 ವಿಜಯಪುರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 3 ರಂದು ಸಂಜೆ 05:30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 08:10 ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ತಲುಪಲಿದೆ.

ಈ ರೈಲುಗಳು ಎರಡೂ ಮಾರ್ಗಗಳಲ್ಲಿ (ಸಂಖ್ಯೆ 06277/06278 ಮತ್ತು 06279/06280) ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಎಸ್‌ಎಂಎಂ ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಇದನ್ನೂ ಓದಿ: ಹುಬ್ಬಳ್ಳಿ ಜೋಧಪುರ್‌ ನಡುವೆ ನೇರ ರೈಲು: ಟಿಕೆಟ್ ಬುಕಿಂಗ್ ಶುರು, ವೇಳಾಪಟ್ಟಿ ಇಲ್ಲಿದೆ

ಎಲ್ಲಾ ರೈಲುಗಳು ಒಂದು ಪ್ರಥಮ ದರ್ಜೆ ಕಮ್ ಸೆಕೆಂಡ್ ಎಸಿ ಕೋಚ್, ಒಂದು ಎಸಿ 3-ಟೈರ್, ಎರಡು ಎಸಿ 2-ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಮತ್ತು ಎಸ್‌ಎಲ್‌ಆರ್‌ಡಿ ಬೋಗಿಗಳನ್ನು ಒಳಗೊಂಡಂತೆ ಒಟ್ಟು 21 ಬೋಗಿಗಳನ್ನು ಹೊಂದಿರುತ್ತವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ
ಅವಧಿಗೂ ಮೊದಲೇ ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ
ಅವಧಿಗೂ ಮೊದಲೇ ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ