ತಂದೆಗೆ ಕೊರೊನಾ ಚಿಕಿತ್ಸೆ ಕೊಡಿಸಲು ಮಗಳ ಪರದಾಟ; ಕರೆಯನ್ನು ಸ್ವೀಕರಿಸದ ಅಧಿಕಾರಿಗಳು

ನೋಡಲ್ ಅಧಿಕಾರಿಯಾದ ಡಿಸಿಪಿ ಶರನಪ್ಪ ಹಾಗೂ ಬಿಬಿಎಂಪಿಯ ಪಲ್ಲವಿಗೆ ಕರೆ ಮಾಡಿದ್ದಾರೆ. ಆದರೆ ಅವರು ಕರೆಯನ್ನು ಸ್ವೀಕರಿಸುತಿಲ್ಲ. ತಂದೆಗೆ ವಯಸ್ಸು 74 ಆಗಿರುವುದರಿಂದ ಆಕ್ಸಿಜನ್ ಲೆವೆಲ್​ನಲ್ಲಿ ಏರುಪೇರು ಕಾಣಿಸುತ್ತಿದೆ. ಹೀಗಾಗಿ ಮಗಳು ದಿಕ್ಕುತೋಚದ ಪರಿಸ್ಥಿತಿಯಲ್ಲಿದ್ದಾರೆ.

ತಂದೆಗೆ ಕೊರೊನಾ ಚಿಕಿತ್ಸೆ ಕೊಡಿಸಲು ಮಗಳ ಪರದಾಟ; ಕರೆಯನ್ನು ಸ್ವೀಕರಿಸದ ಅಧಿಕಾರಿಗಳು
ಪ್ರಾತಿನಿಧಿಕ ಚಿತ್ರ
Follow us
sandhya thejappa
|

Updated on:May 02, 2021 | 11:19 AM

ಬೆಂಗಳೂರು: ಕೊರೊನಾ ಆರ್ಭಟ ಎಲ್ಲಿಯವರೆಗೆ ಬಂದು ತಲುಪುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಈಗಾಗಲೇ ಬಾಳಿ ಬದುಕಬೇಕಾದ ಅದೆಷ್ಟೋ ಜೀವಿಗಳನ್ನು ಕೊರೊನಾ ಬಲಿ ತೆಗೆದುಕೊಂಡಿದೆ. ಕೆಲ ಸೋಂಕಿತರು ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದರೆ, ಇನ್ನು ಕೆಲವರು ಬೆಡ್ಗಳು ಸಿಗದೆ ಹಾಗೂ ಸೂಕ್ತ ವ್ಯವಸ್ಥೆಯಿಲ್ಲದೆ ಮೃತಪಡುತ್ತಿದ್ದಾರೆ. ಕೊರೊನಾ ದೃಢಪಡುತ್ತಿದ್ದಂತೆ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಕುಟುಂಬಸ್ಥರು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಂದೆಯನ್ನು ಕೊರೊನಾ ಚಿಕಿತ್ಸೆಗೆ ಒಳಪಡಿಸಲು ಮಗಳು ಪರದಾಟ ಪಡುತ್ತಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ನಿನ್ನೆ (ಮೇ 1) ಸಂಜೆ 74 ವರ್ಷದ ತಂದೆಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಅಪ್ಪನಿಗೆ ಕೊವಿಡ್ ಪಾಸಿಟಿವ್ ಬಂದ ಕಾರಣ ಮಗಳು ಕ್ವಾರಂಟೈನ್ ಆಗುತ್ತಾರೆ. ಕ್ವಾರಂಟೈನ್ನಲ್ಲಿದ್ದೆ ಮಗಳು ಕೊರೊನ ಸಂಬಂಧಿಸಿದ ಎಲ್ಲಾ ರೀತಿಯ ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಆದರೆ ಎಷ್ಟು ಬಾರಿ ಫೋನ್ ಕಾಲ್ ಮಾಡಿದರು ಫೋನ್ ತೆಗೆಯುತ್ತಿಲ್ಲ. ಮತ್ತೆ ವಾಪಸ್ ಕರೆಯನ್ನು ಮಾಡುತ್ತಿಲ್ಲ. ಇದರಿಂದ ಕೊರೊನಾ ಸೋಂಕಿಗೆ ಒಳಪಟ್ಟ ಅಪ್ಪನ ಸ್ಥಿತಿ ಕಂಡು ಮಗಳು ದಿಕ್ಕು ತೋಚದೆ ಒದ್ದಾಡುತ್ತಿದ್ದಾರೆ.

ನೋಡಲ್ ಅಧಿಕಾರಿಯಾದ ಡಿಸಿಪಿ ಶರನಪ್ಪ ಹಾಗೂ ಬಿಬಿಎಂಪಿಯ ಪಲ್ಲವಿಗೆ ಕರೆ ಮಾಡಿದ್ದಾರೆ. ಆದರೆ ಅವರು ಕರೆಯನ್ನು ಸ್ವೀಕರಿಸುತಿಲ್ಲ. ತಂದೆಗೆ ವಯಸ್ಸು 74 ಆಗಿರುವುದರಿಂದ ಆಕ್ಸಿಜನ್ ಲೆವೆಲ್​ನಲ್ಲಿ ಏರುಪೇರು ಕಾಣಿಸುತ್ತಿದೆ. ಹೀಗಾಗಿ ಮಗಳು ದಿಕ್ಕು ತೋಚದ ಪರಿಸ್ಥಿತಿಯಲ್ಲಿದ್ದಾರೆ.

ಇದನ್ನೂ ಓದಿ

ಕೊರೊನಾ ಸಾಂಕ್ರಾಮಿಕ ಕಾಯಿಲೆ ಸಮಯದಲ್ಲಿ ಬೇಡಿಕೆ ಹೆಚ್ಚಿಸಿಕೊಂಡ ಇಡ್ಲಿ, ದೋಸೆ

ಸರ್ಕಾರದ ಹೊಸ ಮಾರ್ಗಸೂಚಿಗೆ ತರಕಾರಿ ಮಾರಾಟ ಮಹಿಳೆಯರ ಕಣ್ಣೀರು

(daughter is struggling to Corona Treatment for father in bengaluru)

Published On - 11:12 am, Sun, 2 May 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ