ಭದ್ರಾ ನೀರು ನಿಲ್ಲಿಸುವ ಪ್ರಶ್ನೆಯೇ ಇಲ್ಲ, ರೈತರು ಆತಂಕ ಪಡಬೇಕಾಗಿಲ್ಲ: ಶಾಸಕ ಬಸವರಾಜು ಶಿವಗಂಗಾ

ಮಳೆಗಾಲದ ಹಂಗಾಮಿನ ಬೆಳೆ ಬೆಳೆಯಲು ಭದ್ರಾ ಬಲದಂಡೆ ಕಾಲುವೆಗೆ ಈಗಾಗಲೇ ಆಗಸ್ಟ್ 10 ರಿಂದಲೇ ನೀರು ಹರಿಸಲಾಗಿದೆ ಎಂದು ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದ್ದಾರೆ. ಪ್ರಸ್ತುತ ಜಲಾಶಯದಲ್ಲಿರುವ ನೀರು ರೈತರು ಬೆಳೆ ಬೆಳೆಯಲು ಯಾವುದೇ ಸಮಸ್ಯೆ ಇಲ್ಲ, ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಭದ್ರಾ ನೀರು ನಿಲ್ಲಿಸುವ ಪ್ರಶ್ನೆಯೇ ಇಲ್ಲ, ರೈತರು ಆತಂಕ ಪಡಬೇಕಾಗಿಲ್ಲ: ಶಾಸಕ ಬಸವರಾಜು ಶಿವಗಂಗಾ
ಚನ್ನಗಿರಿ ಶಾಸಕ ಬಸವರಾಜು ವಿ ಶಿವಗಂಗಾ
Follow us
| Updated By: Rakesh Nayak Manchi

Updated on: Aug 17, 2023 | 7:25 PM

ದಾವಣಗೆರೆ, ಆಗಸ್ಟ್ 17: ಮಳೆಗಾಲದ ಹಂಗಾಮಿನ ಬೆಳೆ ಬೆಳೆಯಲು ಭದ್ರಾ ಬಲದಂಡೆ ಕಾಲುವೆಗೆ (Bhadra Right Bank Canal) ಈಗಾಗಲೇ ಆಗಸ್ಟ್ 10 ರಿಂದಲೇ ನೀರು ಹರಿಸಲಾಗಿದೆ. ಭದ್ರಾ ನೀರಿನ ಮಟ್ಟ ಇಂದಿಗೆ 166.9 ಅಡಿ ನೀರಿ ಇದ್ದು, 170 ಅಡಿಗೆ ನೀರು ತಲುಪಿದರೆ ರೈತರಿಗೆ ಸಂಪೂರ್ಣವಾಗಿ ನೀರು ಹರಿಸಲು ಸಮಸ್ಯೆ ಆಗುವುದಿಲ್ಲ ಎಂದು ಚನ್ನಗಿರಿ (Channagiri) ಶಾಸಕ ಬಸವರಾಜು ವಿ ಶಿವಗಂಗಾ (Basavaraju V Shivaganga) ಹೇಳಿದ್ದಾರೆ.

ಪಟ್ಟಣದಲ್ಲಿ ಮಾತನಾಡಿದ ಅವರು, ಪ್ರಸ್ತುತ ಜಲಾಶಯದಲ್ಲಿರುವ ನೀರು ರೈತರು ಬೆಳೆ ಬೆಳೆಯಲು ಯಾವುದೇ ಸಮಸ್ಯೆ ಇಲ್ಲ. ಈ ಕುರಿತಂತೆ ಈಗಾಗಲೇ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಸರ್ಕಾರದ ಮುಂದೆ ಕಾಲುವೆಗಳಿಗೆ ಹರಿಯುತ್ತಿರುವ ನೀರನ್ನು ನಿಲ್ಲಿಸುವ ಕುರಿತು ಯಾವುದೇ ಪ್ರಸ್ತಾಪ ಬಂದಿಲ್ಲ ಎನ್ನಲಾಗಿದೆ. ರೈತರು ಯಾವುದೇ ಆತಂಕಪಡಬೇಕಾಗಿಲ್ಲ, ರೈತರಿಗೆ ತೊಂದರೆಯಾಗಲು ನಾನು ಬಿಡುವುದಿಲ್ಲ ಎಂದರು.

ಇದನ್ನೂ ಓದಿ: ರಾಜ್ಯದಲ್ಲಿ ತೀವ್ರ ಸ್ವರೂಪದ ನೀರಿನ ಅಭಾವವಿದ್ದರೂ ತಮಿಳುನಾಡಿಗೆ ಕಾವೇರಿ ನದಿನೀರು ಹರಿಬಿಡುತ್ತಿರುವ ರಾಜ್ಯ ಸರ್ಕಾರ

ಭದ್ರಾ ಜಲಾಶಯಕ್ಕೆ 170 ಅಡಿ ನೀರು ಸಂಗ್ರಹವಾದರೆ ಸಾಕು ರೈತರಿಗೆ 100 ದಿನಗಳಿಗೂ ಹೆಚ್ಚು ನೀರು ಹರಿಸಬಹುದು. ಮಲೆನಾಡು ಭಾಗದಲ್ಲಿ ಸ್ವಲ್ಪ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆ ಜಲಾಶಯಕ್ಕೆ ಒಳಹರಿವು ಸ್ವಲ್ಪ ಕಡಿಮೆಯಾಗಿದೆ. ಆದರೂ ಸಹ ರೈತರ ಜಮೀನುಗಳಿಗೆ ನೀರು ಹರಿಸಲು ಯಾವುದೇ ಸಮಸ್ಯೆ ಇಲ್ಲ ಎಂದರು.

ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಕಾರಣ ರೈತರನ್ನ ಕೆಲವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು ಇಂಥ ಮಾಹಿತಿಗಳಿಗೆ ಯಾರು ಸಹ ಕಿವಿಗೂಡಬಾರದು. ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಈಗಾಗಲೇ ಭತ್ತ ಬೆಳೆದ ರೈತರು ಈ ಬಗ್ಗೆ ಚಿಂತಿಸಬೇಡಿ. ಬೆಳೆ ಬೆಳೆಯಲು ನೀರು ಹರಿಸಲಾಗುತ್ತದೆ ಎಂದರು.

ಈಗಾಗಲೇ ನೀರಾವರಿ ಇಲಾಖೆ ಇಂಜಿನಿಯರ್​ಗಳ ಜೊತೆ ಮಾತನಾಡಿದ್ದೇನೆ. ನೀರು ನಿಲ್ಲಿಸುವ ಬಗ್ಗೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದಿದ್ದಾರೆ. ಆಗಸ್ಟ್ 10 ರಿಂದಲೇ ಭದ್ರಾ ಕಾಲುವೆಗೆ ನೀರನ್ನ ಹರಿ ಬಿಡಲಾಗಿದೆ. ನಿಗದಿಯಂತೆ ರೈತರ ಬೆಳೆಗಳಿಗೆ ನೀರು ಬರುತ್ತದೆ, ನಿಮ್ಮ ಪರವಾಗಿ ನಾನು ಇದ್ದೇನೆ ಎಂದು ಶಾಸಕರಾದ ಬಸವರಾಜು ಶಿವಗಂಗಾ ರೈತರಿಗೆ ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ