AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡ ರಾತ್ರಿ ಬೈಕ್​ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ರೈತರಿಂದ ಲಕ್ಷಾಂತರ ರೂಪಾಯಿ ದೋಚಿದ ದುಷ್ಕರ್ಮಿಗಳು

ಇಬ್ಬರು ರೈತರು ಹೋಗುತ್ತಿದ್ದ ವೇಳೆ ಮತ್ತೊಂದು ಬೈಕ್​ನಲ್ಲಿ ಬಂದಿದ್ದ ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ರೈತರ ಬೈಕ್​ಗೆ ಅಡ್ಡ ಹಾಕಿದ್ದಾರೆ. ಅಷ್ಟರಲ್ಲಿ ಒಟ್ಟು ನಾಲ್ವರು ಅಲ್ಲಿ ಜಮಾಯಿಸಿದ್ದಾರೆ. ಅವರೆಲ್ಲ ಚಾಕು ತೊರಿಸಿ, ರೈತರನ್ನು ಹೆದರಿಸಿದ್ದಾರೆ. ಹಣ ದೋಚಿ ಪರಾರಿಯಾಗಿದ್ದಾರೆ.

ತಡ ರಾತ್ರಿ ಬೈಕ್​ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ರೈತರಿಂದ ಲಕ್ಷಾಂತರ ರೂಪಾಯಿ ದೋಚಿದ ದುಷ್ಕರ್ಮಿಗಳು
ತಡ ರಾತ್ರಿ ಬೈಕ್​ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ರೈತರಿಂದ ಲಕ್ಷಾಂತರ ರೂಪಾಯಿ ದೋಚಿದ ದುಷ್ಕರ್ಮಿಗಳು
TV9 Web
| Edited By: |

Updated on: Nov 18, 2021 | 9:25 AM

Share

ದಾವಣಗೆರೆ: ತಡ ರಾತ್ರಿ ಬೈಕ್​ ಅನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಸವಾರರ ಕಣ್ಣಿಗೆ ಖಾರದ ಪುಡಿ ಎರಚಿ ಲಕ್ಷಾಂತರ ರೂಪಾಯಿಯನ್ನು ದೋಚಿದ್ದಾರೆ. ಜಗದೀಶ್ (42) ವಿಶ್ವನಾಥ (31) ಹಣ ಕಳೆದುಕೊಂಡ ರೈತರು. ಇಬ್ಬರೂ ರೈತರು ವೀಳ್ಯದೆಲೆ ಮಾರಾಟ ಮಾಡಿ, ಗ್ರಾಮಕ್ಕೆ ವಾಪಸ್ಸಾಗುವಾಗ ತಡ ರಾತ್ರಿ ಈ ಘಟನೆ ನಡೆದಿದೆ. ಹರಿಹರ ತಾಲೂಕಿನ ಬೆಳ್ಳೂಡಿ- ರಾಮತೀರ್ಥ ಗ್ರಾಮಗಳ ನಡುವಿನ ಸೇತುವೆ ಮೇಲೆ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ರೈತರಿಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ 4.69 ಲಕ್ಷ ರೂಪಾಯಿ ದೋಚಿದ್ದಾರೆ.

ಇಬ್ಬರು ರೈತರು ಹೋಗುತ್ತಿದ್ದ ವೇಳೆ ಮತ್ತೊಂದು ಬೈಕ್​ನಲ್ಲಿ ಬಂದಿದ್ದ ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ರೈತರ ಬೈಕ್​ಗೆ ಅಡ್ಡ ಹಾಕಿದ್ದಾರೆ. ಅಷ್ಟರಲ್ಲಿ ಒಟ್ಟು ನಾಲ್ವರು ಅಲ್ಲಿ ಜಮಾಯಿಸಿದ್ದಾರೆ. ಅವರೆಲ್ಲ ಚಾಕು ತೊರಿಸಿ, ರೈತರನ್ನು ಹೆದರಿಸಿದ್ದಾರೆ. ರೈತರಿಬ್ಬರೂ ತೀವ್ರ ಪ್ರತಿರೋಧ ವ್ಯಕ್ತಪಡಿಸಿದಾಗ ಕಣ್ಣಿಗೆ ಖಾರದ ಪುಡಿ ಎರಚಿ, ಹಣ ದೋಚಿ ಪರಾರಿಯಾಗಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಶಾಲನಗರದ ಮೊಬೈಲ್ ಅಂಗಡಿಯಲ್ಲಿ ಲಕ್ಷಾಂತರ ರೂ. ಮೊಬೈಲ್​ಗಳ ಕಳವು: ರಾತ್ರಿ ವೇಳೆ ಮೇಲ್ಚಾವಣಿ ಕೊರೆದು ಮೊಬೈಲ್ ಅಂಗಡಿಯಲ್ಲಿ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನಲ್ಲಿ ನಡೆದಿದೆ. ಕುಶಾಲನಗರದ ಕೃಷ್ಣ ಮೊಬೈಲ್ ಅಂಗಡಿಯಲ್ಲಿ 1 ಲಕ್ಷ ರೂಪಾಯಿ ನಗದು, ಲಕ್ಷಾಂತರ ರೂ. ಮೌಲ್ಯದ ಮೊಬೈಲ್​ಗಳನ್ನು ಕಳವು ಮಾಡಲಾಗಿದೆ. ಕುಶಾಲನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಈ ಹಿಂದೆ ಮೈಸೂರು ಬೆಟ್ಟದ ಬಳಿ ಸುಮಾರು ದರೋಡೆ ಮಾಡಿದ್ವಿ, ಯಾರೂ ದೂರು ಕೊಡಲ್ಲ ಎಂಬ ಧೈರ್ಯವಿತ್ತು: ಆರೋಪಿಗಳು

(bike dacoity at harihara davanagere miscreants escaped with lakhs of rupees farmers riding bike)

ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ