ಪರಿಷತ್ ಚುನಾವಣೆ: ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ- ಬಿಎಸ್ ಯಡಿಯೂರಪ್ಪ ಹೇಳಿಕೆ

| Updated By: ganapathi bhat

Updated on: Nov 24, 2021 | 5:19 PM

BD Yediyurappa: ಜೆಡಿಎಸ್ ಜೊತೆ ಹೊಂದಾಣಿಕೆ ಬಗ್ಗೆ ಇಷ್ಟರಲ್ಲಿಯೇ ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಪರೋಕ್ಷವಾಗಿ ಜೆಡಿಎಸ್ ಜೊತೆ ಹೊಂದಾಣಿಕೆ ವಿಚಾರವನ್ನು ಒಪ್ಪಿಕೊಂಡಿದ್ದಾರೆ.

ಪರಿಷತ್ ಚುನಾವಣೆ: ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ- ಬಿಎಸ್ ಯಡಿಯೂರಪ್ಪ ಹೇಳಿಕೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us on

ದಾವಣಗೆರೆ: ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಮಾಡುತ್ತೇವೆ. ಪರಸ್ಪರ ಸಹಕಾರ ಕೊಡಿ ಎಂದು ಅವರಲ್ಲಿ ಕೇಳುತ್ತೇವೆ ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ನವೆಂಬರ್ 24) ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಜೆಡಿಎಸ್ ಜೊತೆ ಚರ್ಚಿಸುವುದಾಗಿ ಬಿಎಸ್‌ವೈ ತಿಳಿಸಿದ್ದಾರೆ.

ಜೆಡಿಎಸ್ ಜೊತೆ ಹೊಂದಾಣಿಕೆ ಬಗ್ಗೆ ಇಷ್ಟರಲ್ಲಿಯೇ ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಪರೋಕ್ಷವಾಗಿ ಜೆಡಿಎಸ್ ಜೊತೆ ಹೊಂದಾಣಿಕೆ ವಿಚಾರವನ್ನು ಒಪ್ಪಿಕೊಂಡಿದ್ದಾರೆ. ಸಂತೆಬೆನ್ನೂರಿನಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಬಿಎಸ್ ಯಡಿಯೂರಪ್ಪ ಈ ಹೇಳಿಕೆ ನೀಡಿದ್ದಾರೆ.

ಪರಸ್ಪರ ಸಹಕಾರ ಕೊಡಿ ಎಂದು ಅವರಲ್ಲಿ ಕೇಳುತ್ತೇವೆ. ವಿಧಾನ ಪರಿಷತ್ ಚುನಾವಣೆಯಿಂದ ಎರಡನೇ ಸುತ್ತಿನ ಪ್ರಚಾರ ಶುರುವಾಗಿದೆ. ರಾಜ್ಯದಲ್ಲಿ ಕೇವಲ 20 ಸೀಟ್​ಗಳಿಗೆ ನಿಶ್ಚಿತವಾಗಿ ಸ್ಪರ್ಧೆ ಮಾಡುತ್ತೇವೆ. ಇದರಲ್ಲಿ 15 ಸೀಟ್ ಗೆದ್ದೇ ಗೆಲ್ಲುತ್ತೇವೆ. ವಿಧಾನ ಪರಿಷತ್​ನಲ್ಲಿ ಸ್ಪಷ್ಟ ಬಹುಮತ ಸಿಗಲಿ ಎಂದು ಅಪೇಕ್ಷೆ. ಬಿಜೆಪಿ ಪರ ವಾತಾವರಣ ಎಲ್ಲಾ ಕಡೆ ಇದೆ. ಅದ್ದರಿಂದ ಎಲ್ಲಾ ಕಡೆ ಪ್ರವಾಸ ಶುರು ಮಾಡಿದ್ದೇವೆ. ಶಾಸಕರು ಕೂಡ ನಮ್ಮವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಕಾಂಗ್ರೆಸ್ ಪಕ್ಷ ದಯನೀಯ ಸ್ಥಿತಿಯಲ್ಲಿದೆ. ರಾಜ್ಯದಲ್ಲೂ ಕಾಂಗ್ರೆಸ್​ ಪಕ್ಷ ಸ್ವಲ್ಪ ಉಸಿರಾಡುತ್ತಿದೆ. ಈ ಉಸಿರು ನಿಲ್ಲಿಸಬೇಕಾದರೆ ಬಿಜೆಪಿಯನ್ನು ಬೆಂಬಲಿಸಿ ಎಂದು ಸಂತೆಬೆನ್ನೂರಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಉಚಿತ ಪಡಿತರ ನೀಡಲು ನಿರ್ಧರಿಸಿದೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆ: ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರುವ ಅನುಮಾನವಿದೆ: ಜಿ ಪರಮೇಶ್ವರ್

ಇದನ್ನೂ ಓದಿ: ಕಾಂಗ್ರೆಸ್ ಸಾಗರದಷ್ಟು ಬೆಳೆದಿದ್ದರೂ ಯಾರಿಗೂ ಉಪಯೋಗವಿಲ್ಲ: ಬಿಎಸ್ ಯಡಿಯೂರಪ್ಪ

Published On - 4:43 pm, Wed, 24 November 21