ದಾವಣಗೆರೆಯಲ್ಲಿ ಹೃದಯ ವಿದ್ರಾವಕ ಘಟನೆ: ತನ್ನಿಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಶರಣು

ಪತ್ನಿ ಸಾವಿನ ನೋವಿನಲ್ಲೇ ಬದುಕಲು ಆಗದೇ ಪತಿ ಸಹ ದುರಂತ ಸಾವು ಕಂಡಿದ್ದಾರೆ. ತನ್ನಿಬ್ಬರು ಮಕ್ಕಳ್ಳನ್ನು ಕೊಂದು ಬಳಿಕ ತಂದೆ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ನೇಣಿಗೆ ಶರಣಾಗುವ ಮೊದಲು ರಕ್ತದಲ್ಲಿ ಐಲವ್​ ಯು ಹೇಮಾ ಎಂದು ಪತ್ನಿಯ ಹೆಸರು ಗೋಡೆ ಮೇಲೆ ಬರೆದಿದ್ದಾರೆ. ಹೃದಯ ವಿದ್ರಾವಕ‌ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಉದಯ್​ ಏಳು ಪುಟಗಳ ಪತ್ರವೊಂದನ್ನು ಬರೆದಿಟ್ಟು ಸಾವಿನ ಹಾದಿ ತುಳಿದಿದ್ದಾರೆ.

ದಾವಣಗೆರೆಯಲ್ಲಿ ಹೃದಯ ವಿದ್ರಾವಕ ಘಟನೆ: ತನ್ನಿಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಶರಣು
Davanagere
Updated By: ರಮೇಶ್ ಬಿ. ಜವಳಗೇರಾ

Updated on: Apr 17, 2025 | 3:57 PM

ದಾವಣಗೆರೆ, (ಏಪ್ರಿಲ್ 10): ಪತ್ನಿ(Wife) ಸಾವಿನಿಂದ ನೋವು ಅನುಭವಿಸುತ್ತಿದ್ದ ವ್ಯಕ್ತಿ ತನ್ನಿಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ಸಹ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಮನಕಲಕುವ ಘಟನೆ ದಾವಣಗೆರೆ (Davanagere) ಎಸ್‌ಪಿಎಸ್‌ ನಗರದಲ್ಲಿ ನಡೆದಿದೆ. ಮಕ್ಕಳಾದ ಸಿಂಧುಶ್ರೀ(4), ಶ್ರೀಜಯ್‌(3)ನನ್ನು ಕೊಲೆಗೈದು ಬಳಿಕ ತಂದೆ ಉದಯ್‌(35) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆಲ ತಿಂಗಳ ಹಿಂದೆ ಅಷ್ಟೇ ಉದಯ್‌ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪತ್ನಿ ಸಾವಿನ ಬಳಿಕ ಖಿನ್ನತೆಗೆ ಒಳಗಾಗಿದ್ದ ಪತಿ ಉದಯ್‌ , ಇಂದು (ಏಪ್ರಿಲ್ 10) ಮಕ್ಕಳನ್ನು ಸಾಯಿಸಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಇನ್ನು ನೇಣಿಗೆ ಶರಣಾಗುವ ಮೊದಲು ರಕ್ತದಲ್ಲಿ ಐಲವ್​ ಯು ಹೇಮಾ ಎಂದು ಪತ್ನಿಯ ಹೆಸರು ಗೋಡೆ ಮೇಲೆ ಬರೆದಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಚಳಗೆರೆ ನಿವಾಸಿ ಹೇಮಾ ಹಾಗೂ ಉದಯ್ ಪರಸ್ಪರ ಪ್ರೀತಿಸಿ ಮದ್ವೆ ಆಗಿದ್ದರು. ಆದ್ರೆ, ಕಳೆದ ಎಂಟು ತಿಂಗಳ ಹಿಂದೆ ಪತ್ನಿ ಹೇಮಾ ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಪ್ರೀತಿಸಿ ಕೈಹಿಡಿದಾಕೆ ಶಾಸ್ವತವಾಗಿ ಬೊಟ್ಟು ಹೋಗಿದ್ದರಿಂದ ಉದಯ್​ ನೋವಿನಲ್ಲಿದ್ದ. ಕೊನೆಗೆ ನೋವು ಕಡೆದುಕೊಳ್ಳಲಾಗದೇ ಸಾವಿನ ತೀರ್ಮಾನ ಕೈಗೊಂಡಿದ್ದಾರೆ. ಇನ್ನು ನೇಣಿಗೆ ಶರಣಾಗುವ ಮೊದಲು ರಕ್ತದಲ್ಲಿ ಐಲವ್​ ಯು ಹೇಮಾ ಎಂದು ಪತ್ನಿಯ ಹೆಸರು ಗೋಡೆ ಮೇಲೆ ಬರೆದಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲೊಂದು ಅಮಾನುಷ ಕೃತ್ಯ: ಮರಕ್ಕೆ ಕಟ್ಟಿ ಗುಪ್ತಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ

ಇನ್ನು ಮಕ್ಕಳನ್ನ  ಉಸಿರು ಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು, ಶ್ವಾನ ದಳ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ
ಜಾತ್ರೆಗೆ ಬಂದಿದ್ದ ದಲಿತ ಮಹಿಳೆ ಮೇಲೆ ಬಸ್​ನಲ್ಲಿ ಲೈಂಗಿಕ ದೌರ್ಜನ್ಯ ಯತ್ನ
ಬ್ಯಾಂಕ್ ದರೋಡೆ ಮಾಡಲೆಂದೇ ಆ ವೆಬ್​ ಸಿರೀಸ್ ನೋಡಿದ್ದ ಸಹೋದರರು
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ದಾವಣಗೆರೆ: ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಜಲಸಮಾಧಿ

ಒಟ್ಟಿನಲ್ಲಿ ಇಷ್ಟಪಟ್ಟು ಪ್ರೀತಿಸಿ ಮದುವೆಯಾದಕ್ಕೆ ಅರ್ಧಕ್ಕೆ ಬಿಟ್ಟು ಹೋಗಿದ್ದರಿಂದ ನೋವಿನಲ್ಲಿ ಕೊರಗಿದ ಪತಿ ಸಹ ಸಾವನ್ನಪ್ಪಿದ್ದಾನೆ. ಹೆಂಡ್ತಿ ಇಲ್ಲ ಇನ್ನೂ ತಾನು ಸಹ ಸತ್ತರೆ ಮಕ್ಕಳನ್ನು ಯಾರು ನೋಡಿಕೊಳ್ಳುವವರ ಎಂದು ಅವರನ್ನು ಸಹ ತನ್ನ ಜೊತೆಗೆ ಕರೆದುಕೊಂಡು ಹೋಗಿದ್ದು, ಇಡೀ ಕುಟುಂಬವೇ ದುರಂತ ಅಂತ್ಯವಾದಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:24 pm, Thu, 10 April 25