AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಮನೆ ಮುಂದೆ ಮಲಗಿದ್ದ ವೃದ್ಧನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ; ಹಳೆ ದ್ವೇಷದ ಶಂಕೆ

ಮನೆ ಮುಂದೆ ಮಲಗಿದ್ದ ವೃದ್ಧನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಕ್ಯಾಂಪ್​ನಲ್ಲಿ ನಡೆದಿದೆ. ಚಂದ್ರಣ್ಣ(65) ಮೃತ ವ್ಯಕ್ತಿ, ಹಳೇ ದ್ವೇಷದ ಹಿನ್ನೆಲೆಯಲ್ಲಿ ಚಂದ್ರಣ್ಣನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ದಾವಣಗೆರೆ: ಮನೆ ಮುಂದೆ ಮಲಗಿದ್ದ ವೃದ್ಧನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ; ಹಳೆ ದ್ವೇಷದ ಶಂಕೆ
ದಾವಣಗೆರೆಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ
ಕಿರಣ್ ಹನುಮಂತ್​ ಮಾದಾರ್
|

Updated on: Apr 06, 2023 | 3:13 PM

Share

ದಾವಣಗೆರೆ: ಮನೆ ಮುಂದೆ ಮಲಗಿದ್ದ ವೃದ್ಧನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ(Murder) ಮಾಡಿದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಕ್ಯಾಂಪ್​ನಲ್ಲಿ ನಡೆದಿದೆ. ಚಂದ್ರಣ್ಣ(65) ಮೃತ ವ್ಯಕ್ತಿ, ಹಳೇ ದ್ವೇಷದ ಹಿನ್ನೆಲೆಯಲ್ಲಿ ಚಂದ್ರಣ್ಣನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ಮಲೇಬೆನ್ನೂರು ಪೊಲೀಸರು ತನಿಖೆ ನಡೆಸಿದ್ದಾರೆ. ಜೊತೆಗೆ ಮಲೇಬೆನ್ನೂರು ಪ್ರಮುಖ ರಸ್ತೆಗಳ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದ್ದು, ಆರೋಪಿಗಳ ಸುಳಿವು ಮಾತ್ರ ಪತ್ತೆಯಾಗಿಲ್ಲ.

ಕಾರು ಮತ್ತು ಬಸ್ ಮಧ್ಯೆ ಅಪಘಾತ; ಕಾರು ಸವಾರ ಸ್ಥಳದಲ್ಲಿಯೇ ಸಾವು

ಧಾರವಾಡ: ಕಾರು ಮತ್ತು ಬಸ್ ನಡುವೆ ಅಪಘಾತವಾಗಿದ್ದು, ಕಾರು ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕೆಲಗೇರಿ ರಾಷ್ಟೀಯ ಹೆದ್ದಾರಿ 4 ರಲ್ಲಿ ನಡೆದಿದೆ. ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ವ್ಯಕ್ತಿ ಶೇಖಪ್ಪ ಗರಗ(45) ಮೃತ ರ್ದುದೈವಿ. ಇನ್ನು ಈ ಕುರಿತು ಧಾರವಾಡ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Mangaluru: ಚಿಕನ್​ ಸಾಂಬಾರ್​ಗಾಗಿ ತಂದೆ-ಮಗನ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಕರಗ ಮಹೋತ್ಸವದ ವೇಳೆ ಅಗ್ನಿ ಆಕಸ್ಮಿಕ; ಹೊತ್ತ ಉರಿದ ದ್ವಿಚಕ್ರ ವಾಹನಗಳು

ಬೆಂಗಳೂರು: ಐತಿಹಾಸಿಕ ಕರಗ ಮಹೋತ್ಸವದ ವೇಳೆ ಆಕಸ್ಮಿಕವಾಗಿ ದೇವಸ್ಥಾನದ ಮುಂದೆ ಹಚ್ಚಿದ ಕರ್ಪೂರದ ಬೆಂಕಿ ತಗುಲಿ ಬೆಂಕಿ ತಗುಲಿ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಬಳಿಕ ಮೈಕ್​ನಲ್ಲಿ ಅನೌನ್ಸ್ ಮಾಡಿದರೂ ಭಕ್ತರು ಮಾತ್ರ ಬೈಕ್​ ತೆರವು ಮಾಡದ ಕಾರಣ ದೇವಸ್ಥಾನದ ಮುಂದೆ ನಿಲ್ಲಿಸಿದ್ದ 10ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಭಸ್ಮವಾಗಿದೆ.

ಹಾಸನದಲ್ಲಿ 85 ವರ್ಷದ ವೃದ್ಧೆಯನ್ನು ಕೊಲೆ ಮಾಡಿ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್

ಜಮೀನಿನಲ್ಲಿ ವೃದ್ಧೆಯನ್ನು ಕೊಲೆ ಮಾಡಿ ಬಳಿಕ ಅತ್ಯಾಚಾರ  ಎಸಗಿದ ಪೈಶಾಚಿಕ ಕೃತ್ಯ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಏ.1ರಂದು ತನ್ನ ಜಮೀನಿನ ಬಳಿ ವೃದ್ಧೆಯನ್ನು ಕೊಲೆ ಮಾಡಿ ಅತ್ಯಾಚಾರ ಎಸಗಲಾಗಿತ್ತು. ಏ.2ರಂದು ಗ್ರಾಮದ ಜಮೀನಿನಲ್ಲಿ ವೃದ್ಧೆ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಅನುಮಾನಸ್ಪದ ಸಾವು ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ಅದರಂತೆ 5 ವರ್ಷದ ಹಿಂದೆ ಇದೇ ರೀತಿ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯ ಮೇಲೆ ಶಂಕಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯದ ಬಗ್ಗೆ ಬಾಯಿಬಿಟ್ಟಿದ್ದಾನೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ