ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪ; ಶಾಸಕ ಶಾಮನೂರು ಶಿವಶಂಕರಪ್ಪ, ಪುತ್ರ ಮಲ್ಲಿಕಾರ್ಜುನ್ ವಿರುದ್ಧ FIR

ವಿಧಾನಸಭೆ ಚುನಾವಣೆ ದಿನಾಂಕ ನಿನ್ನೆ(ಮಾ.29) ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಾಗಿದೆ. ಹೀಗಿದ್ದರೂ ಕೂಡ ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ದಾವಣಗೆರೆ ಉತ್ತರ ಕ್ಷೇತ್ರದ ಮಾಜಿ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ದ FIR ದಾಖಲಾಗಿದೆ.

ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪ; ಶಾಸಕ ಶಾಮನೂರು ಶಿವಶಂಕರಪ್ಪ, ಪುತ್ರ ಮಲ್ಲಿಕಾರ್ಜುನ್ ವಿರುದ್ಧ FIR
ಶಾಮನೂರು ಶಿವಶಂಕ್ರಪ್ಪ ಭಾವಚಿತ್ರವಿರುವ ಅಡುಗೆ ಸಲಕರಣೆ ಪತ್ತೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Mar 30, 2023 | 9:44 AM

ದಾವಣಗೆರೆ: ವಿಧಾನಸಭೆ ಚುನಾವಣೆ(Karnataka Assembly Election) ದಿನಾಂಕ ನಿನ್ನೆ(ಮಾ.29) ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಾಗಿದೆ. ಹೀಗಿದ್ದರೂ ಕೂಡ ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ದಾವಣಗೆರೆ ಉತ್ತರ ಕ್ಷೇತ್ರದ ಮಾಜಿ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ದ FIR ದಾಖಲಾಗಿದೆ. ಹೌದು ಎಸ್​.ಎಸ್ ಮತ್ತು SSM ಅಭಿಮಾನಿ ಬಳಗದ ಹೆಸರಿನಲ್ಲಿ ಜನರಿಗೆ ಗಿಫ್ಟ್​ ಹಂಚುತ್ತಿದ್ದರು. ಈ ವೇಳೆ ಪೊಲೀಸರು ದಾಳಿ ಮಾಡಿದ್ದು, ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದಾವಣಗೆರೆಯ ಕೆಟಿಜೆ ನಗರದ ಠಾಣೆಯಲ್ಲಿ FIR​​​ ದಾಖಲಾಗಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಮಾಹಿತಿ ನೀಡಿದ್ದಾರೆ.

ನಿನ್ನೆ ದಾಳಿ ಮಾಡಿ ಅಪಾರ ಪ್ರಮಾಣದ ಅಡುಗೆ ಸಲಕರಣೆ ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು

ನಿನ್ನೆ( ಮಾ.29) ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭಗತ್ ಸಿಂಗ್ ನಗರದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಿದ್ದ 7.19 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಸಲಕರಣೆಯನ್ನು ಪೊಲೀಸರು ಜಪ್ತಿ ಮಾಡಿದ್ದರು. ಅಡುಗೆ ಸಲಕರಣೆಗಳ ಮೇಲೆ ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಹಾಗೂ ಪುತ್ರ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭಾವಚಿತ್ರವಿದ್ದ ಅಡುಗೆ ಸಲಕರಣೆಗಳು ಇದಾಗಿದ್ದು, ಬಳಿಕ ಕಾಡಜ್ಜಿ ಹನಮಂತಪ್ಪ ಎಂಬುವರ ವಿರುದ್ಧ ದೂರು ದಾಖಲು ಮಾಡಲಾಗಿತ್ತು. ಇದೀಗ ಇದೇ ಆರೋಪದ ಮೇಲೆ ಶಾಸಕ ಶಾಮನೂರು ಶಿವಶಂಕರಪ್ಪ, ಪುತ್ರ ಮಲ್ಲಿಕಾರ್ಜುನ್ ವಿರುದ್ಧ FIR ದಾಖಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ