ಪ್ರತೇಕ ಘಟನೆ: ವಿದ್ಯುತ್ ಪ್ರವಹಿಸಿ ಒಟ್ಟು 32 ಕುರಿಗಳು ಬಲಿ

ದಾವಣಗೆರೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಪಟ್ಟಣದ ಹೊರವಲಯದ ಜಮೀನಿನಲ್ಲಿ ವಿದ್ಯುತ್ ತಂತಿ ಹರಿದು ಬಿದ್ದು 17 ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ.

ಪ್ರತೇಕ ಘಟನೆ: ವಿದ್ಯುತ್ ಪ್ರವಹಿಸಿ ಒಟ್ಟು 32 ಕುರಿಗಳು ಬಲಿ
ವಿದ್ಯುತ್ ತಂತಿ ಹರಿದು ಬಿದ್ದು ಕುರಿಗಳು ಸಾವು
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 18, 2023 | 9:45 AM

ದಾವಣಗೆರೆ: ಜಿಲ್ಲೆಯ ಕೂಡ್ಲಿಗಿ(Kudligi) ತಾಲೂಕಿನ ಕಾನಾಹೊಸಳ್ಳಿ ಪಟ್ಟಣದ ಹೊರವಲಯದ ಜಮೀನಿನಲ್ಲಿ ವಿದ್ಯುತ್ ತಂತಿ ಹರಿದು ಬಿದ್ದು 17 ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಹನುಮಜ್ಜರ ಪರಸಪ್ಪ ಎನ್ನುವವರಿಗೆ ಸೇರಿದ 13 ಕುರಿ, 2 ಟಗರು, 2 ಮೇಕೆಗಳು ಇದಾಗಿದೆ. ಇನ್ನು ಕುರಿಗಳು ಮೇಯಲು ಹೋದಾಗ ತುಂಡಾಗಿ ಬಿದ್ದು 11 ಕೆವಿ ವಿದ್ಯುತ್ ತಂತಿ ತಗುಲಿ ಈ ದುರ್ಘಟನೆ ನಡೆದಿದೆ. ಪಕ್ಕದಲ್ಲೇ ಇದ್ದ ಪರಸಪ್ಪ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು, ಪಶು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುರಿ ಸಾಕಾಣಿಕೆಯಿಂದಲೇ ಕುರಿಗಾಹಿ ಪರಸಪ್ಪ ಅವರ ಜೀವನ ನಡೆಯುತ್ತಿದ್ದು, ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಇನ್ನು ಈ ಘಟನೆ ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿದ್ಯುತ್ ಪ್ರವಹಿಸಿ 19 ಕುರಿಗಳ ಸಾವು

ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ಶ್ರೀರಂಗಾಪುರ ಗ್ರಾಮದಲ್ಲಿ ರೈತ ಮಂಜುನಾಥ್ ಎಂಬುವರಿಗೆ ಸೇರಿದ 19 ಕುರಿಗಳು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ನಡೆದಿದೆ. ರಾತ್ರಿ ಸುರಿದ ಮಳೆಯ ಪರಿಣಾಮ ಕುರಿ ಶೆಡ್ಡ ಪಕ್ಕದಲ್ಲಿ ಇದ್ದ ಕಂಬದಿಂದ ವಿದ್ಯುತ್ ಪ್ರವಹಿಸಿ ಈ ಘಟನೆ ನಡೆದಿದ್ದು, ಕುರಿಗಳ ಸಾವಿನಿಂದ ರೈತ ಕಂಗಾಲಾಗಿದ್ದಾನೆ. ಈ  ಘಟನೆ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಸ್ಕಾಂ‌ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೀದಿಗೆ ಬಂದ ಬದುಕು; ಜೀವನಕ್ಕೆ ಆದಾರವಾಗಿದ್ದ ಅಂಗಡಿ ಸುಟ್ಟು ಕರಕಲು

ಬೆಂಗಳೂರು ಗ್ರಾಮಾಂತರ: ಬೆಸ್ಕಾಂ‌ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜೀವನಕ್ಕೆ ಆದಾರವಾಗಿದ್ದ ಅಂಗಡಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಹೊಸಕೋಟೆ ನಗರದ ವಿವಿ ಬಡಾವಣೆಯ ಗಂಗಮ್ಮ ಗುಡಿ ಬಳಿ ನಡೆದಿದೆ. ಕಳೆದ ಹಲವು ದಿನಗಳಿಂದ ವಿದ್ಯುತ್ ಟ್ರಾನ್ಸಪಾರ್ಮರ್ ಅಂಗಡಿ ಮುಂದೆ ವಾಲಿತ್ತು. ಇದನ್ನು ಬದಲಾವಣೆ ಮಾಡುವಂತೆ ಅಂಗಡಿ ಮಾಲೀಕರು ಸಾಕಷ್ಟು ಭಾರಿ ದೂರು ನೀಡಿದ್ದರು. ಆದ್ರೆ, ಎಷ್ಟೇ ದೂರು ನೀಡಿದ್ರು, ಅಧಿಕಾರಿಗಳು ಮಾತ್ರ ಟ್ರಾನ್ಸಫಾರ್ಮರ್ ಬದಲಾಯಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಇದರ ಪರಿಣಾಮ ಇಂದು(ಜು.18)ಮುಂಜಾನೆ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ.

ಇದನ್ನೂ ಓದಿ:Mysore: ಜಮೀನಿಗೆ ಅಳವಡಿಸಿದ್ದ ಸೋಲಾರ್ ವಿದ್ಯುತ್ ತಂತಿಗೆ ಆನೆ ಬಲಿ: ಪ್ರಕರಣ ದಾಖಲು

ಬೆಸ್ಕಾಂ‌ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೀದಿಗೆ ಬಂದ ಬದುಕು

ಇನ್ನು ಟ್ರಾನ್ಸ್ ಫಾರ್ಮರ್​ನಿಂದ ಅಂಗಡಿಗೆ ಬೆಂಕಿ ಹೊತ್ತುಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆ ಹಾಗೂ ವಸ್ತುಗಳು ಬೆಂಕಿಗಾಹುತಿಯಾಗಿದೆ. ಜಕ್ಕಣಚಾರಿ ಎಂಬುವವರಿಗೆ ಸೇರಿದ ಬಟ್ಟೆ ಅಂಗಡಿ ಇದಾಗಿದ್ದು, ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ‌ ನಂದಿಸಿದ್ದಾರೆ. ಘಟನೆ ಕುರಿತು ನ್ಯಾಯ ಕೊಡಿಸುವಂತೆ ನೊಂದ ಅಂಗಡಿ ಮಾಲೀಕರು ಒತ್ತಾಯಿಸುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:42 am, Tue, 18 July 23

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ