AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಹರದ ‌ಮನೆ ಮನೆಗೆ ತಲುಪಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ, ರಾಮ ವೇಷಧಾರಿ ಮಕ್ಕಳ ಪಾದ ಪೂಜೆ

ಅಯೋಧ್ಯೆಯಲ್ಲಿ ಶ್ರೀರಾಮ‌ಮಂದಿರ ಉದ್ಘಾಟನೆ ಹಿನ್ನೆಲೆ ‌ರಾಮಮಂದಿರದ ಮಂತ್ರಾಕ್ಷತೆ ಮುಟ್ಟಿಸುವ ವಿಶಿಷ್ಟ ಕಾರ್ಯಕ್ರಮಕ್ಕೆ ದಾವಣಗೆರೆಯಲ್ಲಿ ಚಾಲನೆ ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ಹರಿಹರ ನಗರದ ವಿಜಯನಗರದಲ್ಲಿ ರಾಮ ಲಕ್ಷ್ಮಣ ಸೀತಾ ವೇಷಧಾರಿ ಮಕ್ಕಳ ಪಾದ ಪೂಜೆ ಮಾಡಿ ಸಿಹಿ ವಿತರಣೆ ಮಾಡಲಾಗುತ್ತಿದೆ.

ಹರಿಹರದ ‌ಮನೆ ಮನೆಗೆ ತಲುಪಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ, ರಾಮ ವೇಷಧಾರಿ ಮಕ್ಕಳ ಪಾದ ಪೂಜೆ
ಮನೆ ಮನೆಗೆ ತಲುಪಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ಆಯೇಷಾ ಬಾನು|

Updated on:Jan 02, 2024 | 10:07 AM

Share

ದಾವಣಗೆರೆ, ಜ.02: ಇದೇ ಜನವರಿ 22ರಂದು ರಾಮಮಂದಿರ (Ayodhya Ram Mandir) ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ ಮಂತ್ರಾಕ್ಷತೆಯನ್ನು (Mantrakshate Distribution Campaign) ದೇಶಾದ್ಯಂತ ಪ್ರತಿ ಹಿಂದೂ ಮನೆಗಳಿಗೆ ವಿತರಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಭಾಗವಾಗಿ ದಾವಣಗೆರೆಯ (Davangere) ಹರಿಹರದಲ್ಲಿ ಮನೆ ಮನೆಗೆ ರಾಮ ವಿಶಿಷ್ಟ ಮಂತ್ರಾಕ್ಷತೆಯನ್ನು ಮುಟ್ಟಿಸುವ ಕಾರ್ಯ ನಡೆಯುತ್ತಿದೆ.

ಅಯೋಧ್ಯೆಯಲ್ಲಿ ಶ್ರೀರಾಮ‌ಮಂದಿರ ಉದ್ಘಾಟನೆ ಹಿನ್ನೆಲೆ ‌ರಾಮಮಂದಿರದ ಮಂತ್ರಾಕ್ಷತೆ ಮುಟ್ಟಿಸುವ ವಿಶಿಷ್ಟ ಕಾರ್ಯಕ್ರಮಕ್ಕೆ ದಾವಣಗೆರೆಯಲ್ಲಿ ಚಾಲನೆ ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ಹರಿಹರ ನಗರದ ವಿಜಯನಗರದಲ್ಲಿ ರಾಮ ಲಕ್ಷ್ಮಣ ಸೀತಾ ವೇಷಧಾರಿ ಮಕ್ಕಳ ಪಾದ ಪೂಜೆ ಮಾಡಿ ಸಿಹಿ ವಿತರಣೆ ಮಾಡಲಾಗುತ್ತಿದೆ. ಹರಿಹರದ ಬಡಾವಣೆಯಲ್ಲಿ ಅಯೋಧ್ಯೆಯ ಸಂಭ್ರಮ ಮನೆ ಮಾಡಿದೆ. ಶ್ರೀರಾಮನ ವೇಷಧಾರಿ ಮಗುವಿನ ಪಾದಕ್ಕೆ ನಮಸ್ಕರಿಸಿ ಜನ ಭಕ್ತಿ ಮೆರೆಯುತ್ತಿದ್ದಾರೆ. ಕಳೆದ ಒಂದು ವಾರದಿಂದ‌ ಮನೆ ಮನೆ ರಾಮ ವಿಶೇಷ ಕಾರ್ಯಕ್ರಮದ ಮೂಲಕ ಹರಿಹರ ಜನ ಗಮನ ಸೆಳೆದಿದ್ದಾರೆ.

ಕೊಪ್ಪಳದಲ್ಲೂ ಮಂತ್ರಾಕ್ಷತೆ ಮುಟ್ಟಿಸುವ ಕಾರ್ಯ

ಇನ್ನು ಕೊಪ್ಪಳ ನಗರದಲ್ಲಿ ಹಿಂದೂ ಕಾರ್ಯಕರ್ತರು ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆಯನ್ನು ಮನೆಮನೆಗೆ ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಕೊಪ್ಪಳ ನಗರದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು, ನಗರದ ವಿವಿಧ ಬಡಾವಣೆಗಳಿಗೆ ಹೋಗಿ ಮಂತ್ರಾಕ್ಷತೆಯನ್ನು ನೀಡುವ ಕೆಲಸ ಮಾಡಿದ್ದಾರೆ. ಜಿಲ್ಲೆಯ ಬಹುತೇಕ ಮನೆಗಳಿಗೆ ಮಂತ್ರಾಕ್ಷತೆಯನ್ನು ತಲುಪಿಸಲು ಹಿಂದೂಪರ ಕಾರ್ಯಕರ್ತರು ಮುಂದಾಗಿದ್ದಾರೆ.

ಇದನ್ನೂ ಓದಿ: ಜನವರಿ 22ರಂದು ಮಧ್ಯಾಹ್ನ 12.20ಕ್ಕೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ

ವಿಶ್ವಹಿಂದೂ ಪರಿಷತ್‌ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿವಿಧ ಪರಿವಾರ ಸಂಘಟನೆಗಳು ಭಾರತದಲ್ಲಿರುವ ಸಮಸ್ತ ಹಿಂದೂ ಮನೆಗಳಿಗೆ ಕರಪತ್ರ, ಅಯೋಧ್ಯೆ ರಾಮಮಂದಿರದ ಭಾವಚಿತ್ರ ಹಾಗೂ ರಾಮನ ಪವಿತ್ರ ಮಂತ್ರಾಕ್ಷತೆಯನ್ನು ಮನೆಮನೆಗಳಿಗೆ ಹಂಚುವ ಅಭಿಯಾನ ಕೈಗೊಂಡಿದ್ದಾರೆ.

ಮಂತ್ರಾಕ್ಷತೆ ವಿತರಣೆ ಸಂದರ್ಭದಲ್ಲಿ ಯಾರೂ ಕೂಡ ಹಣವನ್ನು ನೀಡಿವಂತಿಲ್ಲ. ಯಾವುದೇ ಹಣವನ್ನು ಅಥವಾ ಯಾವುದೇ ವಸ್ತು ರೂಪದಲ್ಲಿ ನೀಡಬಾರದು. ಇದೊಂದು ಅಭಿಯಾನವಾಗಿರುವ ಕಾರಣ ಯಾವುದೇ ರೀತಿಯ ವ್ರತಾಚಾರಣೆ, ಕಟ್ಟು ಪಾಡು ನಿಯಮಗಳು ಇರುವುದಿಲ್ಲ ಎಂದು ಸೂಚಿಸಲಾಗಿದೆ.

ಅಯೋದ್ಯೆಯಲ್ಲಿ ರಾಮ ಪ್ರಾಣಪ್ರತಿಷ್ಠೆಯ ಸಂದರ್ಭದಲ್ಲಿ ರಾಜ್ಯದ ಸಾವಿರಾರು ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪೂಜೆ, ಹವನ ಸತ್ಸಂಗ, ಭಜನೆ ಮುಂತಾದ ಕಾರ್ಯಕ್ರಮ ನಡೆಯಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:37 am, Tue, 2 January 24

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್