ಲಾಕಪ್​ ಡೆತ್​ ಕೇಸ್​: ಠಾಣೆ ಮೇಲೆ ಕಲ್ಲು ತೂರಿದ್ದವರ ಹೆಡೆಮುರಿ ಕಟ್ಟಿದ ಪೊಲೀಸ್​, 10 ಜನ ವಶಕ್ಕೆ

ಮಟ್ಕಾ ಆರೋಪದಲ್ಲಿ ಆದಿಲ್​ನನ್ನ ಪೊಲೀಸರು ಠಾಣೆಗೆ ಕರೆತಂದಿದ್ದರು. ಪೊಲೀಸರ ವಶದಲ್ಲಿದ್ದಾಗ ಮೃತಪಟ್ಟಿದ್ದ. ಆದಿಲ್ ಸಾವಿನ ವಿಚಾರ ತಿಳಿದು ಉದ್ರಿಕ್ತರ ಗುಂಪಿನಿಂದ ಚನ್ನಗಿರಿ ಠಾಣೆ ಮೇಲೆ ದಾಳಿ ಮಾಡಿ ಕಿಡಿಗೇಡಿಗಳು ಪರಾರಿಯಾಗಿದ್ದರು. ಸದ್ಯ ವಿಚಾರವಾಗಿ 10 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆ ಮೂಲಕ ಠಾಣೆ ಮೇಲೆ ಕಲ್ಲು ತೂರಿದ್ದ ಕಿಡಿಗೇಡಿಗಳ ಹೆಡೆಮುರಿ ಕಟ್ಟಿದ್ದಾರೆ.

ಲಾಕಪ್​ ಡೆತ್​ ಕೇಸ್​: ಠಾಣೆ ಮೇಲೆ ಕಲ್ಲು ತೂರಿದ್ದವರ ಹೆಡೆಮುರಿ ಕಟ್ಟಿದ ಪೊಲೀಸ್​, 10 ಜನ ವಶಕ್ಕೆ
ಲಾಕಪ್​ ಡೆತ್​ ಕೇಸ್​: ಕಲ್ಲು ತೂರಿದ್ದವರ ಹೆಡೆಮುರಿ ಕಟ್ಟಿದ ಪೊಲೀಸ್​, 10 ಜನ ವಶಕ್ಕೆ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on:May 25, 2024 | 9:01 PM

ದಾವಣಗೆರೆ, ಮೇ 25: ಚನ್ನಗಿರಿ (Channagiri) ಠಾಣೆ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣಕ್ಕೆ (Lockup Death Case) ಸಂಬಂಧಿಸಿದಂತೆ ಜಿಲ್ಲೆಯ ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಿದ್ದ 10 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಠಾಣೆ ಮೇಲೆ ತೂರಿದ ಕಿಡಿಗೇಡಿಗಳು ವಾಹನಗಳನ್ನು ಜಖಂಗೊಳಿಸಿದ್ದರು. ಮಟ್ಕಾ ಆರೋಪದಲ್ಲಿ ಆದಿಲ್​ನನ್ನ ಪೊಲೀಸರು ಠಾಣೆಗೆ ಕರೆತಂದಿದ್ದರು. ಪೊಲೀಸರ ವಶದಲ್ಲಿದ್ದಾಗ ಮೃತಪಟ್ಟಿದ್ದ. ಆದಿಲ್ ಸಾವಿನ ವಿಚಾರ ತಿಳಿದು ಉದ್ರಿಕ್ತರ ಗುಂಪಿನಿಂದ ಚನ್ನಗಿರಿ ಠಾಣೆ ಮೇಲೆ ದಾಳಿ ಮಾಡಿ ಕಿಡಿಗೇಡಿಗಳು ಪರಾರಿಯಾಗಿದ್ದರು.

ಸಿಸಿ ಕ್ಯಾಮರಾ, ಮೊಬೈಲ್ ಚಿತ್ರೀಕರಣದ ವಿಡಿಯೋ, ಸಾರ್ವಜನಿಕರು ಚಿತ್ರಿಕರಿಸಿದ ವಿಡಿಯೋ ಆಧರಿಸಿ ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದರು. ಐದು ತಂಡ ಮೂಲಕ ವಿಡಿಯೋಗಳನ್ನು ಪರಿಶೀಲನೆ ಮಾಡಿ 40 ಕ್ಕೂ ಹೆಚ್ಚು ಕಿಡಿಗೇಡಿಗಳನ್ನು ಗುರುತಿಸಿದ್ದಾರೆ. ಆ ಪೈಕಿ ಇದುವರೆಗೂ ಹತ್ತು ಜನರನ್ನು ವಶಕ್ಕೆ ಪಡೆದುಕೊಂಡಿದ್ದು ಉಳಿದವರಿಗೆ ಶೋಧ ನಡೆಸಿದ್ದಾರೆ.

ಆದಿಲ್ ಸಾವಿನ ಬಗ್ಗೆ ಒಬ್ಬರು ಒಂದೊಂದು ಹೇಳಿಕೆ ನೀಡ್ತಿದ್ದಾರೆ: ಶಾಸಕ ಬಸವರಾಜ್ ಶಿವಗಂಗಾ 

ಪ್ರಕರಣ ಕುರಿತಾಗಿ ಚನ್ನಗಿರಿಯಲ್ಲಿ ಕಾಂಗ್ರೆಸ್​​ ಶಾಸಕ ಬಸವರಾಜ್ ಶಿವಗಂಗಾ ಪ್ರತಿಕ್ರಿಯಿಸಿದ್ದು, ಆದಿಲ್ ಸಾವಿನ ಬಗ್ಗೆ ಒಬ್ಬರು ಒಂದೊಂದು ಹೇಳಿಕೆ ನೀಡ್ತಿದ್ದಾರೆ. ಕೆಲವರು ಲಾಕಪ್​ ಡೆತ್ ಎಂದು ಆರೋಪ ಮಾಡುತ್ತಿದ್ದಾರೆ. ಕೆಲವರು ಲೋ ಬಿಪಿಯಿಂದ ಮೃತಪಟ್ಟಿದ್ದಾನೆ ಎಂದು ಹೇಳ್ತಿದ್ದಾರೆ. ವರದಿ ಬಂದ ಬಳಿಕ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಲಾಕಪ್ ಡೆತ್​​​​ ಕೇಸ್​ಗೆ ಟ್ವಿಸ್ಟ್: ಉಲ್ಟಾ ಹೊಡೆದ ಆದಿಲ್​ ತಂದೆ

ಠಾಣೆ ಬಳಿ ದಾಂದಲೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಆರೋಪಿಯನ್ನ ವಿಚಾರಣೆಗೆ ಕರೆದುಕೊಂಡು ಹೋದಾಗ ಸಾವು ಆಗಿದೆ. ಉದ್ದೇಶ ಪೂರ್ವಕವಾಗಿ ಯಾರೂ ಏನೂ ಮಾಡಿಲ್ಲ. ಗಲಾಟೆಯಲ್ಲಿ ಭಾಗಿಯಾದವರು, ಮೃತಪಟ್ಟವರು ನಮ್ಮವರೇ. ಸಹಜವಾಗಿ ಒಬ್ಬರೋ ಇಬ್ಬರೋ ಈ ರೀತಿ ಗಲಾಟೆ ಮಾಡಿದ್ದಾರೆ‌. ಮನೆಯಲ್ಲಿ ಸಾವು ಆದಾಗ ಉದ್ರಿಕ್ತರಾಗುವುದು ಸಹಜವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ, ಸರ್ಕಾರ ಚೆನ್ನಾಗಿ ನಡೆಯುತ್ತಿದೆ‌. ಈ ಘಟನೆಯನ್ನ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆಗೆ ಹೋಲಿಸಬೇಡಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:39 pm, Sat, 25 May 24

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್