ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ; ವ್ಯಕ್ತವಾದ ಶಂಕೆ, ಚುರುಕುಗೊಂಡ ಪೊಲೀಸ್ ತನಿಖೆ
ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಶವ ಪತ್ತೆಯಾಗಿದ್ದು, ವ್ಯಕ್ತವಾದ ಶಂಕೆಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ (mp renukacharya) ಅವರ ಸಹೋದರನ ಪುತ್ರ ಚಂದ್ರಶೇಖರ್ (MP Renukacharya Nephew) ಇಂದು (ನ. 03) ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಬಳಿ ತುಂಗಾ (Kadadakatte Thunga Canal) ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿರುವುದಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲುವೆಯಲ್ಲಿ ಪಲ್ಟಿಯಾಗಿದ್ದ ಕಾರಿನಲ್ಲಿ ಮೃತದೇಹ ಪತ್ತೆ ಆಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಾರೆ. ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತದೆ ಎಂದರು.
ಚಂದ್ರಶೇಖರ್ ಕಾರು ಸಿಕ್ಕಿದ್ದು, ಅದರಲ್ಲಿ ಚಂದ್ರಶೇಖರ್ ಅವರ ಶವ ಕೂಡ ಸಿಕ್ಕಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಾರೆ. ತನಿಖೆಯಿಂದ ಮತ್ತಷ್ಟು ಮಾಹಿತಿ ಹೊರ ಬರಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಕೋನದಿಂದಲು ಕೂಡ ತನಿಖೆ ನಡೆಯುತ್ತಿದೆ. ಎಲ್ಲ ಠಾಣೆಗಳನ್ನು ಅಲರ್ಟ್ ಮಾಡಿ ಸಿಸಿಟಿವಿ ಪರಿಶೀಲನೆ ಮಾಡಲಾಗಿದೆ. ಈ ನಡುವೆ ಕೆಲವು ಶಂಕೆ ವ್ಯಕ್ತಪಡಿಸಲಾಗುತ್ತಿದೆ. ಎಲ್ಲವನ್ನೂ ಕೂಡ ಈಗಲೇ ಹೇಳಲು ಸಾಧ್ಯವಿಲ್ಲ. ನನಗೂ ದಿನಕ್ಕೆ ಎರಡು ಮೂರು ಸಲ ರೇಣುಕಾಚಾರ್ಯ ಫೋನ್ ಮಾಡುತ್ತಾ ಇದ್ದರು ಎಂದರು.
ರೇಣುಕಾಚಾರ್ಯ ಜೊತೆ ಚರ್ಚಿಸಿ ತನಿಖೆ
ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್(24) ಶವ ಪತ್ತೆ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕುಟುಂಬಸ್ಥರು ನೀಡುವ ದೂರಿನಂತೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಶಾಸಕ ರೇಣುಕಾಚಾರ್ಯ ಜೊತೆ ಚರ್ಚಿಸಿ ತನಿಖೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಈ ವೇಳೆ ಚಂದ್ರಶೇಖರ್ ತಂದೆಯ ಅಭಿಪ್ರಾಯ ಪಡೆಯುತ್ತೇವೆ ಎಂದರು.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:20 pm, Thu, 3 November 22