ಬಿಜೆಪಿ ನಾವಿಕನಿಲ್ಲದ ಹಡಗಾಗಿದೆ: ಸ್ವಪಕ್ಷೀಯರ ವಿರುದ್ಧ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಾಗ್ದಾಳಿ

ಇಷ್ಟು ದಿನವಾದರೂ ವಿಪಕ್ಷ ನಾಯಕರು, ರಾಜ್ಯಾಧ್ಯಕ್ಷರ ನೇಮಕ ಮಾಡಿಲ್ಲ. ಭಾರತೀಯ ಜನತಾ ಪಕ್ಷ ನಾವಿಕನಿಲ್ಲದ ಹಡಗಿನಂತಾಗಿದೆ. ಯಡಿಯೂರಪ್ಪರನ್ನು ಕಡೆಗಣಿಸಿದ್ದರಿಂದ ಬಿಜೆಪಿಗೆ ಇಂತಹ ಸ್ಥಿತಿ ಬಂದಿದೆ ಎಂದು ಸ್ವಪಕ್ಷೀಯರ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿ ನಾವಿಕನಿಲ್ಲದ ಹಡಗಾಗಿದೆ: ಸ್ವಪಕ್ಷೀಯರ ವಿರುದ್ಧ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಾಗ್ದಾಳಿ
ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 26, 2023 | 6:43 PM

ದಾವಣಗೆರೆ, ಆಗಸ್ಟ್​ 26: ಬಿಜೆಪಿ ನಾವಿಕನಿಲ್ಲದ ಹಡಗಾಗಿದೆ ಎಂದು ಸ್ವಪಕ್ಷೀಯರ ವಿರುದ್ದ ಮಾಜಿ‌ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಷ್ಟು ದಿನವಾದರೂ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿಲ್ಲ. ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ಅವರನ್ನು ಕಡೆಗಣೆಸಿದ್ದಾರೆ, ಅದರ ಶಾಪದಿಂದ ಈ ಸ್ಥಿತಿ ಬಂದಿದೆ. ನಮ್ಮವರ ತಪ್ಪಿನಿಂದ ನಾವೆಲ್ಲರೂ ಸೋಲುವಂತಾಯಿತು ಎಂದು ಹೇಳಿದ್ದಾರೆ.

ಕಾಂಗ್ರೆಸ್​ಗೆ ನನ್ನ ಅವಶ್ಯಕತೆ ಇಲ್ಲ. ಸೋತವರನ್ನು ತಗೊಂಡು ಏನು ಮಾಡುತ್ತಾರೆ. ಅವರು ನನ್ನನ್ನು ಆಹ್ವಾನ ಮಾಡಿಲ್ಲ ನಾನು ಕೇಳಿಲ್ಲ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಜೊತೆ ರಾಜಕೀಯ ಮೀರಿದ ಸ್ನೇಹ ಇದೆ. ನನಗೆ ಆತ್ಮವಿಶ್ವಾಸ ಇದೆ. ಲೋಕಸಭಾ ಚುನಾವಣೆ ಟಿಕೆಟ್​ ಸಿಗುತ್ತೆ ಅಂತಾ.

ಪ್ರಧಾನಿ ಮೋದಿ ಎಷ್ಟು ಮುಖ್ಯವೋ ಯಡಿಯೂರಪ್ಪ ಅಷ್ಟೇ ಮುಖ್ಯ

ನಾನು ಲೋಕಾಸಭಾ ಚುನಾವಣೆಯ ಪ್ರಬಲ ಆಕಾಂಕ್ಷಿ. ಪ್ರತಿ ಬೂತ್ ಮಟ್ಟದಲ್ಲಿ ಮೋದಿ‌ ಸಾಧನೆಯ ಕರಪತ್ರ ಹಂಚುವ ಕೆಲಸ ಮಾಡಿದ್ದೇವೆ‌. ರಾಜ್ಯದಲ್ಲಿ ನಾನು ಮಾಡಿದ ಕೆಲಸ ಯಾರು ಕೂಡ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಎಷ್ಟು ಮುಖ್ಯವೋ ಬಿಎಸ್​ ಯಡಿಯೂರಪ್ಪ ಕೂಡ ಅಷ್ಟೇ ಮುಖ್ಯ ಎಂದು ಹೇಳಿದರು.

ಇದನ್ನೂ ಓದಿ: ನನಗೆ ಬಿಜೆಪಿ ಹೈಕಮಾಂಡ್​​ನಿಂದ ಯಾವುದೇ ಕರೆ ಬಂದಿಲ್ಲ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟನೆ

ಕರ್ನಾಟಕ ರಾಜಕಾರಣವನ್ನು ಎಲ್ಲೋ ಕೂತು ಯಾರೋ ಕಂಟ್ರೋಲ್ ಮಾಡುತ್ತಿದ್ದಾರೆ. ಇದು ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಪರಿಣಾಮ ಬೀರುತ್ತದೆ. ರಾಜ್ಯಕ್ಕೆ ವರ್ಚಸ್ಸು ಇರುವ ನಾಯಕರು ಬೇಕು. ಯಡಿಯೂರಪ್ಪ ಅವರ ನಾಯಕತ್ವದಿಂದ ಮಾತ್ರ ಲೋಕಸಭಾ ಚುನಾವಣೆ ಗೆಲ್ಲಲು ಸಾಧ್ಯ. ಯಡಿಯೂರಪ್ಪ ನವರನ್ನು ಕಡೆಗಣಿಸಿ ಚುನಾವಣೆಗೆ ಹೋದರೆ ಬಹಳ ಕಷ್ಟ ಇದೆ ಎಂದು ತಿಳಿಸಿದರು.

ಇದನ್ನೂ ಓದಿ: ನಾನು ಕಾಂಗ್ರೆಸ್ ಸೇರುತ್ತೇನೆ ಅಂತಾ ಎಲ್ಲಿಯೂ ಹೇಳಿಲ್ಲ, ಅವರೂ ಸಹ ಆಹ್ವಾನ ನೀಡಿಲ್ಲ: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ

ನನಗೆ ಸಿಗುವ ಸಚಿವ ಸ್ಥಾನವನ್ನು ನಮ್ಮವರೇ ತಪ್ಪಿಸಿದ್ದಾರೆ‌. ನನಗೆ ಹಾಗೂ ಮಾಡಾಳ್ ವಿರೂಪಾಕ್ಷಪ್ಪಗೆ ಸಚಿವ ಸ್ಥಾನ ತಪ್ಪಿಸಿದ್ದರು. ಅದರ ಬಗ್ಗೆ ನನಗೆ ಬಹಳ ನೋವು ಇದೆ ಎಂದರು.

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ಮಾಜಿ‌ ಶಾಸಕ ಎಂಪಿ ರೇಣುಕಾಚಾರ್ಯ ಭೇಟಿ ಮಾಡಿದ್ದರು. ರಾಜಕೀಯವೇ ಬೇರೆ, ಪರಸ್ಪರ ವಿಶ್ವಾಸವೇ ಬೇರೆ. ಅವರೂ ಕೂಡ ನನ್ನನ್ನು ಪಕ್ಷ ಸೇರ್ಪಡೆ ಆಗುವಂತೆ ಆಹ್ವಾನ ನೀಡಿಲ್ಲ. ನಾನು ಕೂಡ ಕಾಂಗ್ರೆಸ್ ಸೇರುತ್ತೇನೆ ಅಂತಾ ಎಲ್ಲಿಯೂ ಹೇಳಿಲ್ಲ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ