ದಾವಣಗೆರೆ: ಚಿಕನ್, ಮಟನ್ ತಿನ್ನುತ್ತೀರಿ ಹುಳ ಯಾವ ಲೆಕ್ಕ! ನೀರಿನಲ್ಲಿ ಹುಳ ಇದೆ ಎಂದ ವಿದ್ಯಾರ್ಥಿನಿಯರಿಗೆ ಹೀಗಾ ಹೇಳೋದು ವಾರ್ಡನ್

ದಾವಣಗೆರೆ ನಗರದ ಶಾಮನೂರಿನ ಜೆಎಚ್ ಪಟೇಲ್ ಬಡಾವಣೆಯ ವಿದ್ಯಾರ್ಥಿನಿಯರ ಹಾಸ್ಟೆಲ್​ಗೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಇಂದು(ಶನಿವಾರ) ಸಮಾಜ ಕಲ್ಯಾಣ ಕಛೇರಿ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಜೊತೆಗೆ ವಾರ್ಡನ್​ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ದಾವಣಗೆರೆ: ಚಿಕನ್, ಮಟನ್ ತಿನ್ನುತ್ತೀರಿ ಹುಳ ಯಾವ ಲೆಕ್ಕ! ನೀರಿನಲ್ಲಿ ಹುಳ ಇದೆ ಎಂದ ವಿದ್ಯಾರ್ಥಿನಿಯರಿಗೆ ಹೀಗಾ ಹೇಳೋದು ವಾರ್ಡನ್
ದಾವಣಗೆರೆಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 21, 2024 | 3:12 PM

ದಾವಣಗೆರೆ, ಸೆ.21: ನಗರದ ಶಾಮನೂರಿನ ಜೆಎಚ್ ಪಟೇಲ್ ಬಡಾವಣೆ ವಿದ್ಯಾರ್ಥಿನಿಯರ ಹಾಸ್ಟೆಲ್​ಗೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಇಂದು(ಶನಿವಾರ) ವಿದ್ಯಾರ್ಥಿಗಳು ದಾವಣಗೆರೆ(Davanagere) ನಗರದ ಎಂಸಿಸಿ ಎ ಬ್ಲಾಕ್​ನಲ್ಲಿ ಇರುವ ತಾಲೂಕಾ ಸಮಾಜ ಕಲ್ಯಾಣ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಹಾಸ್ಟೆಲ್ ವಾರ್ಡನ್ ಬಗ್ಗೆ ಆಕ್ರೋಶ ಹೊರಹಾಕಿದ ವಿದ್ಯಾರ್ಥಿನಿ, ‘ನೀರಲ್ಲಿ ಹುಳು ಬಿದ್ದ ವಿಚಾರ ಹೇಳಿದ್ರೆ ಚಿಕನ್, ಮಟನ್ ತಿಂತೀರಾ ನಿಮಗೆ ಹುಳು ಯಾವ ಲೆಕ್ಕ ಎಂದು ವಾರ್ಡನ್ ಕೇಳುತ್ತಾರೆ.

ಅಷ್ಟೇ ಅಲ್ಲ, ವಿದ್ಯಾರ್ಥಿನಿಯರ ನಡತೆ ಬಗ್ಗೆ ಕೆಟ್ಟದಾಗಿ ಮಾತಾಡುತ್ತಾರೆ. ಇದರ ಜೊತೆಗೆ ಮೂರು ತಿಂಗಳಿಂದ ಕುಡಿಯುವ ನೀರು ಹಾಗೂ ಬಳಸಲು ನೀರಿಲ್ಲ. ಊಟದ ವ್ಯವಸ್ಥೆ ಕೂಡ ಸರಿಯಿಲ್ಲ ಎಂದು ಆರೋಪಿಸಿದರು. ಇನ್ನು ಹಾಸ್ಟೆಲ್ ವಿದ್ಯಾರ್ಥಿನಿಯರು ಸುಡುಬಿಸಿಲಿನಲ್ಲಿ ಗಂಟೆಗಳಿಂದ ಹೋರಾಟ ಮಾಡುತ್ತಿದ್ದರೂ ತಾಲೂಕಾ ಸಮಾಜ ಕಲ್ಯಾಣ ಕಚೇರಿ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ:ವಸತಿ ನಿಲಯದ ವಾರ್ಡನ್​ನಿಂದ ಸ್ವಚ್ಚತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಕೊಲೆ ಮಾಡುವುದಾಗಿ ಬೆದರಿಕೆ

ಕಾಲೇಜಿನ ಶುಲ್ಕದಲ್ಲಿ ಹೆಚ್ಚಳ ಖಂಡಿಸಿ ಪ್ರತಿಭಟನೆ

ಕೊಪ್ಪಳ: ಕಾಲೇಜಿನ ಶುಲ್ಕದಲ್ಲಿ ಹೆಚ್ಚಳ ಖಂಡಿಸಿ ಇಂದು ಕಾನೂನು ಪದವೀಧರ ವಿದ್ಯಾರ್ಥಿಗಳು ಕೊಪ್ಪಳ ನಗರದ ಅಟಲ್ ಬಿಹಾರಿ ವಾಜಪೇಯಿ ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು. ಈ ಮೊದಲು ವಾರ್ಷಿಕ 22 ಸಾವಿರ ಶುಲ್ಕವಿತ್ತು. ಆದರೆ ಈ ವರ್ಷ ದಿಢೀರನೆ 8 ಸಾವಿರ ರೂ. ಹೆಚ್ಚಳ ಮಾಡಿ, 30 ಸಾವಿರಕ್ಕೆ ತಂದಿದ್ದಾರೆ. ಈ ಹಿನ್ನಲೆ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಗಿಳಿದರು. ಈ ವೇಳೆ ಕಾಲೇಜ್ ಆಡಳಿತ ಮಂಡಳಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Sat, 21 September 24

ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ