AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಹರ ಪಂಚಮಸಾಲಿ ಮಠದ ಟ್ರಸ್ಟ್​​ನಿಂದ 10 ಕೋಟಿ ರೂ. ಅವ್ಯವಹಾರ ಆರೋಪ: ಡಿಸಿಗೆ ದೂರು

ಹರಿಹರ ಪಂಚಮಸಾಲಿ ಮಠದ ಟ್ರಸ್ಟ್ ಸರ್ಕಾರಿ ಅನುದಾನದಲ್ಲಿ 10 ಕೋಟಿ ರೂಪಾಯಿ ಅವ್ಯವಹಾರ ನಡೆಸಿದೆ ಎಂದು ಆರೋಪಿಸಿ 'ಮಠದ ಲೆಕ್ಕಕೊಡಿ ಚಳುವಳಿ ಸಮಿತಿ' ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದೆ. ಕಟ್ಟಡ ಕಾಮಗಾರಿ ಮತ್ತು ಸ್ಥಳ ಪರಿಶೀಲನೆ ಮಾಡದೆ ಮಠದ ಕೆಲವು ಟ್ರಸ್ಟಿಗಳೊಂದಿಗೆ ಅಧಿಕಾರಿಗಳೂ ಶಾಮೀಲಾಗಿದ್ದಾರೆ. ಕಾಮಗಾರಿ ಪೂರ್ಣಗೊಳ್ಳದಿದ್ದರೂ ಕೇವಲ 44 ದಿನಗಳಲ್ಲಿ ಹಣ ಬಿಡುಗಡೆ ಮಾಡಿ ಸರ್ಕಾರದ ದುಡ್ಡನ್ನು ದುರುಪಯೋಗ ಮಾಡಿದ್ದಾರೆ ಎಂದು ಸಮಿತಿ ದೂರಿದೆ.

ಹರಿಹರ ಪಂಚಮಸಾಲಿ ಮಠದ ಟ್ರಸ್ಟ್​​ನಿಂದ 10 ಕೋಟಿ ರೂ. ಅವ್ಯವಹಾರ ಆರೋಪ: ಡಿಸಿಗೆ ದೂರು
ಹರಿಹರ ಮಠದ ಟ್ರಸ್ಟ್​ ವಿರುದ್ಧ ಸ್ಫೋಟಕ ಆರೋಪImage Credit source: Tv9 Kannada
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Sep 17, 2026 | 3:15 PM

Share

ದಾವಣಗೆರೆ, ಸೆಪ್ಟೆಂಬರ್​​ 17: ಹರಿಹರ ಪಂಚಮಸಾಲಿ ಮಠದ ಟ್ರಸ್ಟ್​​ನಿಂದ 10 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಮಠದ ಲೆಕ್ಕಕೊಡಿ ಚಳುವಳಿ ಸಮಿತಿ ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ತನಿಖೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಮಠಕ್ಕೆ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ‌ ಇಲಾಖೆಯಿಂದ ಹತ್ತು ಕೋಟಿ, ಪಂಚಾಯತ ರಾಜ್ ಇಲಾಖೆಯಿಂದ 3 ಕೋಟಿ ಸೇರಿದಂತೆ ವಿವಿಧ ಇಲಾಖೆಗಳಿಂದ ಒಟ್ಟು 16 ಕೋಟಿ ರೂಪಾಯಿ ಹಣ ಬಂದಿದೆ. ಆದರೆ ಆ ಪೈಕಿ ಆರು ಕೋಟಿ ರೂಪಾಯಿ ಕಾಮಗಾರಿ ಆಗಿದ್ದು, ಉಳಿದ 10 ಕೋಟಿ ಹಣದಲ್ಲಿ ಏನೂ ಮಾಡಿಲ್ಲ ಎಂದು ಸಮಿತಿ ದೂರಿದೆ.

‘ಕೆಲ ಟ್ರಸ್ಟಿಗಳಿಂದ ಅನುದಾನ ದುರ್ಬಳಕೆ’

ಕಾಮಗಾರಿ ಆಧಾರದ ಮೇಲೆ ಹಣ ಬಿಡುಗಡೆ ಮಾಡಬೇಕು. ಆದರೆ ಇಲ್ಲಿ ಮಾತ್ರ ಕಟ್ಟಡವೇ ಇಲ್ಲದಿದ್ದರೂ ಹಣ ಬಿಡುಗಡೆಯಾಗಿದೆ. ಕೇವಲ 44 ದಿನಗಳಲ್ಲಿ ಹತ್ತುಕೋಟಿ ಹಣ ನೀಡಲಾಗಿದೆ. ಸರ್ಕಾರಕ್ಕೆ ತಪ್ಪು ಮಾಹಿತಿ‌ ನೀಡಿ ಅನುದಾನ ಬಳಕೆ ಪ್ರಮಾಣ ಪತ್ರ ನೀಡಲಾಗಿದ್ದು, ಸರ್ಕಾರವು ಮಠಕ್ಕೆ ನೀಡಿದ್ದ ಅನುದಾನವನ್ನು ಕೆಲವು ಟ್ರಸ್ಟಿಗಳು ತಮ್ಮ ಸ್ವಂತಕ್ಕೆ ದುರ್ಬಳಕೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ದುರ್ಬಳಕೆಯಾದ ಅನುದಾನವನ್ನು ಅದನ್ನು ದುರ್ಬಳಕೆ ಮಾಡಿಕೊಂಡವರಿಂದಲೇ ವಸೂಲಿ ಮಾಡಬೇಕು ಎಂದು ಲೆಕ್ಕಕೊಡಿ ಚಳುವಳಿ ಸಮಿತಿ ಆಗ್ರಹಿಸಿದೆ.

ಇದನ್ನೂ ಓದಿ: ದಾವಣಗೆರೆಯ ತುಲಾಭವನಕ್ಕೆ ಮಾರುಹೋದ ಆಕ್ಸ್‌ಫರ್ಡ್ ವಿವಿ! ತೂಕ-ಅಳತೆ ಸಾಧನಗಳ ಕುರಿತು ಉಪನ್ಯಾಸಕ್ಕೆ ಬಸವರಾಜ್ ಯಳಮಲ್ಲಿಗೆ ಆಹ್ವಾನ

ಅಧಿಕಾರಿಗಳೂ ಶಾಮೀಲು ಆರೋಪ

ಸರ್ಕಾರವು ಅನುದಾನ ಬಿಡುಗಡೆಗೆ ವಿಧಿಸಿದ ಷರತ್ತು ಮತ್ತು ನಿಬಂಧನೆಗಳನ್ನು ಅಂದಿನ ಡಿಸಿ, ಹಿಂದುಳಿದವರ ಕಲ್ಯಾಣ ಇಲಾಖೆ ಅಧಿಕಾರಿಗಳು ಗಾಳಿಗೆ ತೂರಿದ್ದಾರೆ. ಕಟ್ಟಡ ಕಾಮಗಾರಿ ಮತ್ತು ಸ್ಥಳ ಪರಿಶೀಲನೆ ಮಾಡದೆ ಮಠದ ಕೆಲವು ಟ್ರಸ್ಟಿಗಳೊಂದಿಗೆ ಶಾಮೀಲಾಗಿ, ಕಾಮಗಾರಿ ಪೂರ್ಣಗೊಳ್ಳದಿದ್ದರೂ ಕೇವಲ 44 ದಿನಗಳಲ್ಲಿ ಹಣ ಬಿಡುಗಡೆ ಮಾಡಿ ಸರ್ಕಾರದ ದುಡ್ಡನ್ನು ದುರುಪಯೋಗ ಮಾಡಿದ್ದಾರೆ ಎಂದು ಲೆಕ್ಕಕೊಡಿ ಚಳುವಳಿ ಸಮಿತಿ ಆರೋಪಿಸಿದೆ. ಮನವಿಯ ಜೊತೆಗೆ ಕೆಲ ದಾಖಲೆಗಳ ಪ್ರತಿಯನ್ನು ಸಹ ಸಮಿತಿ ಸಲ್ಲಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’