ದಾವಣಗೆರೆ, (ಜುಲೈ 31): ಭಾರೀ ಮಳೆಯಿಂದಾಗಿ ಶಿವಮೊಗ್ಗದ (Shivamogga) ಭದ್ರಾ ನದಿ (bhadra reservoir) ಭರ್ತಿಯಾಗಿದ್ದು, ಇದೇ ಆಗಸ್ಟ್ ಮೊದಲ ವಾರದಲ್ಲಿ ಕಾಲೆವೆಗಳಿಗೆ(canals) ನೀರು ಹರಿಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಇಂದು (ಜುಲೈ 31) ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರಾ ಡ್ಯಾಂನಿಂದ (Bhadra River) ದಾವಣಗೆರೆ ಜಿಲ್ಲೆಯ ಭದ್ರಾ ಕಾಲುವೆಗೆ ನೀರು ನೀಡುವ ಬಗ್ಗೆ ಇಷ್ಟರಲ್ಲಿ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕಾಲುವೆಗೆ ನೀರು ಬಿಡುವ ಬಗ್ಗೆ ಅಧಿಕೃತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಇದನ್ನೂ ಓದಿ: Kodachadri: ಪ್ರವಾಸಿಗರ ಭೂ ಸ್ವರ್ಗ ಕೊಡಚಾದ್ರಿ ಗಿರಿಗೆ ಇಂದಿನಿಂದ ಪ್ರವೇಶ ನಿಷೇಧ
ಈಗಾಗಲೇ ಭದ್ರಾ ಡ್ಯಾಂನಲ್ಲಿ 162 ಅಡಿ ನೀರು ಇದೆ. ಈಗ ದಾವಣಗೆರೆ ಜಿಲ್ಲೆಯಲ್ಲಿ ಬಹುತೇಕ ಕಡೆ ಭತ್ತದ ನಾಟಿ ಮಾಡಲಾಗುತ್ತಿದೆ. ಆದಷ್ಟು ಬೇಗ ಭದ್ರ ಕಾಲುವೆಗೆ ನೀರು ಬಿಡಲಾಗುವುದು ಎಂದು ದಾವಣಗೆರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ತಿಳಿಸಿದರು.
ಜೂನ್ನಲ್ಲಿ ಮುಂಗಾರು ಮಳೆ ಕೈಕೊಟ್ಟಿತ್ತಾದರೂ ಜುಲೈನಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಇದರಿಂದ ನದಿ-ಅಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದ ರೈತರು ಸಂತಸಗೊಂಡಿದ್ದಾರೆ. ಅದರಲ್ಲೂ ಭತ್ತ ಬೆಳೆಗಾರರು ಫುಲ್ ಖುಷ್ ಆಗಿದ್ದಾರೆ. ಅದರಲ್ಲೂ ಈಗಾಗಲೇ ಭದ್ರಾ-ತುಂಗಾ ನದಿಗಳು ಭರ್ತಿಯಾಗಿದ್ದು, ಈ ನದಿಗಳ ನೀರು ಅವಲಂಬಿಸಿರುವ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಭದ್ರಾ ಡ್ಯಾಂಗೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಆಗಸ್ಟ್ 1ರಿಂದಲೇ ನಾಲೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ಇತ್ತೀಚೆಗಷ್ಟೇ ರೈತ ಒಕ್ಕೂಟದ ನಿಯೋಗವು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು.
ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 60 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಭತ್ತ ಬೆಳೆಯುತ್ತಿದ್ದು, ಇದಕ್ಕೆಲ್ಲ ಭದ್ರಾ ನದಿ ನೀರೇ ಜೀವನಾಡಿಯಾಗಿದೆ. ಈಗಾಗಲೇ ಈ ಭಾಗದ ಜನರು ಭತ್ತ ನಾಟಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ನೀರು ಬಂದ ತಕ್ಷಣವೇ ಭತ್ತ ನಾಟಿ ಚಟುವಟಿಕೆಗಳು ಶುರುವಾಗಲಿವೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ