AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿಯನ ಜೊತೆ ಅತ್ತೆ ಪರಾರಿ: ಮೊಬೈಲ್​ ನಲ್ಲಿ ತಾಯಿಯೊಂದಿಗೆ ಗಂಡನ ಸರಸ ನೋಡಿ ಪತ್ನಿ ಶಾಕ್​!

ಅಳಿಯನೋರ್ವ ಹೆಂಡ್ತಿ ತಾಯಿ ಅಂದರೆ ಅತ್ತೆಯೊಂದಿಗೆ ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಸಾಮಾನ್ಯವಾಗಿ ಇಂತಹ ಪ್ರಕರಣಗಳು ಉತ್ತರ ಭಾರತದ ರಾಜ್ಯಗಳಲ್ಲಿ ನಡೆಯುವುದನ್ನು ನೋಡಿದ್ದೇವೆ, ಕೇಳುತ್ತಿದ್ದೆವು. ಆದ್ರೆ, ಅಚ್ಚರಿ ಎಂಬಂತೆ ಕರ್ನಾಟಕದಲ್ಲಿ ಇಂತಹದ್ದೊಂದು ಪ್ರಕರಣ ನಡೆದಿದೆ. ದಾವಣಗೆರೆಯಲ್ಲಿ 25 ವರ್ಷದ ಅಳಿಯನ ಜೊತೆ 55 ವರ್ಷದ ಅತ್ತೆ ಓಡಿಹೋಗಿರುವ ಘಟನೆ ನಡೆದಿದ್ದು, ಮೊಬೈಲ್​​ ನಲ್ಲಿ ತಾಯಿ-ಗಂಡನ ಸರಸ ಸಲ್ಲಾಪ ನೋಡಿ ಪತ್ನಿ ಶಾಕ್ ಆಗಿದ್ದಾಳೆ.

ಅಳಿಯನ ಜೊತೆ ಅತ್ತೆ ಪರಾರಿ: ಮೊಬೈಲ್​ ನಲ್ಲಿ ತಾಯಿಯೊಂದಿಗೆ ಗಂಡನ ಸರಸ ನೋಡಿ ಪತ್ನಿ ಶಾಕ್​!
Davanagere
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Jun 27, 2025 | 5:03 PM

Share

ದಾವಣಗೆರೆ (ಜೂ.27): 25 ವರ್ಷದ ಅಳಿಯನೋರ್ವ (Son In Law) 55 ವರ್ಷದ ಅತ್ತೆಯೊಂದಿಗೆ (mother in law ) ಓಡಿಹೋಗಿರುವ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ. ಗಣೇಶ್ ಎನ್ನುವಾತ ಕಟ್ಟಿಕೊಂಡ ಹೆಂಡಿತಿ ಹೇಮಾಳನ್ನ ಚನ್ನಗಿರಿ ಬಸ್ ನಿಲ್ದಾಣದಲ್ಲಿ ಬಿಟ್ಟು ಅತ್ತೆ ಶೋಭಾ ಜೊತೆ ಪರಾರಿಯಾಗಿದ್ದಾನೆ. ಅಳಿಯ ಗಣೇಶ 25 ವರ್ಷ ವಯಸ್ಸಿನವನಾಗಿದ್ದರೆ, ಅತ್ತೆ ಶೋಭಾ ಗಣೇಶನಿಗಿಂತ 30 ವರ್ಷ ಹಿರಿಯವರು ಅಂದರೆ 55 ವರ್ಷ. ಇನ್ನು ಮದುವೆಯಾದ ಎರಡೇ ತಿಂಗಳಿಗೆ ಪತಿ, ತನ್ನ ಅಮ್ಮನ ಜೊತೆ ಪತಿ ಎಸ್ಕೇಪ್ ಆಗಿರುವುದಕ್ಕೆ ಪತ್ನಿ ಕಣ್ಣೀರಿಟ್ಟಿದ್ದಾಳೆ.

ಶಾಂತಾ ಎನ್ನುವವರು ಮುದ್ದೇನಹಳ್ಳಿ ಗ್ರಾಮದ ನಾಗರಾಜ್ ಎಂಬುವರ ಎರಡನೇ ಪತ್ನಿ. 13 ವರ್ಷದ ಹಿಂದೆ ಮುದ್ದೇನಹಳ್ಳಿ ನಾಗರಾಜ್, ಶಾಂತಾಳನ್ನ ಮದ್ವೆಯಾಗಿದ್ದ. ಇನ್ನು ನಾಗರಾಜ್ ಮೊದಲ ಪತ್ನಿಗೆ ಇಬ್ಬರು ಹೆಣ್ಣು ಮಕ್ಕಳು, ಓರ್ವ ಮಗ. ನಾಗರಾಜ್ ಜೊತೆ ವಾಸವಿದ್ದ ಹಿರಿಯ ಮಗಳು ಹೇಮಾಳನ್ನ, ಎರಡು ತಿಂಗಳ ಹಿಂದೆ ಅಷ್ಟೇ ಮದುವೆ ಮಾಡಿಕೊಟ್ಟಿದ್ದರು.  ಆದ್ರೆ, ಇದೀಗ ಹೆಂಡ್ತಿಯನ್ನು ಬಿಟ್ಟು ಆಕೆಯ ತಾಯಿಯೊಂದಿಗೆ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಯುವಕನ ಹಿಂದೆ ಬಿದ್ದು ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು

ಇನ್ನು ಮದುವೆಗೂ ಮುನ್ನ ಎರಡು ವರ್ಷಗಳ ಹಿಂದೆ ಗಣೇಶನನ್ನು ಮನೆಗೆ ಕರೆದುಕೊಂಡು ಬಂದಿದ್ದ ಶಾಂತಾ, ಮಗಳನ್ನು ಮದುವೆ ಮಾಡಿಕೊಡೋಣ ಮನೆ ಅಳಿಯ ಆಗಿ ಇರ್ತಾನೆ ಎಂದು ನಂಬಿಸಿದ್ದರು. ಅದರಂತೆ ಎರಡು ತಿಂಗಳ ಹಿಂದೆ ಅದ್ದೂರಿಯಾಗಿ ಗಣೇಶನ ಜೊತೆ ಹಿರಿಯ ಮಗಳು ಹೇಮಾಳನ್ನು ಅದ್ಧೂರಿಯಾಗಿ ಮದುವೆ ಮಾಡಲಾಗಿತ್ತು. ಆದ್ರೆ, ಮದುವೆ ಮಾಡಿಕೊಟ್ಟ15 ದಿನಕ್ಕೆ ಗಣೇಶ್ ತನ್ನ ಅತ್ತೆ ಅಂದರೆ ಹೆಂಡ್ತಿಯ(ಹೇಮಾ) ಮಲ ತಾಯಿ ಶಾಂತಾಳೊಂದಿಗೆ ಅಕ್ರಮ ಸಂಬಂಧ ಹೊಂದಿರೋದು ಬೆಳಕಿಗೆ ಬಂದಿದೆ. ಗಣೇಶ್ ಮೊಬೈಲ್‌ನಲ್ಲಿ ಶಾಂತಾ ಜೊತೆ ಅಶ್ಲೀವಾಗಿ ಮಸೇಜ್ ಮಾಡಿರುವುದನ್ನು ಹೇಮಾ ನೋಡಿದ್ದಾಳೆ.

ತಕ್ಷಣ ಮೆಸೇಜ್‌ಗಳನ್ನು ತನ್ನ ತಂದೆ ನಾಗರಾಜ್‌ಗೆ ಹೇಮಾ ಫಾರ್ವರ್ಡ್‌ ಮಾಡಿದ್ದಾಳೆ.  ಗಣೇಶ್ ಹಾಗೂ  ಶಾಂತಾಳ ಸರಸ ಕಂಡು ಶಾಕ್ ಆಗಿದ್ದಾರೆ. ಬಳಿಕ ಇವರಿಬ್ಬರ ಬಣ್ಣ ಬಯಲಾಗುತ್ತಿದ್ದಂತೆ ಶಾಂತಾ ಹಣ, ಆಭರಣ ಕದ್ದು ಗಣೇಶ್ ಜೊತೆ ಪರಾರಿಯಾಗಿದ್ದಾಳೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 4:59 pm, Fri, 27 June 25

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ