ನೈರುತ್ಯ ರೈಲ್ವೆಯಿಂದ ದಸರಾಗೆ ವಿಶೇಷ ಟ್ರೈನ್​​​​​​​​​​ ವ್ಯವಸ್ಥೆ: ಇಲ್ಲಿದೆ 5 ರೈಲುಗಳ ವೇಳಾಪಟ್ಟಿ

ನಾಡಿನೆಲ್ಲಡೆ ದಸರಾ ಹಬ್ಬದ ಸಂಭ್ರಮಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಅದರಲ್ಲೂ ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈರುತ್ಯ ರೈಲ್ವೆಯು ವಿವಿಧ ನಿಲ್ದಾಣಗಳ ನಡುವೆ ಹೆಚ್ಚುವರಿ ಕಾಯ್ದಿರಿಸದ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಹಾಗಾದ್ರೆ, ದಸರಾ ಹಬ್ಬದ ಪ್ರಯುಕ್ತ ಕಾಯ್ದಿರಿಸದ ವಿಶೇಷ ರೈಲುಗಳ ಸಂಚಾರ ಎಲ್ಲಿಂದ ಎಲ್ಲಿಗೆ ಮಾಡಲಿವೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ನೈರುತ್ಯ ರೈಲ್ವೆಯಿಂದ  ದಸರಾಗೆ ವಿಶೇಷ ಟ್ರೈನ್​​​​​​​​​​ ವ್ಯವಸ್ಥೆ: ಇಲ್ಲಿದೆ 5 ರೈಲುಗಳ ವೇಳಾಪಟ್ಟಿ
South Western Railway
Edited By:

Updated on: Oct 06, 2026 | 9:49 PM

ಹುಬ್ಬಳ್ಳಿ, (ಅಕ್ಟೋಬರ್ 06): ದಸರಾ ಹಬ್ಬಕ್ಕೆ ಬೆಂಗಳೂರು ಮೈಸೂರು ನಡುವೆ 5 ವಿಶೇಷ ರೈಲುಗಳನ್ನು ಆರಂಭಿಸಲಾಗುತ್ತಿದೆ. ಈ ರೈಲುಗಳು ಅಕ್ಟೋಬರ್ 9ರಿಂದ ಸಂಚಾರ ನಡೆಸಲಿವೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ನೈರುತ್ಯ ರೈಲ್ವೆಯು ಮಹತ್ವದ ಕ್ರಮ ಕೈಗೊಂಡಿದೆ. ಬೆಂಗಳೂರು, ಮೈಸೂರು, ಅಶೋಕಪುರಂ ಮತ್ತು ಚಾಮರಾಜನಗರ ನಿಲ್ದಾಣಗಳ ನಡುವೆ ಕಾಯ್ದಿರಿಸದ (ಅನ್-ರಿಸರ್ವ್ಡ್) ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ಹೀಗಿದೆ ವಿಶೇಷ ರೈಲುಗಳ ಮಾಹಿತಿ

  • ಕೆಎಸ್ಆರ್ ಬೆಂಗಳೂರು–ಅಶೋಕಪುರಂ ನಡುವೆ 3 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06285/06286):

ರೈಲು ಸಂಖ್ಯೆ 06285 ಕೆಎಸ್ಆರ್ ಬೆಂಗಳೂರು–ಅಶೋಕಪುರಂ ಕಾಯ್ದಿರಿಸದ ವಿಶೇಷ ರೈಲು ದಿನಾಂಕ 19.10.2026, 20.10.2026 ಮತ್ತು 21.10.2026 ರಂದು 12:15 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ 15:40 ಗಂಟೆಗೆ ಅಶೋಕಪುರಂ ತಲುಪಲಿದೆ.

ಇದನ್ನೂ ಓದಿ: ಬೆಂಗಳೂರು – ಬೆಳಗಾವಿ ನಡುವೆ ವಿಶೇಷ ರೈಲು: ಆರೇಳು ಜಿಲ್ಲೆಯ ಪ್ರಯಾಣಿಕರಿಗೆ ಅನುಕೂಲ

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06286 ಅಶೋಕಪುರಂ–ಕೆಎಸ್ಆರ್ ಬೆಂಗಳೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 19.10.2026, 20.10.2026 ಮತ್ತು 21.10.2026 ರಂದು 16:10 ಗಂಟೆಗೆ ಅಶೋಕಪುರಂನಿಂದ ಹೊರಟು, ಅದೇ ದಿನ 20:00 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.

ಎಂಟು ಮೆಮು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಎಲಿಯೂರು, ಬ್ಯಾಡರಹಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ, ನಾಗನಹಳ್ಳಿ, ಮೈಸೂರು ಹಾಗೂ ಚಾಮರಾಜಪುರಂ ನಿಲ್ದಾಣಗಳಲ್ಲಿ ನಿಲ್ಲಲಿವೆ.ಕೆಎಸ್ಆರ್ ಬೆಂಗಳೂರು–ಮೈಸೂರು ನಡುವೆ 6 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06287/06288):

  • ರೈಲು ಸಂಖ್ಯೆ 06287 ಕೆಎಸ್ಆರ್ ಬೆಂಗಳೂರು–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 16.10.2026, 17.10.2026, 18.10.2026, 19.10.2026, 20.10.2026 ಮತ್ತು 21.10.2026 ರಂದು 21:15 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಮರುದಿನ 00:20 ಗಂಟೆಗೆ ಮೈಸೂರು ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06288 ಮೈಸೂರು–ಕೆಎಸ್ಆರ್ ಬೆಂಗಳೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 17.10.2026, 18.10.2026, 19.10.2026, 20.10.2026, 21.10.2026 ಮತ್ತು 22.10.2026 ರಂದು 00:30 ಗಂಟೆಗೆ ಮೈಸೂರಿನಿಂದ ಹೊರಟು, ಅದೇ ದಿನ 03:30 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.

ಎಂಟು ಮೆಮು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಕೆಂಗೇರಿ, ಬಿಡದಿ, ರಾಮನಗರಂ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಪಾಂಡವಪುರ ನಿಲ್ದಾಣಗಳಲ್ಲಿ ನಿಲ್ಲಲಿವೆ. ರೈಲು ಸಂಖ್ಯೆ 06285/06286 ಮತ್ತು 06287/06288 ಎಂಟು ಮೆಮು ಕಾರ್ ಬೋಗಿಗಳನ್ನು ಹೊಂದಿರಲಿವೆ.

  • ಮೈಸೂರು–ಕೆಎಸ್ಆರ್ ಬೆಂಗಳೂರು ನಡುವೆ 6 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06297/06298):

ರೈಲು ಸಂಖ್ಯೆ 06297 ಮೈಸೂರು–ಕೆಎಸ್ಆರ್ ಬೆಂಗಳೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 16.10.2026, 17.10.2026, 18.10.2026, 19.10.2026, 20.10.2026 ಮತ್ತು 21.10.2026 ರಂದು 23:15 ಗಂಟೆಗೆ ಮೈಸೂರಿನಿಂದ ಹೊರಟು, ಮರುದಿನ 02:50 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06298 ಕೆಎಸ್ಆರ್ ಬೆಂಗಳೂರು–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 17.10.2026, 18.10.2026, 19.10.2026, 20.10.2026, 21.10.2026 ಮತ್ತು 22.10.2026 ರಂದು 03:15 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ 06:30 ಗಂಟೆಗೆ ಮೈಸೂರು ತಲುಪಲಿದೆ.

ಹತ್ತೊಂಬತ್ತು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಶ್ರೀರಂಗಪಟ್ಟಣ, ಪಾಂಡವಪುರ, ಬ್ಯಾಡರಹಳ್ಳಿ, ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರಂ, ಬಿಡದಿ ಮತ್ತು ಕೆಂಗೇರಿ ನಿಲ್ದಾಣಗಳಲ್ಲಿ ನಿಲ್ಲಲಿವೆ.

  • ಮೈಸೂರು–ಚಾಮರಾಜನಗರ ನಡುವೆ 1 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06293/06294):

ರೈಲು ಸಂಖ್ಯೆ 06293 ಮೈಸೂರು–ಚಾಮರಾಜನಗರ ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 21:30 ಗಂಟೆಗೆ ಮೈಸೂರಿನಿಂದ ಹೊರಟು, ಅದೇ ದಿನ 23:20 ಗಂಟೆಗೆ ಚಾಮರಾಜನಗರ ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06294 ಚಾಮರಾಜನಗರ–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 23:50 ಗಂಟೆಗೆ ಚಾಮರಾಜನಗರದಿಂದ ಹೊರಟು, ಮರುದಿನ 01:50 ಗಂಟೆಗೆ ಮೈಸೂರು ತಲುಪಲಿದೆ.

ಇಪ್ಪತ್ತು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಚಾಮರಾಜಪುರಂ, ಅಶೋಕಪುರಂ, ಕಡಕೊಳ, ತಾಂಡವಪುರ ಹಾಲ್ಟ್, ಸುಜಾತಾಪುರ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ ಗಂಗವಾಡಿ ಹಾಲ್ಟ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

  • ಮೈಸೂರು–ಚಾಮರಾಜನಗರ ನಡುವೆ 1 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06289/06290):

ರೈಲು ಸಂಖ್ಯೆ 06289 ಮೈಸೂರು–ಚಾಮರಾಜನಗರ ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 00:10 ಗಂಟೆಗೆ ಮೈಸೂರಿನಿಂದ ಹೊರಟು, ಅದೇ ದಿನ 02:00 ಗಂಟೆಗೆ ಚಾಮರಾಜನಗರ ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06290 ಚಾಮರಾಜನಗರ–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 02:30 ಗಂಟೆಗೆ ಚಾಮರಾಜನಗರದಿಂದ ಹೊರಟು, ಅದೇ ದಿನ 04:15 ಗಂಟೆಗೆ ಮೈಸೂರು ತಲುಪಲಿದೆ.

ಹತ್ತೊಂಬತ್ತು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಚಾಮರಾಜಪುರಂ, ಅಶೋಕಪುರಂ, ಕಡಕೊಳ, ತಾಂಡವಪುರ ಹಾಲ್ಟ್, ಸುಜಾತಾಪುರ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ ಗಂಗವಾಡಿ ಹಾಲ್ಟ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Loading...
Unable to load recommendations.
Follow Us