ದಾವಣಗೆರೆ: ಶಿಕ್ಷಕಿಯರ ಜೊತೆ ಅನುಚಿತ ವರ್ತನೆ ಆರೋಪ: ಶಿಕ್ಷಕನನ್ನು ವರ್ಗಾಯಿಸುವಂತೆ ಗ್ರಾಮಸ್ಥರ ಪಟ್ಟು

ಶಿಕ್ಷಕಿಯರ ಜೊತೆಗೆ ಅನುಚಿತ ವರ್ತನೆ ಹಾಗೂ ಮಕ್ಕಳಿಗೆ ಪಾಠ ಮಾಡದೇ ಸುತ್ತಾಡುತ್ತಿದ್ದಾರೆಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕನನ್ನು ವರ್ಗಾವಣೆ ಮಾಡುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ದಾವಣಗೆರೆ: ಶಿಕ್ಷಕಿಯರ ಜೊತೆ ಅನುಚಿತ ವರ್ತನೆ ಆರೋಪ: ಶಿಕ್ಷಕನನ್ನು ವರ್ಗಾಯಿಸುವಂತೆ ಗ್ರಾಮಸ್ಥರ ಪಟ್ಟು
ಶಿಕ್ಷಕ ಅಜ್ಗರಾಲಿ ಖಾನ್
Follow us
TV9 Web
| Updated By: ವಿವೇಕ ಬಿರಾದಾರ

Updated on: Feb 10, 2023 | 3:30 PM

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಶಿಕ್ಷಕ ಅಜ್ಗರಾಲಿ ಖಾನ್ ಶಾಲೆಯ ಶಿಕ್ಷಕಿಯರ ಜೊತೆಗೆ ಅನುಚಿತ ವರ್ತನೆ ಹಾಗೂ ಮಕ್ಕಳಿಗೆ ಪಾಠ ಮಾಡದೇ ಸುತ್ತಾಡುತ್ತಿದ್ದಾರೆ. ಈ ಹಿನ್ನೆಲೆ ಶಿಕ್ಷಕ ಅಜ್ಗರಾಲಿ ಖಾನ್​ನನ್ನು ವರ್ಗಾವಣೆಗೆ ಮಾಡಬೇಕೆಂದು ಗ್ರಾಮಸ್ಥರು ಶಾಲೆಯ ಆವರಣದಲ್ಲಿ ಪ್ರತಿಭಟ‌ನೆ ನಡೆಸಿದರು.

ಈ ಸಂಬಂಧ ಬಿಇಓ‌ಕಡೆಯಿಂದ ವರದಿ ಪಡೆದು ಶಿಕ್ಷಕನ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಡಿಪಿಐ ತಿಪ್ಪೇಸ್ವಾಮಿ ಭರವಸೆ ನೀಡಿದ್ದಾರೆ. ವಿಶೇಷವಾಗಿ ಕೆಲ ಶಿಕ್ಷಕಿಯರು ಸಹ ಆರೋಪ ಮಾಡಿದ್ದು ಶಿಕ್ಷಕ ತಪ್ಪು ಮಾಡಿದ್ದಾನೆ ಎಂಬ ಸಂಶಯ ವ್ಯಕ್ತವಾಗಿದೆ. ಹಾಗೆ ಮುಸ್ಲಿಂ ಸಮಾಜದ ಗ್ರಾಮ ಪಂಚಾಯಿತ ಸದಸ್ಯರು ಶಿಕ್ಷಕನ ವಿರುದ್ದ ಧ್ವನಿ ಎತ್ತಿದ್ದಾರೆ‌.

ಶಾಲೆ ಸ್ಥಳ ಕಬಳಿಕೆ ಬಗ್ಗೆ ಹೋರಾಟದ ಹಿನ್ನೆಲೆ ನನ್ನ ಮೇಲೆ ಸುಳ್ಳು ಆರೋಪ

ಕಳೆದ 20 ವರ್ಷಗಳಿಂದ ಉರ್ದು ಶಾಲೆಯಲ್ಲಿ ‌ಕನ್ನಡ ಶಿಕ್ಷಕನಾಗಿ ಸೇವೆಯಲ್ಲಿ ಇರುವೆ. ಮಕ್ಕಳಿಗೆ ಕನ್ನಡ ಭಾಷೆಯ ಬಗ್ಗೆ ಅರಿವು ಮೂಡಿಸುವಂತಹ ಕೆಲಸ ಎರಡು ದಶಕಗಳಿಂದ ಮಾಡುತ್ತಿರುವೆ. ಗ್ರಾಮ ಪಂಚಾಯತಿಗೆ ಹೋಗಿ ನಾನು ಶಾಲೆಯ ಜಮೀನು ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇ ಈ ವಿವಾದಕ್ಕೆ ಕಾರಣ ಎಂಬುದು ಆರೋಪ ಎದುರಿಸುತ್ತಿರುವ ಶಿಕ್ಷಕ ಅಜ್ಗರಾಲಿ ಖಾನ್ ಹೇಳಿದ್ದಾರೆ. ಹಾಗೇ ನಾನು ಯಾರಿಗೂ ತೊಂದರೆ ನೀಡಿಲ್ಲ. ಈ ಬಗ್ಗೆ ತನಿಖೆ ಆಗಲಿ ಎಂದು ಅವರು ಆಗ್ರಹಿಸಿದ್ದಾರೆ. ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್