AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದೇಶ ಹಿಂಪಡೆಯದಿದ್ರೆ ರಾಜೀನಾಮೆ: ತಮ್ಮದೇ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕ ಬಹಿರಂಗ ಎಚ್ಚರಿಕೆ

ನೀರಾವರಿ ಸಲಹಾ ಸಮಿತಿ ಸಭೆ ಕರೆಯದೆ ಏಕಾಏಕಿ ಭದ್ರಾ ಜಲಾಶಯದಿಂದ ಎಡದಂಡೆ ಹಾಗೂ ಬಲದಂಡೆ ನಾಲೆಗಳಿಗೆ 10 ದಿನಗಳ ಕಾಲ 1 ಟಿಎಂಸಿ ನೀರು ಹರಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಇದು ದಾವಣಗೆರೆ ಜಿಲ್ಲೆಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಕಾಂಗ್ರೆಸ್ ಶಾಸಕರು, ಸಚಿವರು ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಶಾಸಕರೊಬ್ಬರು, ರಾಜೀನಾಮೆ ನೀಡುವುದಾಗಿಯೂ ತಮ್ಮ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಆದೇಶ ಹಿಂಪಡೆಯದಿದ್ರೆ ರಾಜೀನಾಮೆ: ತಮ್ಮದೇ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕ ಬಹಿರಂಗ ಎಚ್ಚರಿಕೆ
ಹೊನ್ನಾಳಿ ಕಾಂಗ್ರೆಸ್ ಶಾಸಕ ಡಿ.ಜಿ. ಶಾಂತನಗೌಡ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Nov 17, 2026 | 4:13 PM

Share

ದಾವಣಗೆರೆ, (ನವೆಂಬರ್ 17): ರಾತ್ರೋರಾತ್ರಿ ಭದ್ರಾ ನೀರು ಬಿಡುಗಡೆ ಮಾಡಿರುವುದಕ್ಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಅಧಿಕೃತ ಆದೇಶವಿಲ್ಲದೇ ಭದ್ರಾದಿಂದ ನೀರು ಹರಿಬಿಡಲಾಗಿದ್ದು, ಕಾಂಗ್ರೆಸ್ ಶಾಸಕರು, ಸಂಸದರ ಆಕ್ರೋಶಗೊಂಡಿದ್ದಾರೆ. ನಿನ್ನೆ (ನವೆಂಬರ್ 16) ನಡೆದ ದಿಶಾ ಸಭೆಯಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನು ಸಚಿವ ಬಸವಂತಪ್ಪ ಸೇರಿದಂತೆ ದಾವಣಗೆರೆಯ ಕೆಲ ಕಾಂಗ್ರೆಸ್ ಶಾಸಕರು ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಹೊನ್ನಾಳಿ ಕಾಂಗ್ರೆಸ್ ಶಾಸಕ ಡಿ ಜೆ ಶಾಂತನಗೌಡ, ಒಂದೆ ಹೆಜ್ಜೆ ಮುಂದೆ ಹೋಗಿ ರಾಜೀನಾಮೆ ಎಚ್ಚರಿಕೆ ನೀಡಿದ್ದಾರೆ. ಹೌದು… ಭದ್ರಾ ನೀರು ಬಿಡುಗಡೆ ಆದೇಶವನ್ನು ಹಿಂಪಡೆಯದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೊನ್ನಾಳಿ ಶಾಸಕ ಡಿ ಜೆ ಶಾಂತನಗೌಡ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರಕ್ಕೆ ರಾಜೀನಾಮೆ ಎಚ್ಚರಿಕೆ ನೀಡಿದ ಕೈ ಶಾಸಕ

ದಾವಣಗೆರೆಯಲ್ಲಿಂದು ಮಾತನಾಡಿರುವ ಶಾಂತನಗೌಡ , ನನ್ನ ಭಾಗದ ರೈತರು ಹಲವು ಬಾರಿ ನಮ್ಮನ್ನು ಸಂಪರ್ಕ ಮಾಡಿದ್ದರು. ತೋಟ ಒಣಗುತ್ತಿವೆ ನೀರು ಬಿಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಆದ್ರೆ ನಾನು ಸಚಿವರು ಹಾಗೂ ಐಸಿಸಿ ಸಭೆಯಲ್ಲಿ ನೀರು ಬಗ್ಗೆ ಮಾತಾಡಿ ನೀರು ಬಿಡಿಸುವುದಾಗಿ ಭರವಸೆ ನೀಡಿದ್ದೆ. ಆದರೆ ನವೆಂಬರ್ 15ರಂದು ಮಧ್ಯ ರಾತ್ರಿ ನೀರು ಬಿಡುಗಡೆ ಮಾಡಲಾಗಿದೆ. ಆದೇಶ ಇಲ್ಲದೇ 1500 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ಒಂದು ಟಿಎಂಸಿ ನೀರನ್ನು ಹತ್ತು ದಿನಗಳ ಕಾಲ ನೀರು ಹರಿಸಲು ಸರ್ಕಾರ ಆದೇಶ ಮಾಡಿದೆ. ಭದ್ರ ಅಚ್ಚು ಕಟ್ಟು ಪ್ರದೇಶದ ಬೇಸಿಗೆ ಬೆಳೆಗೆ ನೀರು ಹರಿಸಲು ಹತ್ತು ದಿನಗಳ ಕಾಲ ನೀರು ಹರಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಮಳೆಗಾಲನೇ ಮುಗಿದಿಲ್ಲ ಬೇಸಿಗೆ ಅಂತಾ ಆದೇಶಿಸಿದ್ದಾರೆ. ಇದು ಅವೈಜ್ಞಾಕ ಹಾಗೂ ತಲೆ ಇಲ್ಲದ ತೀರ್ಮಾನ. ಮುಖ್ಯಮಂತ್ರಿ ಭೇಟಿ ಮಾಡಿ ನೀರು ನಿಲ್ಲಿಸುವಂತೆ ಮನವಿ ಮಾಡುತ್ತೇವೆ. ಐಸಿಸಿ ಮೀಟಿಂಗ್ ನಂತರ ನೀರು ಬಿಡುವಂತೆ ಆಗ್ರಹಿಸುತ್ತೇವೆ. ಸಭೆ ನಿರ್ಣಯದಂತೆ ನೀರು ಬಿಡಬೇಕು. ನೀರು ನಿಲ್ಲಿಸದೆ ಇದ್ದರೆ ರಾಜೀನಾಮೆ ಕೊಡುವುದಾಗಿ ಎಚ್ಚರಿಕೆ ನೀಡಿದರು.

ಇದನ್ನೂ ನೋಡಿ: ಏಷ್ಯಾದ 2ನೇ ಅತಿದೊಡ್ಡ ಕೆರೆ ಸೂಳೆಕೆರೆಯ ಋಣ ತೀರಿಸಲು ಮುಂದಾದ ರೈತರು

ರಾಜೀನಾಮೆ ಕೊಟ್ಟು ಐಸಿಸಿ ಸಭೆ ಕರೆಯುವಂತೆ ಮನವಿ

ಸಚಿವರು ಹಾಗೂ ಸಂಸದರ ಗಮನಕ್ಕೆ ತಂದಿದ್ದೇವೆ.ಸರ್ಕಾರ ತಾರತಮ್ಯ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರಾ ಅಂತಾ ಸುಮ್ಮನೆ ಇರಬೇಕಾ? ನಾವು ಯಾಕೆ ಅಧಿಕಾರದಲ್ಲಿ ಇರಬೇಕು? ನಮಗೆ ಅನ್ಯಾಯ ಆದ್ರೆ ಸುಮ್ಮನೆ ಇರಬೇಕಾ? ಎಂದು ಪ್ರಶ್ನಿಸಿದ ಶಾಂತನಗೌಡ, ಯಾರು ಒತ್ತಡ ಹಾಗೂ ಯಾವ ಉದ್ದೇಶಕ್ಕೆ ಆದೇಶ ಮಾಡಿದ್ದರೋ ಗೊತ್ತಿಲ್ಲ .ಇದು ಸರಿಯಾದ ಆದೇಶ ಅಲ್ಲ. ನಾನು ರೈತನೇ ನನ್ನದು ತೋಟ ಒಣಗುತ್ತಿದೆ. ರೈತರ ಪರವಾಗಿ ರಾಜೀನಾಮೆ ಕೊಡಲು ಸಿದ್ದನಿದ್ದೇನೆ. ರಾಜೀನಾಮೆ ಕೊಟ್ಟು ನೀರು ನಿಲ್ಲಿಸುವಂತೆ ಹಾಗೂ ಐಸಿಸಿ ಸಭೆ ಕರೆಯುವಂತೆ ಮುಖ್ಯಮಂತ್ರಿಗೆ ಹೇಳುವೆ. ನಿಲ್ಲಿಸಿದರೆ ಸರಿ, ಇಲ್ಲ ಅಂದ್ರೆ ನನ್ನ ರಾಜೀನಾಮೆ ವಾಪಾಸ್ ಪಡೆಯಲ್ಲ . ಅಪ್ಪರ್ ಭದ್ರಗೆ ನೀರು ಬಿಟ್ಟಿದ್ರು ಬೇಸಿಗೆ ಬೆಳೆಗೆ ನೀರು ಸಿಗುತ್ತೆ ಅಂತಾ ನಮ್ಮ ರೈತರು ಸಿಮ್ಮನಿದ್ರೂ. ಆದ್ರೆ ಸರ್ಕಾರ ಅವೈಜ್ಞಾನಿಕ ತೀರ್ಮಾನ ತೆಗೆದುಕೊಂಡಿದೆ. ಇದು ಸರಿಯಾದ ತೀರ್ಮಾನ ಅಲ್ಲ ಎಂದು ಸ್ವ ಪಕ್ಷದ ನಿರ್ಧಾರದ ವಿರುದ್ಧವೇ ಆಕ್ರೋಶ ಹೊರಹಾಕಿದರು.

ಜಲಸಂಪನ್ಮೂಲ ಇಲಾಖೆ ಆದೇಶ ಅವೈಜ್ಞಾನಿಕ ಎಂದ ಬಸವಂತಪ್ಪ

ಸರ್ಕಾರದ ಈ ಏಕಪಕ್ಷೀಯ ನಿರ್ಧಾರಕ್ಕೆ ಕಾಂಗ್ರೆಸ್ ಶಾಸಕ ಕೆ.ಎಸ್. ಬಸವಂತಪ್ಪ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಭದ್ರಾ ಜಲಾಶಯ ಇಡೀ ಅಚ್ಚುಕಟ್ಟು ಪ್ರದೇಶಕ್ಕೆ ಸೇರಿದ್ದು. ಯಾವುದೇ ಸಚಿವರು ಅಥವಾ ಸ್ಥಳೀಯ ಶಾಸಕರ ಗಮನಕ್ಕೆ ತರದೆ ಜಲಸಂಪನ್ಮೂಲ ಇಲಾಖೆ ಅವೈಜ್ಞಾನಿಕ ಆದೇಶ ಹೊರಡಿಸಿದೆ. ಕೇವಲ ಒಂದು ಟಿಎಂಸಿ ನೀರು ನಾಲೆಯ ಹತ್ತು ಕಿಲೋಮೀಟರ್ ವ್ಯಾಪ್ತಿಗೂ ತಲುಪುವುದಿಲ್ಲ” ಎಂದರು.

ನೀರಾವರಿ ಸಲಹಾ ಸಮಿತಿ ಸಭೆ ಕರೆಯದೆ ಆದೇಶ

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಬೇಸಿಗೆ ಭತ್ತದ ಬೆಳೆಗೆ ರಾಜ್ಯ ಸರ್ಕಾರ 1 ಟಿಎಂಸಿ ನೀರು ಬಿಡುಗಡೆಗೆ ಅನುಮೋದನೆ ನೀಡಿದೆ. 10 ದಿನಗಳ ಕಾಲ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ಸಚಿವ ಎನ್. ಚಲುವರಾಯಸ್ವಾಮಿ ಆದೇಶಿಸಿದ್ದರು. ಎಲ್ ನಿನೋ ಹವಾಮಾನ ವೈಪರೀತ್ಯದ ಪರಿಣಾಮ ಜಲಸಂಗ್ರಹದ ಮೇಲೆ ಒತ್ತಡ ಉಂಟಾಗಿರುವ ಹಿನ್ನೆಲೆಯಲ್ಲಿ, ಕುಡಿಯುವ ನೀರಿನ ಅಗತ್ಯಕ್ಕೆ ಆದ್ಯತೆ ನೀಡುವ ಜತೆಗೆ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೂ ರಾಜ್ಯ ಸರ್ಕಾರ ನೆರವಿನ ಹಸ್ತ ಚಾಚಿದೆ. ಬೇಸಿಗೆ ಭತ್ತದ ಬೆಳೆಗೆ ಅನುಕೂಲವಾಗುವಂತೆ ಭದ್ರಾ ಜಲಾಶಯದ ಎಡ ಮತ್ತು ಬಲದಂಡೆ ಕಾಲುವೆಗಳಿಗೆ 10 ದಿನಗಳ ಕಾಲ ಒಟ್ಟು 1 ಟಿಎಂಸಿ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ಅನುಮೋದನೆ ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:06 pm, Tue, 17 November 26

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!