ದಾವಣಗೆರೆ, ಜನವರಿ 18: ಮಹಾಯೋಗಿ ಸರ್ವಜ್ಞರ ವಚನದಂತೆ ಮಹಾಮಾನವತಾವಾದಿ ದಾರ್ಶನಿಕ, ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕನಾಗಿ ಘೋಷಣೆ ಹಿನ್ನೆಲೆ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿಯ ಗುರುಪೀಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ವಜ್ಞನ ತ್ರಿಪದಿ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತು ಸಂಪುಟ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ‘ಬಸವಪೀಠವು ಎದ್ದು ವಸೆದು ನಾಣ್ಯವು ಹುಟ್ಟಿ ಬಸವನ ಮುದ್ರೆ ಮೆರೆದಾವು ಜಗ ಅವಗೆ ವಶವಾಗದಿಹುದೆ ಸರ್ವಜ್ಞ’ ಎಂದು ಹೇಳಿದ್ದಾರೆ.
ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರ್ಕಾರದಿಂದ ಘೋಷಣೆ ಹಿನ್ನೆಲೆ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಲಿಂಗಾಯತ ಸಂಘಟನೆಗಳಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಮಹಿಳೆಯರು, ಮಕ್ಕಳು, ಮುಖಂಡರಿಂದ ಸಂಭ್ರಮಾಚರಣೆ ಮಾಡಿದ್ದಾರೆ. ಜಗಜ್ಯೋತಿ ಬಸವೇಶ್ವರರ ಫೋಟೋ ಹಿಡಿದು ಘೋಷಣೆ ಕೂಗಿ ಸಂತಸ ವ್ಯಕ್ತಿಪಡಿಸಿದ್ದಾರೆ.
ಬೆಂಗಳೂರಿನ ಲಾಲ್ಬಾಗ್ನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಬಸವಣ್ಣನವರನ್ನ ಸಾಂಸ್ಕೃತಿಕ ನಾಯಕ ಎಂದು ಕ್ಯಾಬಿನೆಟ್ ಮಿಟಿಂಗ್ನಲ್ಲಿ ಇಂದು ತೀರ್ಮಾನ ಮಾಡಿದ್ದೇವೆ.
ಇದನ್ನೂ ಓದಿ: ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ: ಅಧಿಕೃತ ಘೋಷಣೆಯೊಂದೇ ಬಾಕಿ
ಬಸವಣ್ಣರನ್ನ ಸಾಂಸ್ಕೃತಿಕ ನಾಯಕ ಎಂದು ಕರೆಯಲಾಗುತ್ತೆ. 12 ಶತಮಾನದಲ್ಲಿದಲ್ಲಿ ಸಮಾನತೆಯನ್ನ ನಿರ್ಮಾಣ ಮಾಡುವ ಸಲುವಾಗಿ ಜಾತಿ ಹೋಗಲಾಡಿಸುವ ಸಲುವಾಗಿ ಬಸವಣ್ಣನವರು ಹೋರಾಡಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಕ್ಲಿಕ್ ಮಾಡಿ.
Published On - 10:46 pm, Thu, 18 January 24