ಭತ್ತದ ಹುಲ್ಲು ತುಂಬಿದ್ದ ಟ್ರ್ಯಾಕ್ಟರ್‌ಗೆ ಓಮಿನಿ ವ್ಯಾನ್​ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

| Updated By: ವಿವೇಕ ಬಿರಾದಾರ

Updated on: Jan 17, 2024 | 7:43 AM

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್‌ಗೆ ಮಾರುತಿ ಓಮಿನಿ ವ್ಯಾನ್​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭತ್ತದ ಹುಲ್ಲು ತುಂಬಿದ್ದ ಟ್ರ್ಯಾಕ್ಟರ್‌ಗೆ ಓಮಿನಿ ವ್ಯಾನ್​ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು
ಅಪಘಾತ
Follow us on

ದಾವಣಗೆರೆ, ಜನವರಿ 17: ಚನ್ನಗಿರಿ (Channagiri) ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ (State Highway) ಟ್ರ್ಯಾಕ್ಟರ್‌ಗೆ ಮಾರುತಿ ಓಮಿನಿ ವ್ಯಾನ್​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಚನ್ನಗಿರಿ ತಾಲ್ಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದ ಒಂದೇ ಕುಟುಂಬದ ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80) ಮೃತ ದುರ್ದೈವಿಗಳು. ರತ್ನಮ್ಮ ಅವರಿಗೆ ತೀವ್ರ ಗಾಯಗಳಾಗಿವೆ. ಇವರು ವಾಹನದಲ್ಲಿ ಸಂತೇಬೆನ್ನೂರು ಕಡೆಯಿಂದ ಚನ್ನಗಿರಿ ಕಡೆಗೆ ಬರುತ್ತಿದ್ದರು. ಈ ವೇಳೆ ರಾಜ್ಯ ಹೆದ್ದಾರಿಯಲ್ಲಿ ಭತ್ತದ ಹುಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾರೆ. ಹೊಡೆತದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ, ಸ್ಥಳದಲ್ಲೇ ಓರ್ವ ಸಾವು

ಕೊಪ್ಪಳ: ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್​ ಸವಾರ ಮುರ್ತುಜಾ (46) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಬೈಕ್ ಮೂಲಕ ರಸ್ತೆ ದಾಟುವಾಗ ಅಪಘಾತ ಸಂಭವಿಸಿದೆ.  ತಿಂಗಳಿಗೆ ಎರಡ್ಮೂರು ಅಪಘಾತವಾಗುತ್ತವೆ. ರಸ್ತೆಗೆ ಸ್ಪೀಡ್ ಬ್ರೇಕರ್ ಹಾಕುವವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದ ಗ್ರಾಮಸ್ಥರು ಒಂದು ಗಂಟೆಗಳ ಕಾಲ ರಸ್ತೆ ರಾಜ್ಯ ಹೆದ್ದಾರಿ ಬಂದ್ ಮಾಡಿದರು. ರಸ್ತೆಯಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:52 am, Wed, 17 January 24