ದಾವಣಗೆರೆ ಸ್ಮಾರ್ಟ್​ಸಿಟಿಗೆ ಹೆಗ್ಗುರುತಾಗಿ ನಿಂತ ಬೃಹತ್ ಗಾಜಿನ ಮನೆ; ಗಮನಸೆಳೆಯುತ್ತಿರುವ ಫ್ಲವರ್ ಶೋ

ದಾವಣಗೆರೆಯಲ್ಲಿ ದೇಶದಲ್ಲೇ ವಿಭಿನ್ನವಾದ ಸ್ಮಾರಕ ನಿರ್ಮಾಣ ಆಗುತ್ತಿದೆ. ಇದು ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಇರುವ ಗಾಜಿನ ಮನೆಗಿಂತ ಐದು ಪಟ್ಟು ದೊಡ್ಡ ಸ್ಮಾರಕ. ಸದ್ಯ ರಾಜ್ಯದ ಜನರನ್ನ ತನ್ನತ್ತ ಸೆಳೆಯಲು ಈ ಸ್ಮಾರಕ ಸಜ್ಜಾಗಿದೆ.

ದಾವಣಗೆರೆ ಸ್ಮಾರ್ಟ್​ಸಿಟಿಗೆ ಹೆಗ್ಗುರುತಾಗಿ ನಿಂತ ಬೃಹತ್ ಗಾಜಿನ ಮನೆ; ಗಮನಸೆಳೆಯುತ್ತಿರುವ ಫ್ಲವರ್ ಶೋ
ದಾವಣಗೆರೆ ಸ್ಮಾರ್ಟ್​ಸಿಟಿಗೆ ಹೆಗ್ಗುರುತಾಗಿ ನಿಂತ ಬೃಹತ್ ಗಾಜಿನ ಮನೆ
Follow us
TV9 Web
| Updated By: Rakesh Nayak Manchi

Updated on:Nov 13, 2022 | 11:57 AM

ದಾವಣಗೆರೆ: ಕೇಂದ್ರ ಸರ್ಕಾರದ ಸ್ಮಾರ್ಟ್​ಸಿಟಿ ಯೋಜನೆಗೆ ಆಯ್ಕೆಯಾದ ದಾವಣಗೆರೆಯಲ್ಲೊಂದು ಬೃಹತ್ ಸ್ಮಾರಕವೊಂದು ನಿರ್ಮಾಣವಾಗುತ್ತಿದ್ದು, ರಾಜ್ಯದ ಜನರನ್ನ ತನ್ನತ್ತ ಸೆಳೆಯಲು ಸಜ್ಜಾಗುತ್ತಿದೆ. ಕುಂದವಾಡ ಕೆರೆ ಹತ್ತಿರ ರಾಷ್ಟ್ರೀಯ ಹೆದ್ದಾರಿ 48ರಿಂದ ಕಂಡು ಬರುವಂತೆ ಸುಮಾರ 25 ಕೋಟಿ ವೆಚ್ಚದಲ್ಲಿ ವಿಶೇಷ ಗಾಜಿನ ಅರಮನೆ ನಿರ್ಮಾಣವಾಗಿದೆ. ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಇರುವ ಗಾಜಿನ ಮನೆಗಿಂತ ಐದು ಪಟ್ಟು ದೊಡ್ಡದಾಗಿದೆ. ಸುಮಾರು 13 ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಗಾಜಿನ ಮನೆ ಸ್ಮಾರ್ಟ್​ಸಿಟಿಗೆ ಹೆಗ್ಗುರುತಾಗಿ ನಿಂತಿದೆ. ದಾವಣಗೆರೆ ಜನಕ್ಕೆ ಇದೊಂದು ಪ್ರವಾಸಿ ಕೇಂದ್ರವಾಗಿದೆ. ರಾಜ್ಯೋತ್ಸವದ ಹಿನ್ನೆಲೆ ಗಾಜಿನ ಮನೆಗೆ ಜೀಲಕಳೆ ಬಂದಿದೆ. ಇದನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಇಲ್ಲಿ ಕನ್ನಡ ಹಬ್ಬಕ್ಕಾಗಿ ಫಲಪುಷ್ಪ ಪ್ರದರ್ಶನ ಆರಂಭಗೊಂಡಿದ್ದು, ನಿಜಕ್ಕೂ ಹಬ್ಬದ ವಾತಾವರಣವೇ ನಿರ್ಮಾಣವಾಗಿದೆ.

ಸ್ಮಾರಕದ ಕೆಳಗಡೆ ಗ್ರಾನೇಟ್ ಹಾಕಲಾಗಿದೆ. ಮಳೆಗಾಲ ಬೇಸಿಗೆ ಅನ್ವಯ ಆಗುವಂತೆ ಅಂತಾರಾಷ್ಟ್ರೀಯ ಗುಣ ಮಟ್ಟದ ಗ್ಲಾಸ್​ಗಳನ್ನ ಇಡಿ ಅರಮನೆಗೆ ಅಳವಡಿಸಲಾಗಿದೆ. ಈಗ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಪ್ಲಾವರ್ ಶೋ ನಡೆಯುತ್ತಿದೆ. ಉಳಿದಂತೆ ಬೆಂಗಳೂರಿನಲ್ಲಿ ನಡೆಯುವ ಪ್ಲಾವರ್ ಶೋ ರೀತಿ ಜನವರಿ 26 ಹಾಗೂ ಅಗಸ್ಟ್ 15ರಂದು ನಡೆಯಲಿದೆ. ದೇಶ ಮಾತ್ರವಲ್ಲ ಪ್ರಪಂಚದ ಬಹುತೇಕ ಕಡೆ ಹುಡುಕಾಡಿದರೂ ಇಷ್ಟು ದೊಡ್ಡದಾದ ಗಾಜಿನ ಮನೆ ಕಾಣಸಿಗುವುದು ಅನುಮಾನ. ಈ ಗಾಜಿನ ಮನೆ ತೋಟಗಾರಿಕಾ ಇಲಾಖೆಯ ಅಡಿ ಬರುತ್ತದೆ. ಸಂಜೆ ಆಗುತ್ತಿದ್ದಂತೆ ವಿಶೇಷ ವಿದ್ಯುತ್ ದೀಪದ ಅಲಂಕಾರ ಮಾಡಲಾಗುತ್ತದೆ. ಈ ವಿಶಿಷ್ಟ ದೀಪಾಲಾಂಕರಾವು ಹೊಸದೊಂದು ಲೋಕ ಸೃಷ್ಟಿಸಿದಂತೆ ಗೋಚರಿಸುತ್ತದೆ.

ಇಷ್ಟರಲ್ಲಿಯೇ ಹೈದ್ರಾಬಾದ್ ಯುನಿಕ್ ಟ್ರೀ ಸಂಸ್ಥೆಯವರಿಗೆ ಗಾಜಿನ ಮನೆ ಸುತ್ತಲಿನಲ್ಲಿ ಮರಗಳನ್ನು ಹಾಕಲು ಗುತ್ತಿಗೆ ನೀಡಲಾಗಿದೆ. ಅದರಂತೆ ಸುಮಾರು 10-15 ವರ್ಷದ ಮರಗಳನ್ನ ನೇರವಾಗಿ ಗಾಜಿನ ಮನೆಯ ಅಂಗಳದಲ್ಲಿ ನೆಡಲಾಗುತ್ತದೆ. ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಸಹ ಗಾಜಿನ ಮನೆ ಅಂಗಳಲ್ಲಿಯೇ ನಿರ್ಮಿಸಲಾಗುತ್ತಿದೆ. ಹೀಗಾಗಿ ಪ್ರವಾಸಿಗರನ್ನ ತನ್ನತ್ತ ಸೆಳೆಯಲು ನಿರಂತರವಾಗಿ ಜಿಲ್ಲಾಡಳಿತ ಮಾಡಿದ ಪ್ರಯತ್ನಕ್ಕೆ ಫಲ ಸಿಕ್ಕಿದೆ ಎಂದರೆ ತಪ್ಪಾಗಲಾರದು.

ವರದಿ: ಬಸವರಾಜ್ ದೊಡ್ಮನಿ, ಟಿವಿ9 ದಾವಣಗೆರೆ

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:55 am, Sun, 13 November 22

ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ