AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dattatreya Hosabale: ದತ್ತಾತ್ರೇಯ ಹೊಸಬಾಳೆ ಆರ್​ಎಸ್​ಎಸ್​ ಸರಕಾರ್ಯವಾಹ್​ ಆಗಿ ಆಯ್ಕೆ; ಮುಖ್ಯಮಂತ್ರಿ ಅಭಿನಂದನೆ

RSS Akhil Bharatiya Pratinidhi Sabha in Bengaluru| ಕರ್ನಾಟಕದ ದತ್ತಾತ್ರೇಯ ಹೊಸಬಾಳೆ ಅವರನ್ನು ಆರ್​ಎಸ್​ಎಸ್​ ಸರಕಾರ್ಯವಾಹ್​ ಆಗಿ ಅಖಿಲ ಭಾರತೀಯ ಪ್ರತಿನಿಧಿ ಸಭಾ ಆಯ್ಕೆ ಮಾಡಿದೆ. 2009ರಿಂದ ದತ್ತಾತ್ರೇಯ ಹೊಸಬಾಳೆ ಅವರು ಸಹ ಸರಕಾರ್ಯವಾಹ್​ ಆಗಿದ್ದಾರೆ.

Dattatreya Hosabale: ದತ್ತಾತ್ರೇಯ ಹೊಸಬಾಳೆ ಆರ್​ಎಸ್​ಎಸ್​ ಸರಕಾರ್ಯವಾಹ್​ ಆಗಿ ಆಯ್ಕೆ; ಮುಖ್ಯಮಂತ್ರಿ ಅಭಿನಂದನೆ
ದತ್ತಾತ್ರೇಯ ಹೊಸಬಾಳೆ ಆರ್​ಎಸ್​ಎಸ್​ ಸರಕಾರ್ಯವಾಹ್​ ಆಗಿ ಆಯ್ಕೆ
ಸಾಧು ಶ್ರೀನಾಥ್​
| Updated By: Skanda|

Updated on:Mar 20, 2021 | 3:47 PM

Share

ಬೆಂಗಳೂರು: ಕರ್ನಾಟಕದ ದತ್ತಾತ್ರೇಯ ಹೊಸಬಾಳೆ ಅವರನ್ನು ಆರ್​ಎಸ್​ಎಸ್​ ಸರಕಾರ್ಯವಾಹ​ ಆಗಿ ಅಖಿಲ ಭಾರತೀಯ ಪ್ರತಿನಿಧಿ ಸಭಾ ಆಯ್ಕೆ ಮಾಡಿದೆ. 2009ರಿಂದ ದತ್ತಾತ್ರೇಯ ಹೊಸಬಾಳೆ ಅವರು ಸಹ ಸರಕಾರ್ಯವಾಹ್ ಆಗಿದ್ದಾರೆ.

ಈ ನೇಮಕದೊಂದಿಗೆ RSS ನಲ್ಲಿ ದತ್ತಾತ್ರೇಯ ಹೊಸಬಾಳೆ ಅವರು ನಂಬರ್ 2 ನೇ ಸ್ಥಾನಕ್ಕೇರಿದ್ದಾರೆ. ಸುರೇಶ್ ಭಯ್ಯಾಜಿ ಜೋಷಿ ಇದ್ದ ಸರಕಾರ್ಯವಾಹ ಸ್ಥಾನಕ್ಕೆ ದತ್ತಾತ್ರೇಯ ಹೊಸಬಾಳೆ ಆಯ್ಕೆಗೊಂಡಿದ್ದಾರೆ. RSS ಸರಸಂಘಚಾಲಕ ಮೋಹನ್ ಭಾಗವತ್ ನಂತರದ ಸ್ಥಾನಕ್ಕೆ ದತ್ತಾತ್ರೇಯ ಹೊಸಬಾಳೆ ಆಯ್ಕೆಯಾಗಿದೆ. ಈ ಹಿಂದೆ ಕರ್ನಾಟಕದ ಕೆ.ಎಸ್. ಸುದರ್ಶನ್ ಅವರು ಆರ್.ಎಸ್.ಎಸ್.‌ಸರಸಂಘಚಾಲಕ ಆಗಿದ್ದರು.

ಆರ್​ಎಸ್​ಎಸ್​​ ನ ಅಖಿಲ ಭಾರತೀಯ ಪ್ರತಿನಿಧಿ ಸಭಾದ ದ್ವೈವಾರ್ಷಿಕ ಸಭೆ ಬೆಂಗಳೂರಿನಲ್ಲಿ ಶುಕ್ರವಾರ ಮತ್ತು ಶನಿವಾರ ನಡೆದಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾದ ದ್ವೈವಾರ್ಷಿಕ ಸಭೆ ಕಳೆದ ವರ್ಷ ನಾಗಪುರದಲ್ಲಿ ನಡೆಯಬೇಕಿತ್ತು.

ಆದರೆ, ಅಲ್ಲಿ ಕೊರೊನಾ ಜಾಸ್ತಿ ಆಗಿ ಲಾಕ್ಡೌನ್ ಘೋಷಣೆಯಾಗಿದ್ದರಿಂದ ಈ ಸಭೆ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈಗ ಮೂರು ದಿನಗಳ ಬದಲಾಗಿ ಎರಡೇ ದಿನ ನಡೆದಿರುವ ಈ ಸಭೆಯಲ್ಲಿ 1200 ಪ್ರತಿನಿಧಿಗಳ ಬದಲಾಗಿ 450 ಜನ ಭಾಗವಹಿಸಿದ್ದಾರೆ.

ದತ್ತಾತ್ರೇಯ ಹೊಸಬಾಳೆ ಅವರಿಗೆ ಮುಖ್ಯಮಂತ್ರಿ ಅಭಿನಂದನೆ

ಆರ್​ಎಸ್​ಎಸ್​ನ ಎರಡನೇ ಅತ್ಯುನ್ನತ ಹುದ್ದೆಯಾದ ಅಖಿಲ ಭಾರತ ಸರಕಾರ್ಯವಾಹರಾಗಿ ನಿಯುಕ್ತಿ ಹೊಂದಿದ ಕರ್ನಾಟಕದ ದತ್ತಾತ್ರೇಯ ಹೊಸಬಾಳೆ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ, ನಿಷ್ಠಾವಂತ ಸ್ವಯಂ ಸೇವಕರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಉನ್ನತ ಸ್ಥಾನಕ್ಕೇರಿರುವುದು ಹೆಮ್ಮೆಯ ವಿಷಯ. ಸಂಘಟನಾ ಚಾತುರ್ಯ, ಸಮಾಜದ ಆಗುಹೋಗುಗಳ ಕುರಿತ ಅರಿವು, ಸಂವೇದನಾಶೀಲತೆ ಹೊಂದಿರುವ ಅವರು ಬಹುವಿಧ ಆಸಕ್ತಿ ಹಾಗೂ ಬಹುಮುಖ ಪ್ರತಿಭೆಯ ಸಂಗಮ. ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹೊಸಬಾಳೆಯವರು ಅಂದಿನ ಕರಾಳ ಅನುಭವದ ಚಿತ್ರಣ ನೀಡುವ ‘ಭುಗಿಲು’ ಸಂಪಾದನಾ ತಂಡದ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇಂಡಿಯಾ ಪಾಲಿಸಿ ಫೌಂಡೇಷನ್ ನ ಸ್ಥಾಪಕ ಸದಸ್ಯರಾಗಿ, ‘ಅಸೀಮಾ’ ಮಾಸ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿ ಗಮನ ಸೆಳೆದವರು ಎಂದು ಶ್ಲಾಘಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ಸರಕಾರ್ಯವಾಹ ಹೊಣೆಗಾರಿಕೆ ಅವರ ಪ್ರತಿಭೆ, ಸಾಮರ್ಥ್ಯಕ್ಕೆ ಸಂದ ಗೌರವವಾಗಿದೆ. ಭಗವಂತನು ಅವರಿಗೆ ಆಯುರಾರೋಗ್ಯವನ್ನು ಕರುಣಿಸಿ, ಭಾರತಮಾತೆಯ ಸೇವೆಯಲ್ಲಿ ಇನ್ನಷ್ಟು ತತ್ಪರರಾಗಲು ಸ್ಫೂರ್ತಿ ನೀಡಲಿ ಎಂದು ಹಾರೈಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Also Read: RSS ABPS 2021: ರಾಮ ಮಂದಿರ ನಿಧಿ ಅಭಿಯಾನಕ್ಕೆ ದೇಣಿಗೆ ನೀಡಿದ್ದಾರೆ 12 ಕೋಟಿ ಜನ!

Published On - 1:05 pm, Sat, 20 March 21

ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ