ದಾವಣಗೆರೆ: ಇಲ್ಲಿ ಆರಂಭವಾದ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ವಿವಾದ ಮತ್ತೆ ಮುಂದುವರಿದಿದೆ. 1,591 ವಿದ್ಯಾರ್ಥಿಗಳ ಶಾಲಾ ದಾಖಲಾತಿಯಲ್ಲಿ ಬೇಡ ಜಂಗಮ ಎಂದು ನಮೂದು ಹಿನ್ನೆಲೆ ತನಿಖೆಗೆ ಆದೇಶ ನೀಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ತಿಪ್ಪೇಶಪ್ಪ ಆದೇಶ ಮಾಡಿದ್ದಾರೆ. ಅಷ್ಟೇ ಅಲ್ಲದೆ, ತನಿಖೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. 1,591 ವಿದ್ಯಾರ್ಥಿಗಳಿಗೆ ಬೇಡ ಜಂಗಮ ಎಂದು ನಮೂದು ಮಾಡಲಾಗಿದೆ. ಕಳೆದ 7 ವರ್ಷದಲ್ಲಿ 1,591 ವಿದ್ಯಾರ್ಥಿಗಳ ದಾಖಲೆಗಳಲ್ಲಿ ನಮೂದಿಸಲಾಗಿದೆ. ಸರ್ಕಾರಿ ಸೌಲಭ್ಯಕ್ಕಾಗಿ ಶೋಷಿತ ಸಮುದಾಯಕ್ಕೆ ಅನ್ಯಾಯ ಎಂಬ ಬಗ್ಗೆ ಮಾತುಗಳು ಕೇಳಿಬಂದಿವೆ.
ಲಿಂಗಾಯತ ಜಂಗಮ ಸಮುದಾಯದ ಕೆಲವರಿಂದ ಅನ್ಯಾಯ ಆಗಿದೆ. ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಮಾಡಿಸಿಕೊಂಡು ಅನ್ಯಾಯ ಮಾಡಿದ್ದಾರೆ. ಶೋಷಿತ ಸಮುದಾಯಕ್ಕೆ ಮೀಸಲಾಗಿದ್ದ ಸೌಲಭ್ಯಗಳು ಕಬಳಿಸುತ್ತಿದ್ದಾರೆ ಎಂದು ಚಿನ್ನಸಮುದ್ರ ಶೇಖರ ನಾಯ್ಕ ಆರೋಪ ಮಾಡಿದ್ದಾರೆ. ಪರಿಶಿಷ್ಟ ಜಾತಿಗಳ ರಕ್ಷಣಾ ವೇದಿಕೆ ಸಂಚಾಲಕ ಶೇಖರ ನಾಯ್ಕ ಈ ಬಗ್ಗೆ ಆರೋಪಿಸಿದ್ದಾರೆ. ಇದೀಗ, 1,591 ವಿದ್ಯಾರ್ಥಿಗಳ ಶಾಲಾ ದಾಖಲಾತಿಯಲ್ಲಿ ಬೇಡ ಜಂಗಮ ಎಂದು ನಮೂದು ಹಿನ್ನೆಲೆ ತನಿಖೆಗೆ ಆದೇಶ ನೀಡಲಾಗಿದೆ.
ರಾಯಚೂರು: ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯದ ಕೊರತೆ; ಟಿವಿ9 ವರದಿ ಬಳಿಕ ಎಚ್ಚೆತ್ತ ಸಚಿವರು
ಸರ್ಕಾರಿ ಶಾಲೆಯಲ್ಲಿ 1053 ಮಕ್ಕಳಿಗೆ 6 ಕ್ಲಾಸ್ ರೂಂ ಇಲ್ಲದ ವಿಚಾರಕ್ಕೆ ಸಂಬಂಧಿಸಿ ಟಿವಿ9 ಕನ್ನಡ ವರದಿ ಬಳಿಕ ರಾಯಚೂರು ಉಸ್ತುವಾರಿ ಸಚಿವರು ಎಚ್ಚೆತ್ತುಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಈ ಬಗ್ಗೆ ಎಚ್ಚೆತ್ತುಕೊಂಡು ಸಗಮಕುಂಟಾ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದಾರೆ. ರಾಯಚೂರು ತಾಲೂಕಿನ ಸಗಮಕುಂಟಾ ಸರ್ಕಾರಿ ಶಾಲೆಯಲ್ಲಿ ಮಕ್ಕಳು, ಶಿಕ್ಷಕರು ಮೂಲಸೌಕರ್ಯಗಳಿಲ್ಲದೆ ಪರದಾಡುತ್ತಿದ್ದರು. 1053 ಮಕ್ಕಳು, 10 ಕ್ಕೂ ಹೆಚ್ಚು ಶಿಕ್ಷಕರಿಗೆ 2 ಶೌಚಾಲಯ ಮಾತ್ರ ಇತ್ತು. ಇದೀಗ ವರದಿ ಬಳಿಕ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕಟ್ಟಡ, ಮೂಲಸೌಕರ್ಯಕ್ಕೆ 3 ಕೋಟಿ ಬಿಡುಗಡೆ ಭರವಸೆ ನೀಡಲಾಗಿದೆ. ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಾಣ ಮಾಡುವ ಭರವಸೆ ನೀಡಿದ್ದಾರೆ. ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯ ಭರವಸೆ ಕೊಟ್ಟಿದ್ದಾರೆ.
ಇದನ್ನೂ ಓದಿ: ನಕಲಿ ಜಾತಿ ಪ್ರಮಾಣಪತ್ರ ಪಡೆದ ಆರೋಪ; ಶಾಸಕ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ಧ ದೂರು ದಾಖಲು
ಇದನ್ನೂ ಓದಿ: ಜಾತಿ ಪ್ರಮಾಣಪತ್ರ ವಿವಾದ: ಎಂ.ಪಿ ರೇಣುಕಾಚಾರ್ಯ ಸಹೋದರ ಸೇರಿ 11 ಮಂದಿ ವಿರುದ್ಧ FIR ದಾಖಲು
Published On - 11:18 am, Thu, 7 April 22