ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣ: ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಸಾವು

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಭಾನುವಾರ ಸಾವನ್ನಪ್ಪಿದ್ದಾನೆ. ಮನೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ ಇರ್ಫಾನ್(6) ಮೃತ ಬಾಲಕ. ಗಂಭೀರ ಸ್ಥಿತಿಯಲ್ಲಿದ್ದ ಇನ್ನೂ‌ ಮೂರು ಮಕ್ಕಳು ಸದ್ಯ ಚೇತರಿಸಿಕೊಂಡಿದ್ದಾರೆ. ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ. 

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣ: ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಸಾವು
ಹಜರತ್ ಬಿಲಾಲ್ ಮೃತ ಬಾಲಕ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 17, 2024 | 8:42 PM

ದಾವಣಗೆರೆ, ಮಾರ್ಚ್​ 17: ಪಾನಿಪೂರಿ (Panipuri) ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಭಾನುವಾರ ಸಾವನ್ನಪ್ಪಿದ್ದಾನೆ. ಮನೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ ಇರ್ಫಾನ್(6) ಮೃತ ಬಾಲಕ. ಮಾರ್ಚ್ 15ರಂದು ಜಿಲ್ಲೆ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ರಂಜಾನ್ ಹಬ್ಬ ಹಿನ್ನೆಲೆ ಮಕ್ಕಳು ಉಪವಾಸ ಇದ್ದರು. ನಂತರ ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದರು.

ವಾಂತಿ, ಭೇದಿ, ಹೊಟ್ಟೆ ನೋವಿನಿಂದ 19 ಮಕ್ಕಳು ಆಸ್ಪತ್ರೆ ಸೇರಿದ್ದರು. ಈ ಪೈಕಿ ನಾಲ್ವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇಂದು ಚಿಕಿತ್ಸೆ ಫಲಿಸದೆ ಬಾಲಕ ಇರ್ಫಾನ್ ಸಾವನ್ನಪ್ಪಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಇನ್ನೂ‌ ಮೂರು ಮಕ್ಕಳು ಸದ್ಯ ಚೇತರಿಸಿಕೊಂಡಿದ್ದಾರೆ. ಘಟನೆ ಬಳಿಕ ಪಾನಿಪುರಿ ಅಂಗಡಿ‌ ಮಾಲೀಕ ಪರಾರಿ ಆಗಿದ್ದಾನೆ. ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.

ಕಾರು ಸರ್ವಿಸ್ ಸರಿಯಾಗಿ ಮಾಡಿಲ್ಲ ಎಂದು ಮಾಲೀಕನ ರಂಪಾಟ

ನೆಲಮಂಗಲ: ಕಾರು ಸರ್ವಿಸ್ ಸರಿಯಾಗಿ ಮಾಡಿಲ್ಲ ಎಂದು ತನ್ನ ಕಾರಿನ ಗ್ಲಾಸ್​ ಒಡೆದು ಮಾಲೀಕ ರಂಪಾಟ ಮಾಡಿರುವಂತಹ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ಘಟನೆ ನಡೆದಿದೆ. ಹುಂಡೈ ಕಾರ್​ ಸರ್ವಿಸ್ ಸೆಂಟರ್​ನಲ್ಲಿ ಹೈಡ್ರಾಮಾವೇ ನಡೆದಿದೆ.

ಇದನ್ನೂ ಓದಿ: ಹಣ ಕಳ್ಳತನವಾಗಿದೆ ಎಂದು ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ ನಡೆಸಿದ್ದ ಶಿಕ್ಷಕಿಯರು, ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಕಾರಿನ ಗ್ಲಾಸ್​ ಒಡೆದು ಹಾಕಿ ವೀರೇಶ್ ಹೈಡ್ರಾಮಾ ಮಾಡಿದ್ದಾನೆ. ಸರ್ವಿಸ್ ಸೆಂಟರ್ ಕ್ಲೋಸ್​ ಮಾಡಬೇಕೆಂದು ಪಟ್ಟು ಹಿಡಿದಿದ್ದಾನೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ಕಂಡುಬಂದಿದೆ.

ಬೈಕ್ ಸ್ಕಿಡ್ ಆಗಿ ಬಿದ್ದು ASI ಸಾವು

ಬೆಳಗಾವಿ: ಕರ್ತವ್ಯ ಮುಗಿಸಿ ಮನೆಗೆ ವಾಪಸಾಗ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ASI ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ. ದೊಡವಾಡ ಪೊಲೀಸ್ ಠಾಣೆ ವಿಜಯಕಾಂತ ಮಿಕಲಿ(51) ಮೃತ ಎಎಸ್​ಐ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

2 ಕೆಎಸ್​ಆರ್​ಟಿಸಿ ಬಸ್​ಗಳು ಡಿಕ್ಕಿ: 15 ಜನರಿಗೆ ಗಾಯ

ತುಮಕೂರು: ಜಿಲ್ಲೆಯ ಕೊರಟಗೆರೆ ಬಸ್​ ನಿಲ್ದಾಣದಲ್ಲಿ 2 ಕೆಎಸ್​ಆರ್​ಟಿಸಿ ಬಸ್​ಗಳು ಡಿಕ್ಕಿಯಾಗಿ 15 ಜನರಿಗೆ ಗಾಯವಾಗಿದೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೌರಿಬಿದನೂರುನಿಂದ ತುಮಕೂರಿಗೆ ಹೋಗುತ್ತಿದ್ದ ಬಸ್​ಗೆ ತುಮಕೂರಿನಿಂದ ಪಾವಗಡಕ್ಕೆ ತೆರಳುತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ