AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಬಿಪಿ ಹರೀಶ್​ಗೆ ನಿರೀಕ್ಷಣಾ ಜಾಮೀನು ಮಂಜೂರು

ಜಾತಿ ನಿಂದನೆ ಪ್ರಕರಣ ಎದುರಿಸುತ್ತಿದ್ದ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್​ಗೆ ದಾವಣಗೆರೆಯ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಬಿಪಿ ಹರೀಶ್​ಗೆ ನಿರೀಕ್ಷಣಾ ಜಾಮೀನು ಮಂಜೂರು
ಬಿಜೆಪಿ ಶಾಸಕ ಬಿ.ಪಿ.ಹರೀಶ್
Follow us
ಗಂಗಾಧರ​ ಬ. ಸಾಬೋಜಿ
|

Updated on:May 31, 2023 | 10:43 PM

ದಾವಣಗೆರೆ: ಜಾತಿ ನಿಂದನೆ ಪ್ರಕರಣ ಎದುರಿಸುತ್ತಿದ್ದ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್​ (BP Harish) ಗೆ ದಾವಣಗೆರೆಯ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಹರೀಶ್,​ ‘ಅಪ್ಪನಿಗೆ ಹುಟ್ಟಿದ ಮಾದಿಗರು ಮಾತ್ರ ಬಿಜೆಪಿಗೆ ಮತ ಹಾಕಿದ್ದಾರೆ’ ಎಂದಿದ್ದರು. ಈ ಹಿನ್ನೆಲೆ ಅವರ ವಿರುದ್ಧ ಹರಿಹರ ಠಾಣೆಯಲ್ಲಿ ಜಾತಿ ನಿಂದನೆ ಆರೋಪದಡಿ ಮಾದಿಗ ಸಮುದಾಯ ದೂರು ದಾಖಲಿಸಿತ್ತು.

ಮಾದಿಗ ಸಮುದಾಯಕ್ಕೆ ಬಿಜೆಪಿ ಸರ್ಕಾರ ಒಳಮೀಸಲಾತಿ ನೀಡಿದೆ. ಆದರೆ ಮಾದಿಗರು ಬಿಜೆಪಿಗೆ ಮತ ಹಾಕಿಲ್ಲವೆಂದು ಹರೀಶ್ ವಾಗ್ದಾಳಿ ಮಾಡಿದ್ದರು. ಬಿ.ಪಿ.ಹರೀಶ್ ನೀಡಿದ್ದ ಅವಹೇಳನಕಾರಿ ಹೇಳಿಕೆ ವೈರಲ್ ಆಗಿತ್ತು. 7 ಬಾರಿ ಚುನಾವಣೆಗೆ ಸ್ಪರ್ಧಿಸಿರುವ ಬಿ.ಪಿ.ಹರೀಶ್, 2 ಬಾರಿ ಗೆದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ಜಾತಿನಿಂದನೆ ಆರೋಪ: ಎಫ್​ಐಆರ್​ ದಾಖಲು

ಹರೀಶ್ ಪೂಂಜಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಕಾಂಗ್ರೆಸ್​

ಮಂಗಳೂರು: ಸಿಎಂ ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮಾನನಷ್ಟ  ಮೊಕದ್ದಮೆ ದಾಖಲಿಸಲು ಕಾಂಗ್ರೆಸ್​​ ನಿರ್ಧರಿಸಿದೆ. ಇದೇ ತಿಂಗಳ 22ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಹರೀಶ್ ಪೂಂಜಾ, 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ತುಳುವಿನಲ್ಲಿ‌ ಹೇಳಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಕೂಡ ವೈರಲ್​ ಆಗಿತ್ತು.

ಇದನ್ನೂ ಓದಿ: ಶಾಸಕ ಗೂಳಿಹಟ್ಟಿ ಶೇಖರ್​ಗೆ ಸೇರಿದ 8 ಕೋಟಿ ಮೌಲ್ಯದ ಸೈಟ್​ ಅನ್ಯರ ಪಾಲು, 8 ಜನರ ವಿರುದ್ಧ ಎಫ್​ಐಆರ್

ಮಹಿಳಾ ಕಾಂಗ್ರೆಸ್​ ಕಾರ್ಯಕರ್ತೆ ನಮಿತಾ ಪೂಜಾರಿ ನೀಡಿದ ದೂರಿನ ಆಧಾರದ ಮೇಲೆ ಬುಧವಾರ ಬೆಳ್ತಂಗಡಿ ಪೊಲೀಸ್​​ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್​ಐಆರ್​ ಕೂಡ ದಾಖಲಾಗಿತ್ತು.

ಚುನಾವಣೆ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸರನ್ನು ಪೂಂಜಾ ಬುಕ್ ಮಾಡಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಈಗ ನಮ್ಮ ಸರ್ಕಾರ ಇರುವುದರಿಂದ ಪೂಂಜಾ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:33 pm, Wed, 31 May 23