ಸಿದ್ದರಾಮಯ್ಯ ಸರ್ಕಾರದಿಂದ 50 ಮೀಟರ್ ರಸ್ತೆ ಅಭಿವೃದ್ಧಿಯಾಗಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಹಾಗೂ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಸಿದ್ದರಾಮಯ್ಯ ಅವಧಿಯಲ್ಲಿ 50 ಮೀಟರ್ ರಸ್ತೆ ಅಭಿವೃದ್ಧಿಯಾಗಿಲ್ಲ. ರಾಷ್ಟ್ರ ವಿರೋಧಿಗಳು, ಭಯೋತ್ಪಾದಕರು ಬೀದಿಗೆ ಇಳಿದು ಕೆಲಸ ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಸರ್ಕಾರದಿಂದ 50 ಮೀಟರ್ ರಸ್ತೆ ಅಭಿವೃದ್ಧಿಯಾಗಿಲ್ಲ: ಕೋಟ ಶ್ರೀನಿವಾಸ ಪೂಜಾರಿ
ಸಿದ್ದರಾಮಯ್ಯ ಸರ್ಕಾರದಿಂದ 50 ಮೀಟರ್ ರಸ್ತೆ ಅಭಿವೃದ್ಧಿಯಾಗಿಲ್ಲಎಂದ ಕೋಟ ಶ್ರೀನಿವಾಸ ಪೂಜಾರಿ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Rakesh Nayak Manchi

Updated on: Mar 03, 2024 | 8:31 PM

ದಾವಣಗೆರೆ, ಮಾ.3: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಹಾಗೂ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ (Kota Srinivas Poojary), ಸಿದ್ದರಾಮಯ್ಯ (Siddaramaiah) ಅವಧಿಯಲ್ಲಿ 50 ಮೀಟರ್ ರಸ್ತೆ ಅಭಿವೃದ್ಧಿಯಾಗಿಲ್ಲ. ರಾಷ್ಟ್ರ ವಿರೋಧಿಗಳು, ಭಯೋತ್ಪಾದಕರು ಬೀದಿಗೆ ಇಳಿದು ಕೆಲಸ ಮಾಡುತ್ತಿದ್ದಾರೆ ಎಂದರು.

ದಾವಣಗೆರೆ ‌ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಣೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದ ಆರೋಪಿಯನ್ನು ಬಂಧಿಸಿಲ್ಲ. ವಿಧಾನಸೌಧದ ಆವರಣದಲ್ಲೇ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಆಗದೇ ಇರುವ ಕೃತ್ಯ ವಿಧಾನಸೌಧದಲ್ಲಿ ನಡೆದಿದೆ. ಎಫ್​ಎಸ್​ಎಲ್ ವರದಿ ಬಂದರೂ ಕಾಂಗ್ರೆಸ್ ಒಪ್ಪಿಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ಇದನ್ನು ಪ್ರಶ್ನಿಸಿದ ಮಾಧ್ಯಮದವರನ್ನು ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆದರಿಸಿದ್ದಾರೆ ಎಂದರು.

ಎಫ್​ಎಸ್​ಎಲ್ ವರದಿ ಇದ್ದರೂ ಈವರೆಗೆ ಎಷ್ಟು ಜನರನ್ನ ಅರೆಸ್ಟ್ ಮಾಡಿದ್ದೀರಿ ಎಂದು ಸರ್ಕಾರವನ್ನು ಪ್ರಶ್ನಿಸಿದ ಕೋಟ ಶ್ರೀನಿವಾಸ್ ಪೂಜಾರಿ, ವಿಧಾನಸೌಧದಲ್ಲೇ ಈ ಘಟನೆ ನಡೆದಿದ್ದರೂ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಇನ್ನು ಹೇಗೆ ದೇಶದ ಜನರನ್ನು ಕಾಪಾಡುತ್ತಾರೆ. ಬಾಯಿ ತೆಗೆದರೆ ಸಂವಿಧಾನ ರಕ್ಷಣೆ ಬಗ್ಗೆ ಕಾಂಗ್ರೆಸ್​ನವರು ಮಾತಾಡುತ್ತಾರೆ. ಆದರೆ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದೇ ಕಾಂಗ್ರೆಸ್. ಈಗ ಸಂವಿಧಾನಕ್ಕೆ ಧಕ್ಕೆ ಆಗಿದೆ ಅಂತಾ ಸಂವಿಧಾನ ಜಾಗೃತಿ ಜಾಥಾ ಮಾಡುತ್ತಾರೆ ಎಂದು ಟೀಕಿಸಿದರು.

ಇದನ್ನೂ ಓದಿ: ಇಡೀ ಸಚಿವ ಸಂಪುಟ ಪಾಕ್ ಪರ ಘೋಷಣೆ ಕೂಗಿದವರ ಪರವಿದೆ: ಕೋಟ ಶ್ರೀನಿವಾಸ್ ಪೂಜಾರಿ

ದೇಶ ವಿರೋಧಿ ಕೃತ್ಯದಲ್ಲಿ ತೊಡಗಿದ್ದವರನ್ನು ಭಾಷಣ ಮಾಡಲು ಆಹ್ವಾನಿಸುತ್ತಾರೆ. ಪರಿಶಿಷ್ಟ ಸಮುದಾಯದ 11 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿದ್ದು ನೋವಿನ ಸಂಗತಿ. ಒಲ್ಲದ ಮನಸ್ಸಿನಿಂದಲೇ ನೀಡಿದ್ದೇನೆಂದು ಸಮಾಜ ಕಲ್ಯಾಣ ಸಚಿವರೇ ಹೇಳಿದ್ದಾರೆ ಎಂದರು.

ಕ್ಷೇತ್ರವಾರು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ

ಲೋಕಸಭೆಗೆ ಕರ್ನಾಟಕದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ವಿಚಾರವಾಗಿ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೂಚನೆ ಮೇರೆಗೆ ರಾಜ್ಯದ ಪ್ರತಿ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಇಂದು ಅಭಿಪ್ರಾಯ ಸಂಗ್ರಹದ ನಂತರ ಈ ಕ್ಷೇತ್ರವನ್ನು ಗೆಲ್ಲುತ್ತೇವೆ ಎನ್ನುವ ವಿಶ್ವಾಸ ಇದೆ ಎಂದರು.

ಸಮರ್ಥ ನಾಯಕನ ಅವಶ್ಯಕತೆ ಹಿನ್ನೆಲೆ ಜನರ ಒಲವು ಬಿಜೆಪಿ ಕಡೆ ಇದೆ. ಪಾರದರ್ಶಕವಾಗಿ ವರದಿ ಸಿದ್ಧಪಡಿಸಿದ್ದೇವೆ, ಅದನ್ನು ಕೇಂದ್ರಕ್ಕೆ ಕಳಿಸುತ್ತೇವೆ ಎಂದ ಅವರು, ಪಕ್ಷ ಎಂದ ಮೇಲೆ ಗುಡುಗು ಮಿಂಚು ಇದ್ದೇ ಇರುತ್ತದೆ. ಮಳೆ ಬಂದ ಮೇಲೆ ಸರಿಯಾಗುತ್ತದೆ. ಪಾರದರ್ಶಕವಾಗಿ ವರದಿ ಮಾಡಿದ್ದೇವೆ ಅದನ್ನು ಕೇಂದ್ರಕ್ಕೆ ಕಳಿಸುತ್ತೇವೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್