ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ಬ್ಯಾಂಕಿಂಗ್ ಕ್ಷೇತ್ರದಲ್ಲಿ 2014ರ ನಂತರ ಮಹತ್ವದ, ಕ್ರಾಂತಿಕಾರಕ ಬದಲಾವಣೆಗಳು ಆಗಿವೆ. ಠೇವಣಿದಾರರ ಹಿತಕ್ಕಾಗಿ ಹಲವು ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ರಾಜೀವ್ ಚಂದ್ರಶೇಖರ್ ಹೇಳಿದರು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್
ರಾಜೀವ್ ಚಂದ್ರಶೇಖರ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 12, 2021 | 7:06 PM

ದಾವಣಗೆರೆ: ಬ್ಯಾಂಕಿಂಗ್ ಕ್ಷೇತ್ರದಲ್ಲಿ 2014ರ ನಂತರ ಮಹತ್ವದ, ಕ್ರಾಂತಿಕಾರಕ ಬದಲಾವಣೆಗಳು ಆಗಿವೆ. ಠೇವಣಿದಾರರ ಹಿತಕ್ಕಾಗಿ ಹಲವು ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಎಲ್ಲ ವಾಣಿಜ್ಯ ಬ್ಯಾಂಕ್​ಗಳಲ್ಲಿಯೂ ಕ್ರಾಂತಿಕಾರಕ ಬದಲಾವಣೆಗಳು ಆಗಿವೆ, ಆರ್ಥಿಕ ಸ್ಥಿರತೆ ಸಾಧ್ಯವಾಗಿದೆ ಎಂದು ಕೇಂದ್ರ ವಾಣಿಜ್ಯೋದ್ಯಮ, ಕೌಶಲ್ಯ ಅಭಿವೃದ್ಧಿ, ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ (Rajeev Chandrasekhar) ಹೇಳಿದರು.

ನಗರದಲ್ಲಿ ಭಾನುವಾರ (ಡಿ.12) ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 7 ರಾಜ್ಯಗಳ 16 ಪಟ್ಟಣ ಸಹಕಾರ ಬ್ಯಾಂಕ್​ಗಳ ಫಲಾನುಭವಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ವರ್ಚುವಲ್‌ ಸಂವಾದಲ್ಲಿ ಅವರು ಪಾಲ್ಗೊಂಡರು. ಠೇವಣಿದಾರರು ಬ್ಯಾಂಕಿಂಗ್ ವ್ಯವಸ್ಥೆಯ ಪ್ರಮುಖ ಪಾಲುದಾರರು. ಅವರ ಹಿತರಕ್ಷಣೆ ಕೇಂದ್ರ ಸರ್ಕಾರವು ಸಾಕಷ್ಟು ಸುಧಾರಣಾ ಕ್ರಮಗಳನ್ನು ಘೋಷಿಸಿದೆ. ವಿಮಾ‌ ಪರಿಹಾರವನ್ನು ₹ 1 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಠೇವಣಿದಾರರ ಹಿತಾಸಕ್ತಿ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ಮಿಲ್ಲತ್ ಬ್ಯಾಂಕ್​ನಲ್ಲಿ ಇರಿಸಿದ್ದ ₹ 15 ಠೇವಣಿ ಮೊತ್ತದಲ್ಲಿ ₹ 9 ಲಕ್ಷ ಬಂದಿದೆ. ಬಾಕಿ ₹ 4 ಲಕ್ಷ ಕೊಡಿಸಿ ಎಂದು ಹಲವು ಗ್ರಾಹಕರು ಮನವಿ ಮಾಡಿದರು. ರಿಸರ್ವ್​ ಬ್ಯಾಂಕ್​ನಿಂದ ಗ್ರಾಹಕರಿಗೆ ಮೇಸಜ್ ಬಂದು ಡಿಪಾಸಿಟ್ ಹಣ ವಾಪಸ್ಸು ಬರುತ್ತಿದೆ ಎಂದು ವಿವರಿಸಿದರು. ಐವರು ಗ್ರಾಹಕರೊಂದಿಗೆ ಸಚಿವರು ಸಂವಾದ ನಡೆಸಿದರು.

ಸಹಕಾರ ಬ್ಯಾಂಕಿಂಗ್ ಕ್ಷೇತ್ರದ ಗಣ್ಯರೊಂದಿಗೆ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಡೆಪಾಸಿಟ್ ಇನ್ಷುರೆನ್ಸ್ ಅಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆಯ ಬಗ್ಗೆ ಚರ್ಚಿಸಿದರು. ದಾವಣಗೆರೆಯ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗಿತ್ತು. ದಾವಣಗೆರೆ, ಬೆಂಗಳೂರು, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ವಿವಿಧ ರಾಜ್ಯಗಳ ಮುಂಬೈ, ಸೂರತ್, ಆಡೂರು, ಕಾನ್ಪುರ್ ಸೇರಿ‌ ವಿವಿಧ ಜಿಲ್ಲೆಯವರು‌ ವರ್ಚುಯಲ್ ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಕರ್ನಾಟಕದ ಜಿಲ್ಲೆಗಳಲ್ಲಿ ಇಂಟರ್​ನೆಟ್​ ವೇಗ, ಸಂಪರ್ಕಕ್ಕೆ ಕಾರ್ಯಪಡೆ: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇದನ್ನೂ ಓದಿ: ಬಿಜೆಪಿ ಸರ್ಕಾರ ಭಾರತದ ಬ್ಯಾಂಕಿಂಗ್ ಇತಿಹಾಸದಲ್ಲಿ ಐತಿಹಾಸಿಕ ನಿರ್ಣಯ ಕೈಗೊಂಡಿದೆ: ಪ್ರಲ್ಹಾದ್ ಜೋಶಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್