ಡಿ. ಕೆ ಶಿವಕುಮಾರ್ ಸ್ವಾಗತ ಮಾಡಿದರೂ ನಾವು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ: ಎಂಟಿಬಿ ನಾಗರಾಜ್
ಡಿ. ಕೆ ಶಿವಕುಮಾರ್ ಸ್ವಾಗತ ಮಾಡಿದರೂ ನಾವು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ ಎಂದು ಸಚಿವ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ.
ದಾವಣಗೆರೆ: ಸದ್ಯ ಬಿಜೆಪಿಯಲ್ಲಿ ವಲಸಿಗರು ಮತ್ತು ಮೂಲ ಬಿಜೆಪಿಗರು ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ನಿಂದ (Congress) ಬಿಜೆಪಿಗೆ (BJP) ವಲಸೆ ಬಂದ ಕೆಲ ಶಾಸಕರಲ್ಲಿ ಹಳ್ಳಿ ಹಕ್ಕಿ ವಿಶ್ವನಾಥ್ ಕೂಡ ಒಬ್ಬರು. ಇದೀಗ ವಿಶ್ವನಾಥ್ ಕಾಂಗ್ರೆಸ್ನತ್ತ ಮುಖಮಾಡಿದ್ದಾರೆ. ಈ ಹಿನ್ನೆಲೆ ಕೆಲ ಶಾಸಕರು ಮತ್ತೆ ಕಾಂಗ್ರೆಸ್ಗೆ ಹೋಗುತ್ತಾರೆ ಎಂಬ ಮಾತಿಗೆ ಉತ್ತರಿಸಿದ ಸಚಿವ ಎಂ.ಟಿ.ಬಿ ನಾಗರಾಜ್ (M. T. B. Nagaraj), ಕೆಪಿಸಿಸಿ (KPCC) ಅಧ್ಯಕ್ಷ ಡಿ. ಕೆ ಶಿವಮಾಕುಮಾರ (D. K. Shivakumar) ಸ್ವಾಗತ ಮಾಡಿದರೂ ನಾವು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲೂ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇವೆ. 125 ಸ್ಥಾನ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಮಗೆಲ್ಲರಿಗೂ ಟಿಕೆಟ್ ಸಿಗುತ್ತದೆ, ಇದರ ಬಗ್ಗೆ ಬೇರೆ ಮಾತಿಲ್ಲ. ನಾವು ಬಿಜೆಪಿಯಲ್ಲೇ ಇರುತ್ತೇವೆ. ಇನ್ನು ಚುನಾವಣೆ ಹೇಗೆ ನಡೆಸಬೇಕು, ಯಾರಿಗೆ ಯಾವ ಉಸ್ತುವಾರಿ ಕೊಡಬೇಕು ಎಂಬುದು ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು
ಇದೆ ವೇಳೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಕಾಂಗ್ರೆಸ್ಗೆ ನಾವೀಕನೇ ಇಲ್ಲ, ಹೀಗಾಗಿ ಬಿಜೆಪಿಗೆ ಬರುತ್ತಿದ್ದಾರೆ. ಬಿಜೆಪಿಯಿಂದ ಯಾರು ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಗುಜರಾತ್ ಮಾದರಿ ಚುನಾವಣೆ ಮಾಡುವುದು ವರಿಷ್ಠರಿಗೆ ಬಿಟ್ಟ ವಿಚಾರ. 2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದು ಅಧಿಕಾರ ಹಿಡಿಯಲಿದೆ. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:55 pm, Sun, 11 December 22