Onion Diseases: ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ, ರೈತರು ಕಂಗಾಲು

ತಾವು ಬೆಳೆದ ಈರುಳ್ಳಿ ಬೆಳೆಯಲ್ಲಿ ಕೊಳೆ ರೋಗ ಕಂಡು ಬರುತ್ತಿದೆ. ಲೋಲೇಶ್ವರ ಗ್ರಾಮದ ಬಸವರಾಜಪ್ಪ, ರಾಜಪ್ಪಗೌಡ್ರು, ಪಂಪಾಪತಿ ಸೇರಿದಂತೆ ಹತ್ತಾರು ರೈತರು ಸುಮಾರು 1,500 ಎಕರೆ ಪ್ರದೇಶದಲ್ಲಿದ್ದ ಬೆಳೆಯನ್ನು ನಾಶ ಮಾಡಿದ್ದಾರೆ. ಬೆಳೆ ಕಟಾವು ಮಾಡಿ ತಿಪ್ಪೆಗೆ ಎಸೆದಿದ್ದಾರೆ.

Onion Diseases: ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ, ರೈತರು ಕಂಗಾಲು
ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ, ರೈತರು ಕಂಗಾಲು
Follow us
| Updated By: ಆಯೇಷಾ ಬಾನು

Updated on:Sep 17, 2021 | 1:55 PM

ದಾವಣಗೆರೆ: ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ ಶುರುವಾಗಿದೆ. ಈರುಳ್ಳಿ ಕಟಾವು ಮಾಡಿ ತಿಪ್ಪೆಗೆ ಎಸೆಯುವಂತ ಪರಿಸ್ಥಿತಿ ರೈತರಿಗೆ ಬಂದಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಹೋಬಳಿಯ ಲೋಲೇಶ್ವರ ಸೇರಿದಂತೆ ಸುತ್ತಮತ್ತ 10 ಗ್ರಾಮಗಳ ರೈತರಿಗೆ ಸಂಕಷ್ಟ ಎದುರಾಗಿದೆ.

ತಾವು ಬೆಳೆದ ಈರುಳ್ಳಿ ಬೆಳೆಯಲ್ಲಿ ಕೊಳೆ ರೋಗ ಕಂಡು ಬರುತ್ತಿದೆ. ಲೋಲೇಶ್ವರ ಗ್ರಾಮದ ಬಸವರಾಜಪ್ಪ, ರಾಜಪ್ಪಗೌಡ್ರು, ಪಂಪಾಪತಿ ಸೇರಿದಂತೆ ಹತ್ತಾರು ರೈತರು ಸುಮಾರು 1,500 ಎಕರೆ ಪ್ರದೇಶದಲ್ಲಿದ್ದ ಬೆಳೆಯನ್ನು ನಾಶ ಮಾಡಿದ್ದಾರೆ. ಬೆಳೆ ಕಟಾವು ಮಾಡಿ ತಿಪ್ಪೆಗೆ ಎಸೆದಿದ್ದಾರೆ. ಅಲ್ಪ ಸ್ವಲ್ಪ ಉಳಿದ ಗುಣಮಟ್ಟದ ಈರುಳ್ಳಿ ಸಹ ಸೂಕ್ತ ಬೆಲೆ ಇಲ್ಲದ ಕಾರಣ. ಮಾರುಕಟ್ಟೆ ತೆಗೆದುಕೊಂದು ಹೋಗಲು ರೈತರು ಹಿಂದೇಟು ಹಾಕಿದ್ದಾರೆ. ಇದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದು ರೈತರ ನೆರವಿಗೆ ಸರ್ಕಾರ ಧಾವಿಸಬೇಕೆಂದು ಆಗ್ರಹಿಸಿದ್ದಾರೆ.

ಏನಿದು ಕೊಳೆರೋಗ? ಕೊಳೆರೋಗ ಒಂದು ಮಾದರಿಯ ಶಿಲೀಂದ್ರ ರೋಗ. ಭೂಮಿಯಲ್ಲಿ ತೇವಾಂಶ ಹೆಚ್ಚಾದಾಗ ಈರುಳ್ಳಿ ಬೆಳೆಗೆ ಈ ರೋಗ ಬರುತ್ತೆ. ಇನ್ನು ಸಾಮಾನ್ಯವಾಗಿ ಪ್ಯುಸೇರಿಯಂ ಕೊಳೆರೋಗ, ಫೈಥಿಯಂ ಮತ್ತು ಆಲ್ಟರ್ನೇರಿಯಾ ಕೊಳೆರೋಗಗಳು ಈರುಳ್ಳಿಗೆ ಬರುತ್ತವೆ. ಈರುಳ್ಳಿ ಬೆಳೆಗಳು ಕೊಳೆತು ಹೋಗುತ್ತವೆ.

onion diseases

ಈರುಳ್ಳಿ ಕಟಾವು ಮಾಡಿ ತಿಪ್ಪೆಗೆ ಎಸೆಯುತ್ತಿರುವ ರೈತರು

ಇದನ್ನೂ ಓದಿ: ಬಾಗಲಕೋಟೆ: ರೈತರಲ್ಲಿ ಆತಂಕ ಸೃಷ್ಟಿಸಿದ ಮೋಡ ಕವಿದ ವಾತಾವರಣ; ಈರುಳ್ಳಿ ಬೆಳೆಗೆ ಕೊಳೆ ರೋಗದ ಭೀತಿ

Published On - 9:26 am, Fri, 17 September 21

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ