ದಾವಣಗೆರೆ: ಗ್ರಾಮದಲ್ಲಿ ಒಂದೇ ದಿನ 7 ಜನ ಸಾವು, ಶವಸಂಸ್ಕಾರಕ್ಕೆ ಸ್ಮಶಾನವಿಲ್ಲದೆ ಪರದಾಟ

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಹೊಸ ಕುಂದವಾಡ ಗ್ರಾಮದಲ್ಲಿ ಒಂದೇ ದಿನ ವಿವಿಧ ಕಾರಣಕ್ಕೆ ಏಳು ಜನರು ಮೃತಪಟ್ಟಿದ್ದಾರೆ. ಅಂತ್ಯಕ್ರಿಯೆಗೆ ಸ್ಮಶಾನ ವಿಲ್ಲದೆ ಕುಟುಂಬಸ್ಥರು ಪರದಾಡಿದರು. ಸರ್ಕಾರ ಸ್ಮಾಶನಕ್ಕೆ ಜಾಗ ನೀಡಬೇಕೆಂದು ಹೊಸ ಕುಂದವಾಡ ನಿವಾಸಿಗಳು ಪ್ರತಿಭಟನೆ ನಡೆಸಿದರು.

ದಾವಣಗೆರೆ: ಗ್ರಾಮದಲ್ಲಿ ಒಂದೇ ದಿನ 7 ಜನ ಸಾವು, ಶವಸಂಸ್ಕಾರಕ್ಕೆ ಸ್ಮಶಾನವಿಲ್ಲದೆ ಪರದಾಟ
ದಾವಣಗೆರೆ ಮಹಾನಗರ ಪಾಲಿಕೆ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ವಿವೇಕ ಬಿರಾದಾರ

Updated on: Jul 11, 2024 | 2:46 PM

ದಾವಣಗೆರೆ, ಜು.08: ದಾವಣಗೆರೆ ಮಹಾನಗರ ಪಾಲಿಕೆ (Davanagere City Corporation) ವ್ಯಾಪ್ತಿಯ ಹೊಸ ಕುಂದವಾಡ ಗ್ರಾಮದಲ್ಲಿ ಒಂದೇ ದಿನ ವಿವಿಧ ಕಾರಣಕ್ಕೆ ಏಳು ಜನರು ಮೃತಪಟ್ಟಿದ್ದು, ಅಂತ್ಯಕ್ರಿಯೆಗೆ ಸ್ಮಶಾನ (Cemetery) ವಿಲ್ಲದೆ ಕುಟುಂಬಸ್ಥರು ಪರದಾಡಿದರು. 3,000 ಜನಸಂಖ್ಯೆ ಹೊಂದಿರುವ ಹೊಸ ಕುಂದುವಾಡದಲ್ಲಿ ಸ್ಮಶಾನವಿಲ್ಲ. ಈ ಬಗ್ಗೆ ಜನರು ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, ಹೊಸ ಕುಂದವಾಡ ನಿವಾಸಿಗಳು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಪಾಲಿಕೆ ಆಯುಕ್ತರು, ಅಧಿಕಾರಿಗಳು ಬರುವಂತೆ ಆಗ್ರಹಿಸಿದರು.

ಹೊಸ ಕುಂದವಾಡ ಗ್ರಾಮದಲ್ಲಿ ಇಂದು (ಜು.12) ಒಂದೇ ದಿನ ಎರಡು ದಿನದ ನವಜಾತ ಶಿಶು ಸೇರಿದಂತೆ 7 ಜನ ಮೃತಪಟ್ಟಿದ್ದಾರೆ. ನಾಲ್ಕು ಜನ ವಯೋಸಹಜದಿಂದ ಸಾವನಪ್ಪಿದ್ದು, ಮೂರು ಜನ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮಾರಿಯಕ್ಕ (70), ಸಂತೋಷ (30), ಈರಮ್ಮ (60), ಸುನಿಲ್ (25), ಶಾಂತಮ್ಮ (65) ಬಿಮಕ್ಕ (70) ಮೃತ ದುರ್ದೈವಿಗಳು.

ಇದನ್ನೂ ಓದಿ: ಅತ್ಯಾಚಾರ ಪ್ರತಿರೋಧಿಸಿದ ನವವಿವಾಹಿತ ಮಹಿಳೆಗೆ ಚಾಕು ಇರಿತ

ಇಲ್ಲಿವರೆಗೂ ಹೊಸ ಕುಂದವಾಡ ಗ್ರಾಮಸ್ಥರು ಪಕ್ಕದ ಹಳೆ ಕುಂದವಾಡ ಊರಿಗೆ ಹೋಗಿ ಶವಸಂಸ್ಕಾರ ಮಾಡುತ್ತಿದ್ದರು. ಆದರೆ, ಇತ್ತಿಚೆಗೆ ಹಬ್ಬದ ವಿಚಾರವಾಗಿ ಎರಡು ಗ್ರಾಮಸ್ಥರ ಮಧ್ಯೆ ಮನಸ್ತಾಪವಾಗಿದೆ. ಮನಸ್ತಾಪ ಹಿನ್ನೆಲೆಯಲ್ಲಿ ಹಳೆ ಕುಂದವಾಡ ಗ್ರಾಮಸ್ಥರು ಶವಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ನಿಮ್ಮ ಗ್ರಾಮದಲ್ಲಿ ನೀವು ಶವಸಂಸ್ಕಾರ ಮಾಡಿ ಎಂದು ಹೇಳಿದ್ದಾರೆ. ಹೀಗಾಗಿ ಹೊಸ ಕುಂದವಾಡ ಗ್ರಾಮಸ್ಥರು ಶವಸಂಸ್ಕಾರಕ್ಕೆ ಜಾಗವಿಲ್ಲ ಪರದಾಡಿದರು.

ಮಗ್ಗಕ್ಕೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ತುಮಕೂರು: ವಿದ್ಯುತ್ ಮಗ್ಗಕ್ಕೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರಿನ ಹಳೆಪಾಳ್ಯದಲ್ಲಿ ನಡೆದಿದೆ. ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆರೆಯಲ್ಲಿ ಶವ ಪತ್ತೆ

ಕೋಲಾರ: ನರಸಾಪುರ ಕೆರೆಯಲ್ಲಿ ಶವ ಪತ್ತೆಯಾಗಿದೆ. ಕೃಷ್ಣಾಪುರ ಗ್ರಾಮದ ಅಮರೇಶ್ ಎಂದು ಗುರುತು ಪತ್ತೆ ಹಚ್ಚಲಾಗಿದೆ. ದುಷ್ಕರ್ಮಿಗಳು ಅಮರೇಶ್​ ಅವರನ್ನು ಕೊಲೆ ಮಾಡಿ ಕೊಲೆ ಮಾಡಿ ಕೆರೆಯಲ್ಲಿ ಬೀಸಾಡಿರುವ ಶಂಕೆ ವ್ಯಕ್ತವಾಗಿದೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಖಾನಾಪುರ-ಜಾಂಬೋಟಿ ರಸ್ತೆಯಲ್ಲಿ ನಡೆದಿದೆ. ಶಂಕರ್ ಗೋಮನಾಚೆ (25), ಆಶೀಶ್ ಪಾಟೀಲ್ (26) ಮೃತ ದುರ್ದೈವಿಗಳು. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಖಾನಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಯುವಕರು ಕಾರಿನಲ್ಲಿ ಬೆಳಗಾವಿಯಿಂದ ಗೋವಾಕ್ಕೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ