ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಅಲರ್ಟ್ ಆದ ಪೊಲೀಸರು, ಗಡಿಭಾಗದ ಚೆಕ್​ಪೋಸ್ಟ್​​ಗಳಲ್ಲಿ ತಪಾಸಣೆ

ಗಡಿಭಾಗದ ಚೆಕ್​ಪೋಸ್ಟ್​​ಗಳಲ್ಲಿ ಪೊಲೀಸರು ಫುಲ್​ ಅಲರ್ಟ್ ಘೋಷಿಸಿದ್ದಾರೆ. ಪೊಲೀಸರು, ಬೆಂಗಳೂರು ಗ್ರಾ. ಜಿಲ್ಲೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿಯ ಚೆಕ್​ಪೋಸ್ಟ್​ನಲ್ಲಿ ಬೆಂಗಳೂರಿಗೆ ಆಗಮಿಸುವ ವಾಹನ ತಪಾಸಣೆ ಮಾಡುತ್ತಿದ್ದಾರೆ.

ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಅಲರ್ಟ್ ಆದ ಪೊಲೀಸರು, ಗಡಿಭಾಗದ ಚೆಕ್​ಪೋಸ್ಟ್​​ಗಳಲ್ಲಿ ತಪಾಸಣೆ
ಚೆಕ್​ಪೋಸ್ಟ್​​ಗಳಲ್ಲಿ ತಪಾಸಣೆ
Follow us
ಆಯೇಷಾ ಬಾನು
|

Updated on:Mar 29, 2023 | 2:18 PM

ದಾವಣಗೆರೆ: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದ್ದು ಇಂದಿನಿಂದ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆ ಗಡಿಭಾಗದ ಚೆಕ್​ಪೋಸ್ಟ್​​ಗಳಲ್ಲಿ ಪೊಲೀಸರು ಫುಲ್​ ಅಲರ್ಟ್ ಘೋಷಿಸಿದ್ದಾರೆ. ಪೊಲೀಸರು, ಬೆಂಗಳೂರು ಗ್ರಾ. ಜಿಲ್ಲೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿಯ ಚೆಕ್​ಪೋಸ್ಟ್​ನಲ್ಲಿ ಬೆಂಗಳೂರಿಗೆ ಆಗಮಿಸುವ ವಾಹನ ತಪಾಸಣೆ ಮಾಡುತ್ತಿದ್ದಾರೆ. ಪೊಲೀಸರು, ಕಂದಾಯ ಇಲಾಖೆ ಅಧಿಕಾರಿಗಳು ಎಲ್ಲಾ ವಾಹನಗಳನ್ನು ತಪಾಸಣೆ ಮಾಡಿ ಕಳಿಸುತ್ತಿದ್ದಾರೆ.

ಗದಗದಲ್ಲೂ ಫುಲ್ ಅಲರ್ಟ್

ಇನ್ನು ಚುನಾವಣೆ ಘೋಷಣೆ ಆಗ್ತಿದ್ದಂತೆ ಗದಗದಲ್ಲಿ ಜಿಲ್ಲಾಡಳಿತ ಅಲರ್ಟ್ ಆಗಿದೆ. ಗದಗ ಜಿಲ್ಲೆಯ ವಿವಿಧೆಡೆ ಹಾಕಿದ್ದ ಸಚಿವರು, ಶಾಸಕರು ಹಾಗೂ ನಾಯಕರ ಕಟೌಟ್ ಬ್ಯಾನರ್ ತೆರುವು ಮಾಡಿದ್ದಾರೆ. ಅಧಿಕಾರಿಗಳು ಗದಗ ಜಿಲ್ಲಾದ್ಯಂತ ತೆರವು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಸರಕಾರದ ಕಾರ್ಯಕ್ರಮಗಳ ಬ್ಯಾನರ್ ಗಳು, ಸಚಿವರ, ಶಾಸಕರ ಕಟೌಟ್ ತೆರವು ಮಾಡಿದ್ದಾರೆ. ರೋಣ ತಾಲೂಕಿನ ಜಕ್ಕಲಿ, ಹೊಳೆಮಣ್ಣೂರು ಗ್ರಾಮಗಳಲ್ಲಿ ಬ್ಯಾನರ್ ತೆಗೆದು ಹಾಕಲಾಗಿದೆ.

ಇದನ್ನೂ ಓದಿ: Assembly Polls: ರಾಜ್ಯ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟ, ಮೇ 10ರಂದು ಮತದಾನ, ಮತಗಳ ಎಣಿಕೆ ಮೇ 13

ಬೆಳಗಾವಿಯಲ್ಲಿ ಮತದಾರರಿಗೆ ಹಂಚಲು ಇಟ್ಟಿದ್ದ ವಸ್ತುಗಳು ಜಪ್ತಿ

ಚುನಾವಣೆ ಘೋಷಣೆ ಆಗ್ತಿದ್ದಂತೆ ಪೊಲೀಸ್ ಇಲಾಖೆ ಅಖಾಡಕ್ಕಿಳಿದಿದೆ. ಮತದಾರರಿಗೆ ಹಂಚಲು ಇಟ್ಟಿದ್ದ ಕುಕ್ಕರ್, ಹೋಲಿಗೆ ಯಂತ್ರ ಸೀಜ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಯರಗಣವಿ ಗ್ರಾಮದ ಶಿವಾನಂದ ಎಂಬ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಸಾಮಾಗ್ರಿಗಳು ಸೀಜ್ ಮಾಡಲಾಗಿದೆ. 49ಹೋಲಿಗೆ ಯಂತ್ರ,  29ಕುಕ್ಕರ್ ಸೇರಿ ಹಲವು ವಸ್ತುಗಳು ಪತ್ತೆಯಾಗಿವೆ. ಸಿಕ್ಕ ವಸ್ತುಗಳ ಮೇಲೆ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಬಸವರಾಜ ಪಟ್ಟಣಶೆಟ್ಟಿ ಭಾವಚಿತ್ರ ಅಂಟಿಸಲಾಗಿದೆ. ಯರಗಟ್ಟಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:18 pm, Wed, 29 March 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ