AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayodhya Ram Mandir: 2024ರ ಸಂಕ್ರಾಂತಿ ವೇಳೆಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

2024ರ ಸಂಕ್ರಾಂತಿ ವೇಳೆಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಆಗಲಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

Ayodhya Ram Mandir: 2024ರ ಸಂಕ್ರಾಂತಿ ವೇಳೆಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 12, 2022 | 5:26 PM

Share

ದಾವಣಗೆರೆ: 2024ರ ಸಂಕ್ರಾಂತಿ ವೇಳೆಗೆ ಅಯೋಧ್ಯೆ ರಾಮಮಂದಿರ (Ayodhya Ram Mandir) ಉದ್ಘಾಟನೆ ಆಗಲಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Theertha Swamiji) ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಮಮಂದಿರ ನಿರ್ಮಾಣ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ. ಈಗಾಗಲೇ ಪ್ರಧಾನ ಮಂತ್ರಿಗಳ ಆಶಯದಂತೆ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿಗಳು ಸಂಶೋಧನೆ ಮಾಡುತ್ತಿದ್ದಾರೆ. ರಾಮನವಮಿ ದಿನ ಅಯೋಧ್ಯೆಯ ರಾಮ ಮಂದಿರ ಶ್ರೀರಾಮನ ಮೂರ್ತಿಯ ಮೇಲೆ ತಿಲಕದ ರೀತಿಯಲ್ಲಿ ಸೂರ್ಯ‌ನ ಕಿರಣಗಳು ಬಿಳುವಂತೆ ಮಂದಿರ ನಿರ್ಮಾಣದ ಕೆಲಸ ನಡೆಯುತ್ತಿದೆ ಎಂದು ಹೇಳಿದರು. ಇನ್ನು ಪಠ್ಯದಲ್ಲಿ ಭಗವದ್ಗೀತೆಯನ್ನು ಸೇರಿಸಿದರೆ ಒಳ್ಳೆಯದು. ಗೀತೆಯಲ್ಲಿ ಕೃಷ್ಣ ಬೋಧನೆ ಮಾಡಿದ ತತ್ವಗಳ ಅಗತ್ಯ ಇಂದು ಹೆಚ್ಚಾಗಿದೆ. ಇದೇ ಕಾರಣಕ್ಕೆ ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿಶ್ವಪ್ರಸನ್ನ ತೀರ್ಥಶ್ರೀ ಹೇಳಿದರು.

2023ರ ಡಿಸೆಂಬರ್ ಒಳಗೆ ಗರ್ಭಗುಡಿ ನಿರ್ಮಾಣ

ರಾಮಮಂದಿರ ನಿರ್ಮಾಣ ಕಾರ್ಯವನ್ನು ಈಗ ವೇಗವಾಗಿ ಮಾಡಲಾಗುತ್ತಿದೆ. 2023ರ ಡಿಸೆಂಬರ್ ತಿಂಗಳೊಳಗಾಗಿ ರಾಮಮಂದಿರದ ಗರ್ಭಗುಡಿ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಗುರಿಯನ್ನು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಾಕಿಕೊಂಡಿದೆ. ಗರ್ಭಗುಡಿಯಲ್ಲಿ ರಾಮಲಲ್ಲಾನನ್ನು ಪ್ರತಿಷ್ಠಾಪನೆ ಮಾಡಲಾಗುತ್ತೆ. ಬಳಿಕ ಗರ್ಭಗುಡಿಯ ದರ್ಶನ ಮಾಡಲು ಭಕ್ತರಿಗೆ ಅವಕಾಶ ನೀಡಲಾಗುತ್ತೆ. ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ್ನು ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ರಚಿಸಿದ್ದು, ಈ ಟ್ರಸ್ಟ್ ಈಗ ಮಂದಿರ ನಿರ್ಮಾಣದ ಹೊಣೆಯನ್ನು ಹೊತ್ತುಕೊಂಡಿದೆ. ಚಂಪತ್ ರಾಯ್ ಅವರು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿಯಾಗಿದ್ದು, ನಿತ್ಯ ಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ ಹಾಗೂ ಮೇಲ್ವಿಚಾರಣೆ ಮಾಡುತ್ತಿದ್ದಾರೆ. 2023ರ ಡಿಸೆಂಬರ್​ನೊಳಗಾಗಿ ಗರ್ಭಗುಡಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುತ್ತೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ: ಜೂನ್ 1ಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ರಿಂದ ಗರ್ಭಗುಡಿಗೆ ಶಂಕುಸ್ಥಾಪನೆ

2024ರ ಲೋಕಸಭಾ ಚುನಾವಣೆಗೂ ಮುನ್ನ ಮಂದಿರದ ಗರ್ಭಗುಡಿ ರೆಡಿ

2024ರ ಏಪ್ರಿಲ್- ಮೇ ತಿಂಗಳಲ್ಲಿ ದೇಶಾದ್ಯಂತ ಲೋಕಸಭಾ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ಶತಮಾನದ ಕನಸಾದ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿ ನಿರ್ಮಿಸಿ ರಾಮಲಲ್ಲಾನನ್ನು ಪ್ರತಿಷ್ಠಾಪನೆ ಮಾಡಬೇಕು ಎನ್ನುವ ಪ್ಲ್ಯಾನ್ ಹಾಕಿಕೊಳ್ಳಲಾಗಿದೆ. ಹೀಗೆ 2024ರ ಏಪ್ರಿಲ್ ತಿಂಗಳಿಗೂ ಮುನ್ನ ರಾಮಮಂದಿರದ ಗರ್ಭಗುಡಿ ನಿರ್ಮಾಣವಾದರೇ, ಇದನ್ನು ಇಡೀ ದೇಶದ ಜನರಿಗೆ ತೋರಿಸಲಾಗುತ್ತೆ. ಕೇಂದ್ರದ ಮೋದಿ ಸರ್ಕಾರ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಮಾಡಿತು ಎಂದು ದೇಶದ ಜನರಿಗೆ ಹೇಳಲಾಗುತ್ತೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೇ, ಅದರ ಕ್ರೆಡಿಟ್ ಕೇಂದ್ರ ಸರ್ಕಾರ ಹಾಗೂ ಅಯೋಧ್ಯೆಯಲ್ಲಿ ಭವ್ಯ, ದಿವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಅಡಿಪಾಯಕ್ಕೆ ಬೆಂಗಳೂರಿನಿಂದ ಕಲ್ಲುಗಳ ರವಾನೆ, ಹನುಮನ ನಾಡಿನಿಂದ ರಾಮನೆಡೆಗೆ ಹೊರಟ ಲಾರಿಗಳು

ಪ್ರಧಾನಿ ಮೋದಿ ಅವರಿಗೂ ಸಹಜವಾಗಿಯೇ ಹೋಗುತ್ತೆ. ಹೀಗಾಗಿ 2024ರ ಲೋಕಸಭಾ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದ್ದರ ಕ್ರೆಡಿಟ್ ಪಡೆದು ಮೋದಿ ಚುನಾವಣಾ ಪ್ರಚಾರ ಭಾಷಣ ನಡೆಸುವುದು ಸಹಜ. ಪ್ರಧಾನಿ ಮೋದಿ ಅವರಿಗೂ ಸಹಜವಾಗಿಯೇ ಹೋಗುತ್ತೆ. ಹೀಗಾಗಿ 2024ರ ಲೋಕಸಭಾ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದ್ದರ ಕ್ರೆಡಿಟ್ ಪಡೆದು ಮೋದಿ ಚುನಾವಣಾ ಪ್ರಚಾರ ಭಾಷಣ ನಡೆಸುವುದು ಸಹಜ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:16 pm, Mon, 12 December 22