ದಾವಣಗೆರೆ: ಕಾಡಾನೆ ದಾಳಿಗೆ 18 ವರ್ಷದ ಯುವತಿ ಸಾವು; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಜಿಲ್ಲೆಯಲ್ಲಿ ಮತ್ತೆ ಕಾಡಾನೆಗಳ ಹಾವಳಿ ಶುರುವಾಗಿದ್ದು, ಕವನಾ ಎಂಬ 18 ವರ್ಷದ ಯುವತಿ ಕಾಡಾನೆ ದಾಳಿಗೆ ಸಾವನ್ನಪ್ಪಿರುವ ಘಟನೆ ಚನ್ನಗಿರಿ ತಾಲೂಕಿನ ಸೋಮಲಾಪು ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ: ಜಿಲ್ಲೆಯಲ್ಲಿ ಮತ್ತೆ ಕಾಡಾನೆಗಳ ಹಾವಳಿ ಶುರುವಾಗಿದ್ದು, ಕವನಾ ಎಂಬ 18 ವರ್ಷದ ಯುವತಿ ಕಾಡಾನೆ ದಾಳಿಗೆ ಸಾವನ್ನಪ್ಪಿರುವ ಘಟನೆ ಚನ್ನಗಿರಿ ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ನಡೆದಿದೆ. ಹೌದು ಅವರೆ ಕಾಯಿ ಹರಿಯಲು ಜಮೀನಿಗೆ ಹೋದ ವೇಳೆ ಮೂರು ಕಾಡಾನೆಗಳು ಏಕಕಾಲಕ್ಕೆ ದಾಳಿ ನಡೆಸಿದ್ದು ಆನೆಗಳ ಕಾಲ್ತುಳಿತದಿಂದ ತೀವ್ರಗಾಯಗೊಂಡ ಬಾಲಕಿಯನ್ನ ಜಿಲ್ಲಾಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಇನ್ನು ಕಳೆದ ಎರಡು ವರ್ಷಗಳಿಂದ ಸೋಮಲಾಪುರ ಹಾಗೂ ಸೂಳೆಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಿಂಡು ಸುತ್ತಾಡುತ್ತಿದ್ದು, ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಆನೆಗಳನ್ನ ಅರಣ್ಯಕ್ಕೆ ಅಟ್ಟಲು ಗ್ರಾಮಸ್ಥರು ವಿನಂತಿಸಿದ್ದಾರೆ. ಇತ್ತ ಮಗಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಕಾಫಿ ತೋಟದ ಮಾಲೀಕನನ್ನು ಅಟ್ಟಾಡಿಸಿದ ಕಾಡಾನೆ; ಕೂದಲೆಳೆ ಅಂತರದಲ್ಲಿ ಪಾರು
ಹಾಸನ : ಕಾಫಿ ತೋಟದ ಮಾಲೀಕನನ್ನು ಕಾಡಾನೆಯೊಂದು ಅಟ್ಟಾಡಿಸಿಕೊಂಡು ಬಂದ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಕಾಫಿ ತೋಟದ ಮಾಲೀಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಪೆನ್ಸಿಲ್ ಕೊರೆ ಎಂಬ ಹೆಸರಿನ ಒಂಟಿಸಲಗ ದಾಳಿ ಮಾಡಿದ್ದು, ಬೆಳಿಗ್ಗೆ ತಮ್ಮ ಕಾಫಿ ತೋಟದಲ್ಲಿ ವಾಕ್ ಮಾಡುವಾಗ ಎದುರುಗಡೆ ಬಂದಿದೆ. ಕಾಡಾನೆ ಓಡಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾಫಿತೋಟದಲ್ಲಿ ಬೀಡು ಬಿಟ್ಟಿರುವ ಆನೆಗಳಿಂದ ಭಯ ಭೀತರಾಗಿರುವ ಜನರು ಕೂಡಲೆ ಅರಣ್ಯ ಇಲಾಖೆಗೆ ಪುಂಡಾನೆಗಳ ಸ್ಥಳಾಂತರಕ್ಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ:Elephant Attack: ಮೈಸೂರಿನಲ್ಲಿ ಆನೆ ದಾಳಿ: ಮಹಿಳೆ ಸಾವು, ಓರ್ವನಿಗೆ ಗಂಭೀರ ಗಾಯ
ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಮಂಡ್ಯ: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ. ಮೈಸೂರು ಮೂಲದ ಧನರಾಜ್(21), ಪ್ರಸನ್ನ(33) ಮೃತ ರ್ದುದೈವಿಗಳು. ಪ್ರವಾಸಕ್ಕೆಂದು ಬಂದು ನದಿಯಲಿ ಈಜಲು ಹೋದಾಗ ಈ ದುರ್ಘಟನೆ ನಡೆದಿದ್ದು, ಕೆಆರ್ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಗಾಂಜಾ ಸಾಗಾಟ ಗ್ಯಾಂಗ್ನ ಹೆಡೆಮುರಿ ಕಟ್ಟಿದ ಬೀದರ್ ಪೊಲೀಸರು
ಬೀದರ್: ಅಂತರ್ ರಾಜ್ಯ ಗಾಂಜಾ ಸಾಗಾಟ ಗ್ಯಾಂಗ್ ಮೇಲೆ ದಾಳಿ ನಡೆಸಿದ ಬೀದರ್ ಪೊಲೀಸರು ನಾಲ್ವರು ಆರೋಪಿಗಳನ್ನ ಹುಮ್ನಾಬಾದ್ ತಾಲೂಕಿನ ತಾಳಮಡಗಿ ಗ್ರಾಮದ ನಿಂಬೂರು ಕ್ರಾಸ್ ಬಳಿ ವಶಕ್ಕೆ ಪಡೆದಿದ್ದಾರೆ. ಬಂಧಿತ ನಾಲ್ವರು ಮಹಾರಾಷ್ಟ್ರದ ರಾಜ್ಯದ ಉಸ್ಮಾನಾಬಾದ್ ಜಿಲ್ಲೆಯವರಾಗಿದ್ದಾರೆ. ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಗಾಂಜಾ ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿದ್ದು, ಬಂಧಿತರಿಂದ ಒಂದು ಕೋಟಿ ರೂಪಾಯಿ ಮೌಲ್ಯದ 100 ಕೆಜಿಯಷ್ಟು ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆ ನಡೆಸಿದ ಪೋಲಿಸರಿಗೆ ಬೀದರ್ ಎಸ್ಪಿ ಬಹುಮಾನ ಘೋಷಿಸಿದ್ದಾರೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:05 am, Sat, 8 April 23