ದಾವಣಗೆರೆ: ತಡ ರಾತ್ರಿ ಬೈಕ್ ಅನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಸವಾರರ ಕಣ್ಣಿಗೆ ಖಾರದ ಪುಡಿ ಎರಚಿ ಲಕ್ಷಾಂತರ ರೂಪಾಯಿಯನ್ನು ದೋಚಿದ್ದಾರೆ. ಜಗದೀಶ್ (42) ವಿಶ್ವನಾಥ (31) ಹಣ ಕಳೆದುಕೊಂಡ ರೈತರು. ಇಬ್ಬರೂ ರೈತರು ವೀಳ್ಯದೆಲೆ ಮಾರಾಟ ಮಾಡಿ, ಗ್ರಾಮಕ್ಕೆ ವಾಪಸ್ಸಾಗುವಾಗ ತಡ ರಾತ್ರಿ ಈ ಘಟನೆ ನಡೆದಿದೆ. ಹರಿಹರ ತಾಲೂಕಿನ ಬೆಳ್ಳೂಡಿ- ರಾಮತೀರ್ಥ ಗ್ರಾಮಗಳ ನಡುವಿನ ಸೇತುವೆ ಮೇಲೆ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ರೈತರಿಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ 4.69 ಲಕ್ಷ ರೂಪಾಯಿ ದೋಚಿದ್ದಾರೆ.
ಇಬ್ಬರು ರೈತರು ಹೋಗುತ್ತಿದ್ದ ವೇಳೆ ಮತ್ತೊಂದು ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ರೈತರ ಬೈಕ್ಗೆ ಅಡ್ಡ ಹಾಕಿದ್ದಾರೆ. ಅಷ್ಟರಲ್ಲಿ ಒಟ್ಟು ನಾಲ್ವರು ಅಲ್ಲಿ ಜಮಾಯಿಸಿದ್ದಾರೆ. ಅವರೆಲ್ಲ ಚಾಕು ತೊರಿಸಿ, ರೈತರನ್ನು ಹೆದರಿಸಿದ್ದಾರೆ. ರೈತರಿಬ್ಬರೂ ತೀವ್ರ ಪ್ರತಿರೋಧ ವ್ಯಕ್ತಪಡಿಸಿದಾಗ ಕಣ್ಣಿಗೆ ಖಾರದ ಪುಡಿ ಎರಚಿ, ಹಣ ದೋಚಿ ಪರಾರಿಯಾಗಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಶಾಲನಗರದ ಮೊಬೈಲ್ ಅಂಗಡಿಯಲ್ಲಿ ಲಕ್ಷಾಂತರ ರೂ. ಮೊಬೈಲ್ಗಳ ಕಳವು:
ರಾತ್ರಿ ವೇಳೆ ಮೇಲ್ಚಾವಣಿ ಕೊರೆದು ಮೊಬೈಲ್ ಅಂಗಡಿಯಲ್ಲಿ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನಲ್ಲಿ ನಡೆದಿದೆ. ಕುಶಾಲನಗರದ ಕೃಷ್ಣ ಮೊಬೈಲ್ ಅಂಗಡಿಯಲ್ಲಿ 1 ಲಕ್ಷ ರೂಪಾಯಿ ನಗದು, ಲಕ್ಷಾಂತರ ರೂ. ಮೌಲ್ಯದ ಮೊಬೈಲ್ಗಳನ್ನು ಕಳವು ಮಾಡಲಾಗಿದೆ. ಕುಶಾಲನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
ಈ ಹಿಂದೆ ಮೈಸೂರು ಬೆಟ್ಟದ ಬಳಿ ಸುಮಾರು ದರೋಡೆ ಮಾಡಿದ್ವಿ, ಯಾರೂ ದೂರು ಕೊಡಲ್ಲ ಎಂಬ ಧೈರ್ಯವಿತ್ತು: ಆರೋಪಿಗಳು
(bike dacoity at harihara davanagere miscreants escaped with lakhs of rupees farmers riding bike)