ದಾವಣಗೆರೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಮಾತ್ರವಲ್ಲ. ಸರ್ಕಾರವೇ ಹಳ್ಳಿ ಕಡೆಗೆ ಹೋಗಬೇಕೆಂಬುದು ನಮ್ಮ ಸಂಕಲ್ಪ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಇಂದು (ಅಕ್ಟೋಬರ್ 16) ಮಾತನಾಡಿದ್ದಾರೆ. ಜನರ ಮನೆ ಬಾಗಿಲಿಗೆ ಸೌಲಭ್ಯ ಕೊಡುವುದು ನಮ್ಮ ಉದ್ದೇಶ. ಗ್ರಾಮ ಪಂಚಾಯತ್ಗಳಲ್ಲಿ ಎಲ್ಲಾ ಪ್ರಮಾಣಪತ್ರ ಸಿಗುವಂತೆ ಮಾಡುತ್ತೇವೆ. ಜನವರಿ 26ರಿಂದ ಜನರ ಮನೆ ಬಾಗಿಲಿಗೆ ಸರ್ಕಾರ ಕಾರ್ಯಕ್ರಮ ನಡೆಸುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಮಹಾತ್ಮ ಗಾಂಧಿ ಕಂಡ ರಾಮರಾಜ್ಯ ಮಾಡಬೇಕು. ಗ್ರಾಮಸ್ವರಾಜ್ಯ ಮಾಡುವುದು ನಮ್ಮ ಸರ್ಕಾರದ ಸಂಕಲ್ಪ. ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು. ಒಂದೇ ವರ್ಷದಲ್ಲಿ 4 ಲಕ್ಷ ಮನೆ ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿ ಹೊಸ ಕೈಗಾರಿಕಾ ನೀತಿ ಜಾರಿಗೆ ತರಲಾಗುವುದು. 180ಕ್ಕೂ ಹೆಚ್ಚು ಐಟಿಐ ಕಾಲೇಜು ಆರಂಭಿಸಲಾಗುವುದು. ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರಲಿದೆ. ವಿಶೇಷವಾಗಿ ಗುಣಮಟ್ಟದ ಶಿಕ್ಷಣ ನೀಡಲು ಯೋಜನೆ ಹಾಕಲಾಗಿದೆ. ಹಳ್ಳಿ ಪ್ರತಿಭೆಗಳಿಗೆ ಜಾಗತಿಕ ಮಟ್ಟದಲ್ಲಿ ಅವಕಾಶ ದೊರೆಯುತ್ತೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ನೋಡಲು ಬಂದ ಬಾಲಕನಿಗೆ ಪೊಲೀಸರ ಏಟು; ತಲೆಗೆ ಪೆಟ್ಟಾಗಿ ರಕ್ತಸ್ರಾವ
ಸಿಎಂ ಬಸವರಾಜ ಬೊಮ್ಮಾಯಿ ನೋಡಲು ಬಂದ ಬಾಲಕನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಘಟನೆ ಇಲ್ಲಿ ನಡೆದಿದೆ. ಹಲ್ಲೆಯಿಂದ ಬಾಲಕ ನಿತಿನ್ ತಲೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವ ಉಂಟಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುಂದೂರು ಗ್ರಾಮದಲ್ಲಿ ಬಾಲಕ ನಿತಿನ್ ಮೇಲೆ ಪೊಲೀಸರು ಕೈಮಾಡಿದ್ದಾರೆ. ಬಳಿಕ, ಮಕ್ಕಳ ಕೈಯಿಂದಲೇ ಬ್ಯಾರಿಕೇಡ್ ಹಾಕಿಸಿದ್ದಾರೆ.
ಇದನ್ನೂ ಓದಿ: ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾದ ಸಿಎಂ ಬೊಮ್ಮಾಯಿ; ಉಪಚುನಾವಣಾ ಪ್ರಚಾರದ ವಿಚಾರವಾಗಿ ಚರ್ಚೆ
ಇದನ್ನೂ ಓದಿ: ರಾಯಚೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ; ಅಧಿಕಾರಿಗಳ ಸಮ್ಮುಖದಲ್ಲೇ ಕಣ್ಣೀರು ಹಾಕಿದ ಮಹಿಳೆ