ತುಂಗಭದ್ರಾ ನದಿಯಲ್ಲಿ ತೇಲಿಬಂದ ಅಪರಿಚಿತ ವ್ಯಕ್ತಿಯ ಮೃತದೇಹ: ಆಕಸ್ಮಿಕವಾಗಿ ನೀರಿಗೆ ಬಿದ್ದಿರುವ ಶಂಕೆ
ಓರ್ವ ಅಪರಿಚಿತ ಪುರುಷ ಮೃತದೇಹ ಜಿಲ್ಲೆಯ ಹರಿಹರದ ರಾಘವೇಂದ್ರ ಮಠದ ಬಳಿ ಪತ್ತೆ ಆಗಿದೆ. ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆ ಮೃತದೇಹ ತೇಲಿ ಬಂದಿದೆ. ಹರಿಹರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ, ಜುಲೈ 23: ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆ ಓರ್ವ ಅಪರಿಚಿತ ಪುರುಷ ಮೃತದೇಹ (dead body found) ತೇಲಿಬಂದಿರುವಂತಹ ಘಟನೆ ಜಿಲ್ಲೆಯ ಹರಿಹರದ ರಾಘವೇಂದ್ರ ಮಠದ ಬಳಿ ಶವ ಪತ್ತೆ ಆಗಿದೆ. ಮೃತ ವ್ಯಕ್ತಿ ಆಕಸ್ಮಿಕವಾಗಿ ತುಂಗಭದ್ರಾ ನದಿಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಹರಿಹರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನಾಪತ್ತೆ
ತುಮಕೂರು: ಕಳೆದ ರಾತ್ರಿ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯವಕರು ನಾಪತ್ತೆಯಾಗಿರುವಂತಹ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಗ್ರಾಮದ ಬಳಿ ನಡೆದಿದೆ. ಹರೀಶ್(31), ಯೋಗೀಶ್(36) ಕಣ್ಮರೆ ಆದವರು. ಮೀನುಗಾರರು ಗುಬ್ಬಿ ತಾಲೂಕಿನ ಆಡುಗೊಂಡನಹಳ್ಳಿ ನಿವಾಸಿಗಳಾಗಿದ್ದು, ಕೆರೆಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ತಿಂದ ಮನೆಗೆ ಕನ್ನ ಹಾಕಿದ್ದ ಖದೀಮರು ಕೊನೆಗೂ ಅಂದರ್: ಶ್ರೀಮಂತರಾಗಲು ಹೀಗಾ ಮಾಡೋದು
ಗುಬ್ಬಿ ಠಾಣೆಯ ಪೊಲೀಸರಿಂದ ಶೋಧ ಕಾರ್ಯ ಆರಂಭಿಸಿದ್ದು, ಕೆರೆಯ ಬಳಿ ನೂರಾರು ಜನರು ಜಮಾಯಿಸಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪಾದಚಾರಿಗೆ ಖಾಸಗಿ ಬಸ್ ಡಿಕ್ಕಿ, ಸ್ಥಳದಲ್ಲೇ ಸಾವು
ಹುಬ್ಬಳ್ಳಿ: ರೈಲ್ವೆ ಕಲ್ಯಾಣ ಕೇಂದ್ರದ ಬಳಿ ಖಾಸಗಿ ಬಸ್ ಡಿಕ್ಕಿಯಾಗಿ ಪಾದಚಾರಿ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಜಾಕೋಬ್ ಪ್ರಭುದಾಸ್(49) ಮೃತ ವ್ಯಕ್ತಿ. ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಪುತ್ರನ ಬರ್ತಡೇ ಸಂಭ್ರಮದಲ್ಲಿದ್ದ ತಂದೆಯ ಹತ್ಯೆ! ಆರೋಪಿಗಳು ಅರೆಸ್ಟ್; ಕೊಲೆಗೆ ಕಾರಣ ಬಾಯ್ಬಿಟ್ಟ ಹಂತಕರು
ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ನಿಡಗೋಡು ಬಳಿ ಮರದ ಕೊಂಬೆ ತಗುಲಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಟಿಪ್ಪರ್‌ಗೆ ದಾರಿ ಬಿಡುವ ವೇಳೆ ಬಸ್ನ ಹಿಂಭಾಗ ಮರಕ್ಕೆ ಡಿಕ್ಕಿ ಹೊಡೆದಿದ್ದು, ಚಾಲಕನ ಅಜಾಗರೂಕತೆಯಿಂದ ಮರದ ಕೊಂಬೆ ಬಸ್ಗೆ ತಗುಲಿದೆ.
ಮರಗಳನ್ನು ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ಬಾರಿ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ. ರಸ್ತೆ ಬಂದ್ ಮಾಡಿ ತೆರವು ಮಾಡುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.