ಕಬ್ಬಿನ ಕಿಚ್ಚಿನ ಬಳಿಕ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್: ಮೆಕ್ಕೆಜೋಳ, ಭತ್ತಕ್ಕೆ ಬೆಂಬಲ ಬೆಲೆಗೆ ಆಗ್ರಹಿಸಿ ಹೋರಾಟಕ್ಕೆ ಸಜ್ಜು
ಕಬ್ಬಿಗೆ ಬೆಲೆ ನಿಗದಿಪಡಿಸುವಂತೆ ರೈತರು ನಡೆಸುತ್ತಿದ್ದ ಹೋರಾಟದ ಕಿಚ್ಚು ತಣಗಾಯಿತು ಎನ್ನುವಷ್ಟರಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗುವ ಸುಳಿವು ಗೋಚರಿಸಿದೆ. ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟಕ್ಕೆ ಸಜ್ಜಾಗಿದೆ.

ದಾವಣಗೆರೆ, ನವೆಂಬರ್ 24: ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಹೋರಾಟ ನಡೆಸಿದ ರೈತರ ಕಿಚ್ಚು (Farmers Protest) ತಣ್ಣಗಾಯಿತು ಎನ್ನುವಷ್ಟರಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆ ನೋವು ಆರಂಭವಾಗಿದೆ. ಈಗಾಲೇ ಮೆಕ್ಕೆಜೋಳ ಹಾಗೂ ಭತ್ತಕ್ಕೆ (Paddy) ಬೆಂಬಲ ನೀಡುವಂತೆ ರೈತ ಸಂಘಗಳು ಹೋರಾಟ ನಡೆಸಿದ್ದು, ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಲ್ಲಿ ಬಿಜೆಪಿ ತಾಲೂಕು ಮಂಡಲದಿಂದ ಬಂದ್ ಕೂಡ ಮಾಡಲಾಗಿತ್ತು. ಇದೀಗ ಹೋರಾಟದ ಕಿಚ್ಚು ಮತ್ತೋಂದು ಹೆಜ್ಜೆ ಮುಂದು ಹೋಗಿದೆ. ಹೋರಾಟಕ್ಕೆ ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಎಂಟ್ರಿ ಕೊಟ್ಟಿದ್ದಾರೆ. ಈಗಾಗಲೇ ಕಬ್ಬು ಹೋರಾಟಗಾರರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಜಯೇಂದ್ರ ಈಗ ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ನೀಡಬೇಕೆಂದು ರಾಜ್ಯ ಸರ್ಕಾರದ ವಿರುದ್ದ ಹೋರಾಟಕ್ಕೆ ಇಳಿಯಲಿದ್ದಾರೆ. ದಾವಣಗೆರೆಯಿಂದ ಆರಂಭಿಸಿ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ.
ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ಬಿಜೆಪಿಯಿಂದ ನವೆಂಬರ್ 25 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನಾ ಮೆರವಣಿಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಸಿ.ಟಿ.ರವಿ, ಎಂ.ಪಿ.ರೇಣುಕಾಚಾರ್ಯ, ಎಸ್.ಎ.ರವೀಂದ್ರನಾಥ್ ಸೇರಿದಂತೆ ಅನೇಖ ರಾಜ್ಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಪ್ರತಿಭಟನೆಯು ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡು ಎಸಿ ಕಚೇರಿವರೆಗೆ ತಲುಪಲಿದ್ದು, ಈ ಮೂಲಕ ಭತ್ತ ಹಾಗೂ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡುವಂತೆ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಲಿದ್ದಾರೆ. ಈ ಬೃಹತ್ ಪ್ರತಿಭಟನೆಯಲ್ಲಿ ದಾವಣಗೆರೆಯಲ್ಲಿ ಜಿಲ್ಲೆಯ ಸಾವಿರಾರು ಜನರ ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಇದನ್ನೂ ಓದಿ: ಟನ್ ಕಬ್ಬಿಗೆ 3500 ರೂ.ಗೆ ಪಟ್ಟು: ವಿಜಯಪುರ, ಬೆಳಗಾವಿ ಹೆದ್ದಾರಿ ಬಂದ್ ಮಾಡಿ ರೈತರ ಪ್ರತಿಭಟನೆ
ಒಟ್ಟಿನಲ್ಲಿ ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ನೀಡುವಂತೆ ಬಿಜೆಪಿ ಬಿದಿಗಿಳಿದು ಹೋರಾಟ ನಡೆಸಲು ಸಜ್ಜಾಗಿದ್ದು, ಇನ್ನಾದರೂ ರಾಜ್ಯ ಸರ್ಕಾರ ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ಬೆಲೆ ನೀಡುವ ಮೂಲಕ ರೈತರ ಹಿತ ಕಾಪಾಡುತ್ತದೆಯಾ ಎಂಬುದನ್ನು ಕಾದು ನೋಡಬೇಕಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:59 pm, Mon, 24 November 25



