AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಲಾಕಪ್ ಡೆತ್​​​​ ಕೇಸ್​ಗೆ ಟ್ವಿಸ್ಟ್: ಉಲ್ಟಾ ಹೊಡೆದ ಆದಿಲ್​ ತಂದೆ

ನನ್ನ ಮಗ ಮಟ್ಕಾ ಆಡುತ್ತಿರಲಿಲ್ಲ. ಪೊಲೀಸರಿಗೆ ಕಮಿಷನ್ ಕೂಡ ಕೊಡುತ್ತಿರಲಿಲ್ಲ. ಅಂತವನನ್ನು ಪೊಲೀಸರು ಕರೆದುಕೊಂಡು ಹೋಗಿ ಸಾಯಿಸಿದ್ದಾರೆ ಎಂದು ಆದಿಲ್ ತಂದೆ ಖಲೀಂಮುಲ್ಲಾ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗ್ಗೆ ಲೋ ಬಿಪಿಯಿಂದ ಸಾವನ್ನಪ್ಪಿದ್ದಾನೆ ಎಂದಿದ್ದ ಅವರು ಇದೀಗ ಪೊಲೀಸರೇ ಸಾಯಿಸಿದ್ದಾರೆ ಎಂದು ಉಲ್ಟಾ ಹೊಡೆದಿದ್ದಾರೆ.

ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಲಾಕಪ್ ಡೆತ್​​​​ ಕೇಸ್​ಗೆ ಟ್ವಿಸ್ಟ್: ಉಲ್ಟಾ ಹೊಡೆದ ಆದಿಲ್​ ತಂದೆ
ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಲಾಕಪ್ ಡೆತ್​​​​ ಕೇಸ್​ಗೆ ಟ್ವಿಸ್ಟ್: ಉಲ್ಟಾ ಹೊಡೆದ ಆದಿಲ್​ ತಂದೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ|

Updated on: May 25, 2024 | 5:06 PM

Share

ದಾವಣಗೆರೆ, ಮೇ 25: ಚನ್ನಗಿರಿ (Channagiri) ಪೊಲೀಸ್​ ಠಾಣೆ ಲಾಕಪ್ ​ಡೆತ್​ ಪ್ರಕರಣಕ್ಕೆ (Lockup Death Case) ಸಂಬಂಧಿಸಿದ್ದಂತೆ ಮೃತ ಆದಿಲ್​ ಅಪ್ಪ ಖಲೀಮುಲ್ಲಾ ಇದೀಗ ಉಲ್ಟಾ ಹೊಡೆದಿದ್ದಾರೆ. ಬೆಳಗ್ಗೆ ಲೋ ಬಿಪಿಯಿಂದ ಸಾವನ್ನಪ್ಪಿದ್ದಾನೆ ಎಂದು ಹೇಳಿಕೆ ನೀಡಿದ್ದರು. ಆದರೆ ಇದೀಗ ಇದು ಲಾಕಪ್ ​ಡೆತ್ ಡೆತ್ ಆಗಿದೆ ಎಂದು ಉಲ್ಟಾ ಹೇಳಿಕೆ ನೀಡಿದ್ದಾರೆ. ಈ ಕುರಿತಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗ್ಗೆ ನನಗೆ ಗಾಬರಿಯಿಂದ ಏನೇನೋ‌ ಹೇಳಿದೆ ಎಂದಿದ್ದಾರೆ.

ನನ್ನ ಮಗ ಮಟ್ಕಾ ಆಡುತ್ತಿರಲಿಲ್ಲ. ಪೊಲೀಸರಿಗೆ ಕಮಿಷನ್ ಕೂಡ ಕೊಡುತ್ತಿರಲಿಲ್ಲ. ನನ್ನ ಸೊಸೆ ನೋವಿನಿಂದ ಏನೇನೋ ಹೇಳಿಕೆ ಕೊಡುತ್ತಿದ್ದಾಳೆ. ಕಾರ್ಪೆಂಟರ್ ಕೆಲಸ ಮಾಡಿಕೊಂಡು 2 ಸಾವಿರ ರೂ. ಹಣ ತರುತ್ತಿದ್ದ. ಅಂತವನನ್ನು ಪೊಲೀಸರು ಕರೆದುಕೊಂಡು ಹೋಗಿ ಸಾಯಿಸಿದ್ದಾರೆ ಎಂದು ಆದಿಲ್ ತಂದೆ ಖಲೀಂಮುಲ್ಲಾ ಹೇಳಿದ್ದಾರೆ. ಆದಿಲ್ ಸಾವಿಗೆ ಪೊಲೀಸರೇ ಕಾರಣ, ಆತನಿಗೆ ಯಾವುದೇ ಮೂರ್ಛೆ ರೋಗ ಇರಲಿಲ್ಲ ಅಂತಾ ಆದಿಲ್ ಚಿಕ್ಕಪ್ಪ ಮಹಬೂಬ್ ಅಲಿ ಆರೋಪಿಸಿದ್ದರು.

ನನಗೆ ನ್ಯಾಯ ಕೊಡಿಸಿ: ಆದಿಲ್​​ ಪತ್ನಿ ಆಕ್ರೋಶ

ಆದಿಲ್​​ ಪತ್ನಿ ಹೀನಾ ಖೈಸರ ಪ್ರತಿಕ್ರಿಯಿಸಿದ್ದು, ನನ್ನ‌ಪತಿಯನ್ನು ಪೊಲೀಸರೇ ಕರೆದುಕೊಂಡು ಹೋಗಿ ಹೊಡೆದು ಹಾಕಿದ್ದಾರೆ. ನನಗೆ ಮೂರು‌ ಜನ ಸಣ್ಣ ಮಕ್ಳಳಿದ್ದಾರೆ ಹೀಗೆ ಬದುಕಲಿ. ಈ ಸಣ್ಣ ಮಕ್ಕಳನ್ನ‌ಇಟ್ಟು‌‌ಕೊಂಡು ಹೇಗೆ ಜೀವನ ನಡೆಸಲಿ ಎಂದು ಪ್ರಶ್ನೆ ಮಾಡಿದ್ದಾರೆ. ನನಗೆ ನ್ಯಾಯ ಕೊಡಿಸಿ ಎಂದು ಪತಿಯ ಶವದ ಮುಂದೆ ಆಕ್ರೋಶಗೊಂಡಿದ್ದಾರೆ.

ಇದನ್ನೂ ಓದಿ: ಚನ್ನಗಿರಿ ಲಾಕಪ್​ ಡೆತ್​ ಕೇಸ್​: ಆದಿಲ್ ಅಪ್ಪ, ಚಿಕಪ್ಪ ದ್ವಂದ್ವ ಹೇಳಿಕೆ

ನಿನ್ನೆ ಸಂಜೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಪೊಲೀಸರು, ಆದಿಲ್ ಎಂಬಾತನನ್ನ ವಶಕ್ಕೆ ಪಡೆದಿದ್ದರು.  ಚನ್ನಗಿರಿಯ ಟಿಪ್ಪು ನಗರ ನಿವಾಸಿ ಯಾಗಿದ್ದ ಆದಿಲ್, ಮಟ್ಕಾ ಆಡಿಸುತ್ತಿದ್ದ ಆರೋಪ ಎದುರಿಸುತ್ತಿದ್ದ. ಹೀಗಾಗಿ ಸಂಜೆ ಠಾಣೆಗೆ ಕರೆತಂದ ಪೊಲೀಸರು ತನಿಖೆಗೆ ಒಳಪಡಿಸಿದ್ದರು. ಆದರೆ ಠಾಣೆಗೆ ಬರ್ತಿದ್ದಂತೆ ಬಿಪಿ ಲೋ ಆಗಿದೆಯಂತೆ. ಕೂಡಲೇ ಆತನನ್ನ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸಿದೇ  ಆದಿಲ್ ಆಸ್ಪತ್ರೆಯಲ್ಲಿ ಉಸಿರು ಚೆಲ್ಲಿದ್ದಾನೆ.

ಸಾವಿನ ವಿಷಯ ಗೊತ್ತಾಗುತ್ತಿದ್ದಂತೆ ರೊಚ್ಚಿಗೆದ್ದ ಆತನ ಕಡೆಯವರು ಧುತ್ತನೇ ಠಾಣೆಗೆ ನುಗ್ಗಿ ಬಂದಿದ್ದಾರೆ. ಕೈಗೆ ಸಿಕ್ಕ ಕಲ್ಲೆಸೆದು ಇಡೀ ಠಾಣೆಯನ್ನ ಧ್ವಂಸಗೊಳಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ, 11 ಪೊಲೀಸರಿಗೆ ಗಾಯ, 10ಕ್ಕೂ ಹೆಚ್ಚು ವಾಹನ ಜಖಂ

ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಪ್ರತಿಕ್ರಿಯಿಸಿದ್ದು, ಆದಿಲ್ ಠಾಣೆಯಲ್ಲಿ ಆರೇಳು ನಿಮಿಷ ಕೂಡ ಇರಲಿಲ್ಲ. ಆತ ಹೇಗೆ ಸತ್ತ ಅಂತಾ ಆತನ ಕುಟುಂಬಸ್ಥರಿಗೂ ನಾವು ಕನ್ವಿನ್ಸ್​ ಮಾಡಿದ್ದೇವೆ. ಆದರೆ ಅಲ್ಲಿದ್ದ ಬೇರೆ ಗುಂಪೊಂದು ಠಾಣೆ ಮೇಲೆ ದಾಳಿ ಮಾಡಿದೆ ಅಂತಾ ಹೇಳಿದ್ದಾರೆ.

ರಾಜ್ಯದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!