ಎಲ್ಲಾ ವೀರಶೈವ ಲಿಂಗಾಯತರು ಹಿಂದೂಗಳು, ಒಂದೇ ಮೀಸಲಾತಿ ಇರಬೇಕು: ವಚನಾನಂದಶ್ರೀ
ಇದೇ 22 ರಂದು ಅಯೋಧ್ಯಯಲ್ಲಿ ರಾಮ ಮಂದಿರ ಉದ್ಘಾಟನೆ ಆಗಲಿದೆ. ನಮಗೂ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದೆ. ಎಲ್ಲ ವೀರಶೈವ ಲಿಂಗಾಯತರು ಆ ದಿನ ಎಲ್ಲರೂ ಅಂದೇ ರಾಮ ನವಮಿ ಎಂದು ತಿಳಿದು ಪೂಜೆ ಮಾಡುವಂತೆ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಎಂದು ಕರೆ ನೀಡಿದ್ದಾರೆ. ಎಲ್ಲಾ ವೀರಶೈವ ಲಿಂಗಾಯತರಿಗೆ ಒಂದೇ ಮೀಸಲಾತಿ ಇರಬೇಕು ಎಂದಿದ್ದಾರೆ.
ದಾವಣಗೆರೆ, ಜನವರಿ 15: ಧರ್ಮ ಅಂತಾ ಬಂದರೆ ಸಕಲ ವೀರಶೈವ ಲಿಂಗಾಯತರು ಹಿಂದುಗಳು. ಇದೇ 22 ರಂದು ಅಯೋಧ್ಯಯಲ್ಲಿ ರಾಮ ಮಂದಿರ ಉದ್ಘಾಟನೆ ಆಗಲಿದೆ. ನಮಗೂ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದೆ. ಎಲ್ಲ ವೀರಶೈವ ಲಿಂಗಾಯತರು ಆ ದಿನ ಎಲ್ಲರೂ ಅಂದೇ ರಾಮ ನವಮಿ ಎಂದು ತಿಳಿದು ಪೂಜೆ ಮಾಡುವಂತೆ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ (Vachanananda Saree) ಎಂದು ಕರೆ ನೀಡಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಮಠದ ಹರ ಜಾತ್ರೆಯಲ್ಲಿ ಮಾತನಾಡಿದ ಅವರು, ಎಲ್ಲಾ ವೀರಶೈವ ಲಿಂಗಾಯತರಿಗೆ ಒಂದೇ ಮೀಸಲಾತಿ ಇರಬೇಕು ಎಂದು ಹೇಳಿದ್ದಾರೆ.
ನಾವು ಸಮುದಾಯವನ್ನು ಒಡೆಯುವುದಿಲ್ಲ
ಕೆಲವರು 2ಎ, 3ಎ, 3ಬಿ ಮತ್ತು ಎಸ್ಸಿ ಮೀಸಲಾತಿ ಪಡೆಯುತ್ತಿದ್ದಾರೆ. ಒಂದು ಕಣ್ಣಿಗೆ ಬೆಣ್ಣೆ ಹಾಗೂ ಮತ್ತೊಂದು ಕಣ್ಣಿಗೆ ಸುಣ್ಣ ಎನ್ನುವಂತಾಗಿದೆ. ನಾವು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೇಳುತ್ತಿದ್ದೇವೆ. ನಾವು ಸಮುದಾಯವನ್ನು ಒಡೆಯುವುದಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ವೀರಶೈವ ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಬೇಕು: ಶಾಮನೂರು ಶಿವಶಂಕರಪ್ಪ
2ಎ ಮೀಸಲಾತಿಗಾಗಿ ನಾವು ಕಾನೂನು ಹೋರಾಟ ಮಾಡುತ್ತಿದ್ದೇವೆ. ಲಿಂಗಾಯತರನ್ನ ಕೇಂದ್ರದ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಬೇಕು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಮೀಸಲಾತಿ ಪ್ರಕಟಿಸಿದ್ದನ್ನು ವಿರೋಧಿಸಿಲ್ಲ. ಅದೇ ರೀತಿ ಸ್ವಾಗತ ಕೂಡ ಮಾಡಿಲ್ಲ. ಇದಕ್ಕೆ ಬೇಕಾದ ಕಾನೂನು ಹೋರಾಟ ಮಾಡುತ್ತಿದ್ದೇವೆ. ಈ ವಿಚಾರ ಹೆಚ್ಚು ಮಾಧ್ಯಮದಲ್ಲಿ ಬಂದರೆ ಮೀಸಲಾತಿ ಸಿಗಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ದಾವಣಗೆರೆ: ಶಾಮನೂರು ಶಿವಶಂಕರಪ್ಪರ ಮೆರವಣಿಗೆ ಮೂಲಕ ವೀರಶೈವ ಮಹಾಸಭಾ ಅಧಿವೇಶನಕ್ಕೆ ಚಾಲನೆ
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಇದಕ್ಕೆ ಸಮುದಾಯದ ರಾಜಕೀಯ ನಾಯಕರು ಪಕ್ಷಾತೀತವಾಗಿ ಬೆಂಬಲ ಸೂಚಿಸಿದ್ದಾರೆ. ಮೀಸಲಾತಿ ನೀಡದಿದ್ದಲ್ಲಿ ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ನಡೆದ ಹೋರಾಟದ ಮಾದರಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ಇತ್ತೀಚೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:57 pm, Mon, 15 January 24