AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ ಬರುವ ಮೊದಲೇ 2ಎ ಮೀಸಲಾತಿ ನೀಡಿ, ವಿಳಂಬಾದರೇ ತೀವ್ರ ಹೋರಾಟ: ಜಯಮೃತ್ಯುಂಜಯ ಸ್ವಾಮೀಜಿ

ನವೆಂಬರ್​ 10ರಂದು ದಾವಣಗೆರೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರ ಬಾಡಾ ಕ್ರಾಸ್ ಬಳಿ ಇಷ್ಟಲಿಂಗ ಪೂಜೆ ಮೂಲಕ ಹೋರಾಟ ನಡೆಸಲಾಗುವುದು. ಮತ್ತೆ ಹೋರಾಟ ಆರಂಭಿಸಿ ಎಂದು ಪಂಚನಸಾಲಿ ಸಮಾಜದ ಮುಖಂಡರು ಸಲಹೆ ನೀಡಿದ ಹಿನ್ನೆಲೆಯಲ್ಲಿ ಹೆದ್ದಾರಿಗಳಲ್ಲಿ ಇಷ್ಟಲಿಂಗ ಪೂಜೆ ಮೂಲಕ ಹೋರಾಟ ನಡೆದಿದೆ. ಕನಿಷ್ಟ ಐದು ಸಾವಿರಕ್ಕೂ ಹೆಚ್ಚು ಜನ ಸೇರಲಿದ್ದಾರೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ‌ ಹೇಳಿದರು.

ಲೋಕಸಭೆ ಚುನಾವಣೆ ಬರುವ ಮೊದಲೇ 2ಎ ಮೀಸಲಾತಿ ನೀಡಿ, ವಿಳಂಬಾದರೇ ತೀವ್ರ ಹೋರಾಟ: ಜಯಮೃತ್ಯುಂಜಯ ಸ್ವಾಮೀಜಿ
ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Nov 07, 2023 | 1:01 PM

Share

ದಾವಣಗೆರೆ ನ.07: ಲೋಕಸಭೆ ಚುನಾವಣೆ (Loksabha Election) ಬರುವ ಮೊದಲು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಿ. ವಿಳಂಬವಾದರೇ ಹೋರಾಟ ತೀವ್ರಗೊಳಿಸಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ (Jayamruthyunjaya Swamiji) ‌. ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನವೆಂಬರ್​ 10ರಂದು ದಾವಣಗೆರೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರ ಬಾಡಾ ಕ್ರಾಸ್ ಬಳಿ ಇಷ್ಟಲಿಂಗ ಪೂಜೆ ಮೂಲಕ ಹೋರಾಟ ನಡೆಸಲಾಗುವುದು ಎಂದರು.

ಕಳೆದ ಆರು ವರ್ಷಗಳಿಂದ ಮೀಸಲಾತಿಗಾಗಿ ಹೋರಾಟ ನಡೆಸಲಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಸಹ ಸೂಕ್ತ ಕ್ರಮ‌ಕೈಗೊಳ್ಳಲಿಲ್ಲ. ಈಗ ಸಿದ್ದರಾಮಯ್ಯ ಸರ್ಕಾರ ಬಂದಿದೆ. ಸಿದ್ದರಾಮಯ್ಯ ಸರ್ಕಾರ ಬಂದ ಬಳಿಕ ನಮಗೆ ಮೀಸಲಾತಿ ಸಿಗುವುದು ಕಷ್ಟದ ಕೆಲಸ. ಮತ್ತೆ ಹೋರಾಟ ಆರಂಭಿಸಿ ಎಂದು ಪಂಚನಸಾಲಿ ಸಮಾಜದ ಮುಖಂಡರು ಸಲಹೆ ನೀಡಿದ ಹಿನ್ನೆಲೆಯಲ್ಲಿ ಹೆದ್ದಾರಿಗಳಲ್ಲಿ ಇಷ್ಟಲಿಂಗ ಪೂಜೆ ಮೂಲಕ ಹೋರಾಟ ನಡೆದಿದೆ. ಕನಿಷ್ಟ ಐದು ಸಾವಿರಕ್ಕೂ ಹೆಚ್ಚು ಜನ ಸೇರಲಿದ್ದಾರೆ ಎಂದು ತಿಳಿಸಿದರು.

ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ವಿನಯ್ ಕುಲಕರ್ಣಿ, ಅರವಿಂದ ಬೆಲ್ಲದ ಸೇರಿದಂತೆ ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಸದ್ಯಕ್ಕೆ 2ಎ ಮೀಸಲಾತಿ ತಡವಾದರೂ ಸರಿ. ಎಲ್ಲ ಲಿಂಗಾಯತರಿಗೆ ಓಬಿಸಿ ಪಟ್ಟಿಗೆ ಸೇರ್ಪಡೆಗೆ ಶಿಪಾರಸ್ಸು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದರು.

ಇದನ್ನೂ ಓದಿ: ಲಿಂಗಾಯತ ಪಂಚಮಸಾಲಿ ಸಮಾವೇಶಕ್ಕೆ ಬಾರದ ನಾಯಕರ ವಿರುದ್ಧ ವಿನಯ ಕುಲಕರ್ಣಿ ಅಸಮಾಧಾನ: ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಿಷ್ಟು

ಲಿಂಗಾಯತ ಸಮಾಜದ ಪರವಾಗಿ ಶಾಮನೂರ ಅವರು ಇನ್ನಷ್ಟು ಗುಡುಗಬೇಕು

ಕಾಂಗ್ರೆಸ್​ ಶಾಸಕ ಶಾಮನೂರು ಶಿವಶಂಕರಪ್ಪ ಅವರು ರಾಜ್ಯದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಹೇಳಿರುವುದು ಸತ್ಯ. ಶಾಮನೂರ ಹೇಳಿಕೆಗೆ ನಮ್ಮ ಬೆಂಬಲವಿದೆ ಎಂದು ಮಾಜಿ ಶಾಸಕ ಹಾಗೂ ಪಂಚಮಸಾಲಿ ಸಮಾಜದ ಮುಖಂಡ ಹೆಚ್. ಎಸ್. ಶಿವಶಂಕರ ಹೇಳಿದರು.

ವೀರಶೈವ ಮಹಾಸಭೆಯ ಅಧ್ಯಕ್ಷರಾದ ಶಾಮನೂರು ಶಿವಶಂಕರ ನೈಜ ಸಮಸ್ಯೆಯನ್ನು ಹೇಳಿದ್ದಾರೆ. ವೀರಶೈವ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನ ಮಾನ ಸಿಗುತ್ತಿಲ್ಲ. ಈ ಬಗ್ಗೆ ಶಾಮನೂರ ಅವರು ಇನ್ನಷ್ಟು ಗುಡುಗಬೇಕು.‌ ಇಂತಹ ಕೆಲಸವನ್ನು ಈ ಹಿಂದೆಯೇ ಶಾಮನೂರ ಮಾಡಿದ್ದರೆ. ಅವರು ಸಿಎಂ ಆಗುತ್ತಿದ್ದರು ಎಂದರು.

ಶಾಮನೂರು ಶಿವಶಂಕರಪ್ಪ ಅವರು ಈಗಲಾದರು ವೀರಶೈವ ಸಮಾಜದ ಧ್ವನಿ ಆಗಿದ್ದಾರೆ. ವೀರಶೈವ ಸಮಾಜದ ಬಗ್ಗೆ ಅವರ ಕಾಳಜಿಗೆ ಮೆಚ್ಚುವಂತಹದ್ದು. ವಚನಾನಂದ ಸ್ವಾಮೀಜಿ ಪಂಚಮಸಾಲಿ ಹೋರಾಟಕ್ಕೆ ಬರಲಿ. ಇದೇ ಹತ್ತರಂದು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ದಾವಣಗೆರೆ ನಗರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಮೂಲಕ ಹೋರಾಟ ನಡೆಯಲಿದೆ. ಹರಿಹರ ಪಂಚಮಸಾಲಿ ಗುರುಪೀಠದ. ವಚನಾನಂದ ಸ್ವಾಮೀಜಿ ಪಾಲ್ಗೊಳ್ಳಬೇಕು ಎಂದ ಮಾಜಿ ಶಾಸಕ ಹೆಚ್​ ಎಸ್ ಶಿವಶಂಕರ ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?